Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್...

2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ : ಮುಖ್ಯಮಂತ್ರಿ

‘ಬೆಂಗಳೂರು ಕೌಶಲ್ಯ ಶೃಂಗಸಭೆ-2026’

ವಾರ್ತಾಭಾರತಿವಾರ್ತಾಭಾರತಿ4 Nov 2026 10:07 PM IST
share
2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ : ಮುಖ್ಯಮಂತ್ರಿ

ಬೆಂಗಳೂರು : ಕರ್ನಾಟಕವು 2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ಸಾಗುತ್ತಿದೆ. ಆದರೆ ಬಂಡವಾಳವೊಂದೇ ಈ ಭವಿಷ್ಯವನ್ನು ನಿರ್ಮಿಸಲಾರದು. ಅದನ್ನು ನಿರ್ಮಿಸೋದಕ್ಕೆ ಕೌಶಲ್ಯ ಹೊಂದಿದ ಮಾನವ ಸಂಪನ್ಮೂಲ ಅತ್ಯಗತ್ಯ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬುಧವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ರಾಜ್ಯ ಸರಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕರ್ನಾಟಕ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿರುವ ‘ಬೆಂಗಳೂರು ಕೌಶಲ್ಯ ಶೃಂಗಸಭೆ-2026’ರ ಎರಡನೆ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.

13,940 ವೈದ್ಯರನ್ನು ಕರ್ನಾಟಕ ತಯಾರು ಮಾಡುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಇತರೇ ದೇಶಗಳಿಗಿಂತ ಸಾಕಷ್ಟು ಮುಂದಿದ್ದೇವೆ. ಕರ್ನಾಟಕದ ಜನಸಂಖ್ಯೆಯ ಶೇ. 65ರಷ್ಟು ಮಂದಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ನಾವು ಹೊಂದಿರುವ ಯುವಜನರು ಜನಸಂಖ್ಯೆಯ ಅನುಕೂಲದ ಜೊತೆಗೆ ನಮ್ಮ ಅತ್ಯಂತ ದೊಡ್ಡ ಜವಾಬ್ದಾರಿಯೂ ಹೌದು ಎಂದು ಅವರು ತಿಳಿಸಿದರು.

ನಮ್ಮ ಗುರಿ ಕೇವಲ ಉದ್ಯೋಗ ಹುಡುಕುವವರನ್ನು ಸೃಷ್ಟಿಸುವುದಲ್ಲ. ಉದ್ದಿಮೆ ಪ್ರಾರಂಭ ಮಾಡುವವರನ್ನು, ಭವಿಷ್ಯ ರೂಪಿಸುವವರನ್ನು, ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬಲ್ಲ ಯುವಜನರನ್ನು ರೂಪಿಸುವುದು ನಮ್ಮ ಗುರಿ. ಕರ್ನಾಟಕದಲ್ಲಿ ಈಗಾಗಲೇ ಸುಮಾರು 550 ಜಾಗತಿಕ ಸಾಮಥ್ರ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು.

2029ರ ವೇಳೆಗೆ ಸುಮಾರು 500 ಹೊಸ ಕೇಂದ್ರಗಳು ಮತ್ತು 3.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿದ್ದೇವೆ. ಈ ಅವಕಾಶಗಳು ಬರುವ ಮೊದಲೇ ನಮ್ಮ ಕೌಶಲ್ಯಾಭಿವೃದ್ಧಿ ವ್ಯವಸ್ಥೆಯನ್ನು ನಾವು ತಯಾರು ಮಾಡುತ್ತಿದ್ದೇವೆ. ನಮ್ಮ ಯುವಜನರನ್ನು ಕೇವಲ ಉದ್ಯೋಗಗಳಿಗಾಗಿ ಸಿದ್ಧಪಡಿಸುತ್ತಿಲ್ಲ. ನಾಳಿನ ಜಗತ್ತಿಗಾಗಿ ಸಿದ್ಧಪಡಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ನಮ್ಮ ಸರಕಾರವು ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನೀತಿ 2025-32ರ ಮೂಲಕ ಬಲವಾದ ಅಡಿಪಾಯ ಹಾಕಿದೆ. ಈ ನೀತಿಯು ಕರ್ನಾಟಕದ ಕೌಶಲ್ಯಾಭಿವೃದ್ಧಿ ಪ್ರಯತ್ನಗಳನ್ನು ಒಂದೇ ಸಮಗ್ರ ವ್ಯವಸ್ಥೆಯಡಿ ತರುತ್ತದೆ. ಮುಂದಿನ ಏಳು ವರ್ಷಗಳಲ್ಲಿ ಸುಮಾರು 30 ಲಕ್ಷ ಫಲಾನುಭವಿಗಳನ್ನು ತಲುಪುವುದು ನಮ್ಮ ಉದ್ದೇಶ. ಇದಕ್ಕಾಗಿ ಅಂದಾಜು 5 ಸಾವಿರ ಕೋಟಿ ರೂ. ಹೂಡಿಕೆ ಮಾಡುವ ಉದ್ದೇಶ ನಮ್ಮದು ಎಂದು ಶಿವಕುಮಾರ್ ಹೇಳಿದರು.

ಬಲಿಷ್ಠ ಸಂಸ್ಥೆಗಳು, ಆಕರ್ಷಕ ವೃತ್ತಿಪರ ಶಿಕ್ಷಣ, ಸಾಂಪ್ರದಾಯಿಕ ಕೌಶಲ್ಯಗಳು, ಧೀರ್ಘಕಾಲದ ಕಲಿಕೆ, ಭವಿಷ್ಯದ ಕೌಶಲ್ಯಗಳು, ಗುಣಮಟ್ಟ ಮತ್ತು ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ. ವೃತ್ತಿಪರ ಕೌಶಲ್ಯ ಶಿಕ್ಷಣವು ನಮ್ಮ ಯುವಜನರ ಮೊದಲ ಆಯ್ಕೆಯಾಗಬೇಕು. ಬೇರೆ ದಾರಿ ಇಲ್ಲದಾಗ ಆಯ್ಕೆ ಮಾಡುವ ಪರ್ಯಾಯವಾಗಬಾರದು ಎಂದು ಅವರು ತಿಳಿಸಿದರು.

ಸುಬ್ರತೋ ಬಾಗ್ಚಿ ಅವರಿಗೆ ಕೌಶಲ್ಯಾಭಿವೃದ್ಧಿ ವಿಷನ್ ಗ್ರೂಪ್ ಅಧ್ಯಕ್ಷತೆ: ಕರ್ನಾಟಕದ ಕೌಶಲ್ಯಾಭಿವೃದ್ಧಿಯ ಭವಿಷ್ಯಕ್ಕೆ ಮಾರ್ಗದರ್ಶನ ನೀಡಲು ನಮ್ಮ ಸರಕಾರವು ಕೌಶಲ್ಯಾಭಿವೃದ್ಧಿ ವಿಷನ್ ಗ್ರೂಪ್ ಅನ್ನು ರಚಿಸಿದೆ. ಮೈಂಡ್‍ಟ್ರೀ ಸಂಸ್ಥೆಯ ಸಹ-ಸ್ಥಾಪಕ ಸುಬ್ರೋತೋ ಬಾಗ್ಚಿ ಅವರು ಈ ಮಹತ್ವದ ಸಮಿತಿಯ ಅಧ್ಯಕ್ಷತೆ ವಹಿಸಲು ಒಪ್ಪಿಕೊಂಡಿರುವುದು ನನಗೆ ಸಂತೋಷ ತಂದಿದೆ ಎಂದು ಅವರು ಅಭಿನಂದನೆಗಳನ್ನು ತಿಳಿಸಿದರು.

ಉದ್ಯಮ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರದ ಅನೇಕ ಗಣ್ಯರು ಈ ಸಮಿತಿಯಲ್ಲಿ ಅವರೊಂದಿಗೆ ಕೈಜೋಡಿಸಿದ್ದಾರೆ. ಬಾಗ್ಚಿ ಅವರು ಅಪಾರ ಅನುಭವ ಹೊಂದಿರುವ ಪ್ರತಿಭಾವಂತರು. ಒಡಿಶಾದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ನಾಯಕತ್ವ ನೀಡಿ, ಬಲಿಷ್ಠ ಸಂಸ್ಥೆಗಳನ್ನು ನಿರ್ಮಿಸಿ, ಆ ರಾಜ್ಯದ ಯುವಜನರಿಗೆ ನೆರವಾಗಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಕರ್ನಾಟಕ ಮಾದರಿ: ನಾವು ಯಾವುದೋ ಮಾದರಿಯನ್ನು ಅನುಕರಿಸಲು ಬಂದಿಲ್ಲ. ಇತರರು ಅಧ್ಯಯನ ಮಾಡಲು ಬಯಸುವ ಕರ್ನಾಟಕದ ಸ್ವಂತ ಮಾದರಿಯನ್ನು ನಿರ್ಮಿಸಲು ಬಯಸುತ್ತೇವೆ. ವಿಷನ್ ಗ್ರೂಪ್ ನಮ್ಮ ಯುವಜನರು ಕರ್ನಾಟಕದಲ್ಲಿ, ಭಾರತದಲ್ಲಿ ಮತ್ತು ಜಗತ್ತಿನಾದ್ಯಂತ ನಾಳೆಯ ಉದ್ಯೋಗಗಳಿಗೆ ಸಿದ್ಧರಾಗುವಂತೆ ದೂರದೃಷ್ಟಿಯೊಂದಿಗೆ ಮಾರ್ಗದರ್ಶನ ನೀಡಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಏಳು ವರ್ಷಗಳಲ್ಲಿ 7 ಲಕ್ಷ ತರಬೇತಿ ಗುರಿ: ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ 2.0 ಅಡಿಯಲ್ಲಿ ತರಬೇತಿ, ಹಿಂದಿನ ಕಲಿಕೆಯ ಮಾನ್ಯತೆ ವಿಶೇಷ ಯೋಜನೆಗಳು, ಉದ್ಯೋಗ ನಿಯೋಜನೆ ನೆರವು ಮತ್ತು ಡಿಜಿಟಲ್ ಆಡಳಿತವನ್ನು ಒಂದೇ ಚೌಕಟ್ಟಿನಡಿ ತರಲಾಗಿದೆ. ಈ ಯೋಜನೆಯಡಿ ಏಳು ವರ್ಷಗಳಲ್ಲಿ 7 ಲಕ್ಷ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಇದರಲ್ಲಿ ಪ್ರತಿ ವರ್ಷ ಸುಮಾರು 75 ಸಾವಿರ ಅಭ್ಯರ್ಥಿಗಳಿಗೆ ಅಲ್ಪಾವಧಿ ತರಬೇತಿ ನೀಡಲಾಗುವುದು ಎಂದು ಅವರು ನುಡಿದರು.

ಬೆಂಗಳೂರಿನ ಹೊರಗಡೆ ಉದ್ಯೋಗ ಸೃಷ್ಟಿ ಮಾಡಿದರೆ. ಆ ಉದ್ದಿಮೆಗಳಿಗೆ ಪ್ರತಿ ಉದ್ಯೋಗ ಸೃಷ್ಟಿಗೆ 2,500 ರೂ.ಗಳನ್ನು ಪ್ರತಿ ತಿಂಗಳು ನೀಡುತ್ತೇವೆ. ಪ್ರತಿ ಹಳ್ಳಿಯಲ್ಲೂ ಪ್ರತಿಭೆಗಳಿದ್ದಾರೆ. ಅವರನ್ನು ನಾವು ಗುರುತಿಸಿ ಬೆಳೆಸಬೇಕು. ‘ನನ್ನ ವೃತ್ತಿ, ನನ್ನ ಆಯ್ಕೆ’ ಯೋಜನೆಯ ಮೂಲಕ ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನದ ಬಗ್ಗೆ ತಿಳಿದುಕೊಂಡು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ನೆರವಾಗುತ್ತಿದ್ದೇವೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಸುಭೋದ್ ಯಾದವ್, ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ(ಕಾಂತಾ)ನಾಯ್ಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

‘ಯುವ ಉದ್ಯೋಗ ಸೇತು’ ವೇದಿಕೆಗೆ ಚಾಲನೆ: ರಾಜ್ಯ ಸರಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ರಾಜ್ಯದ ನಿರುದ್ಯೋಗಿ ಯುವಜನರಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವುದು, ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸಲು ಹಾಗೂ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ತರಬೇತಿ ಒದಗಿಸುವ ಮುಖ್ಯ ಉದ್ದೇಶ ಹೊಂದಿರುವ ‘ಯುವ ಉದ್ಯೋಗ ಸೇತು’ ವೇದಿಕೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X