Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 226 ತಾಲ್ಲೂಕುಗಳು ಬರಪೀಡಿತ; 60 ಸಾವಿರ...

226 ತಾಲ್ಲೂಕುಗಳು ಬರಪೀಡಿತ; 60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಿಸಿಎಂ ಜಿ.ಪರಮೇಶ್ವರ್‌

"ಬರ ನಷ್ಟದ ಅಂತಿಮ ವರದಿ ಸಿದ್ಧತೆಗೆ ವೇಗ : ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಿದ್ಧತೆ"

ವಾರ್ತಾಭಾರತಿವಾರ್ತಾಭಾರತಿ15 Oct 2026 6:11 PM IST
share
226 ತಾಲ್ಲೂಕುಗಳು ಬರಪೀಡಿತ; 60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಿಸಿಎಂ ಜಿ.ಪರಮೇಶ್ವರ್‌

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ಒಂಬತ್ತು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಇದರೊಂದಿಗೆ ಒಟ್ಟು 226 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಬರದಿಂದ ಉಂಟಾಗಿರುವ ನಷ್ಟದ ಕುರಿತು ಅಂತಿಮ ಮನವಿಪತ್ರ (ಮೆಮೊರಾಂಡಮ್) ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ 217 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿತ್ತು. ಇದೀಗ ಮತ್ತೆ ಒಂಬತ್ತು ತಾಲ್ಲೂಕುಗಳನ್ನು ಸೇರ್ಪಡೆಗೊಳಿಸಿರುವುದರಿಂದ ಒಟ್ಟು ಸಂಖ್ಯೆ 226ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಉಳಿದ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದ್ದು, ಟ್ರಿಗರ್-1 ಮಾನದಂಡಗಳಡಿ ಅರ್ಹತೆ ಪಡೆದ ತಾಲ್ಲೂಕುಗಳನ್ನು ಗ್ರೌಂಡ್ ಟ್ರೂಥಿಂಗ್ ಪ್ರಕ್ರಿಯೆಗೆ ಒಳಪಡಿಸಲಾಗುವುದು. ಈ ಪ್ರಕ್ರಿಯೆಯಲ್ಲಿ ಅರ್ಹತೆ ಕಂಡುಬಂದರೆ ಮತ್ತಷ್ಟು ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲವಾದಲ್ಲಿ ಪ್ರಸ್ತುತ ಘೋಷಿಸಿರುವ 226 ತಾಲ್ಲೂಕುಗಳ ಪಟ್ಟಿಯೇ ಅಂತಿಮವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರಕ್ಕೆ ಅಂತಿಮ ಮನವಿಪತ್ರ ಸಲ್ಲಿಸಲು ಸರ್ವಪಕ್ಷ ನಿಯೋಗ

ಬರದಿಂದ ಉಂಟಾಗಿರುವ ನಷ್ಟದ ಕುರಿತು ಅಂತಿಮ ಮನವಿಪತ್ರವನ್ನು ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಮನವಿಪತ್ರ ಸಲ್ಲಿಸುವ ಸಂದರ್ಭದಲ್ಲಿ ಸರ್ವಪಕ್ಷ ನಿಯೋಗವನ್ನು ಕೇಂದ್ರಕ್ಕೆ ಕರೆದೊಯ್ಯಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದರು.

ಸರ್ವಪಕ್ಷ ನಿಯೋಗದಲ್ಲಿ ಭಾಗವಹಿಸುವುದಿಲ್ಲ ಎಂದು ವಿರೋಧ ಪಕ್ಷದವರು ಈಗಾಗಲೇ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಮತ್ತೊಮ್ಮೆ ಅವರನ್ನು ಸಂಪರ್ಕಿಸಿ ನಿಯೋಗದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗುವುದು. ಅವರು ಭಾಗವಹಿಸಿದರೆ ಉತ್ತಮ. ಇಲ್ಲವಾದಲ್ಲಿ ಮುಖ್ಯಮಂತ್ರಿಗಳು, ನಾನು ಮತ್ತು ಕೆಲವು ಸಚಿವರೊಂದಿಗೆ ಕೇಂದ್ರಕ್ಕೆ ತೆರಳಿ, ಸಂಬಂಧಪಟ್ಟ ಕೇಂದ್ರ ಸಚಿವರು ಮತ್ತು ಪ್ರಧಾನಮಂತ್ರಿಯವರ ಭೇಟಿಗೆ ಸಮಯ ಕೋರಲಿದ್ದೇವೆ. ಅವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಹಾಗೂ ಪರಿಹಾರದ ಅಗತ್ಯವನ್ನು ವಿವರಿಸಿ ಅಂತಿಮ ಮನವಿಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು.

ಬರದಿಂದ ₹60,000 ಕೋಟಿಗೂ ಅಧಿಕ ನಷ್ಟದ ಅಂದಾಜು

ರಾಜ್ಯದಲ್ಲಿ ಬರದಿಂದ ಉಂಟಾಗಿರುವ ನಷ್ಟದ ಕುರಿತು ಈಗಾಗಲೇ ಸುಮಾರು ₹46,000 ಕೋಟಿಯಷ್ಟು ಅಂದಾಜು ಮಾಡಲಾಗಿದೆ. ಅಂತಿಮ ಲೆಕ್ಕಾಚಾರದಲ್ಲಿ ನಷ್ಟದ ಪ್ರಮಾಣ ₹60,000 ಕೋಟಿಯಿಂದ ₹70,000 ಕೋಟಿಯವರೆಗೆ ತಲುಪಬಹುದು ಎಂಬ ಪ್ರಾಥಮಿಕ ಅಂದಾಜುಗಳಿವೆ ಎಂದು ತಿಳಿಸಿದರು.

ಆದರೆ, ಒಟ್ಟು ನಷ್ಟದ ಮೊತ್ತವನ್ನೇ ಕೇಂದ್ರ ಸರ್ಕಾರದಿಂದ ಪರಿಹಾರವಾಗಿ ಕೇಳಲು ಸಾಧ್ಯವಿಲ್ಲ. ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಪರಿಹಾರಕ್ಕೆ ಅರ್ಹವಾಗುವ ನಷ್ಟವನ್ನು ಪ್ರತ್ಯೇಕವಾಗಿ ಲೆಕ್ಕಾಚಾರ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

ಕಳೆದ ವರ್ಷ ಸುಮಾರು ₹49,000 ಕೋಟಿಯಷ್ಟು ನಷ್ಟ ಸಂಭವಿಸಿದ್ದರೂ, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಸುಮಾರು ₹18,000 ಕೋಟಿ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಕೋರಲಾಗಿತ್ತು. ಅದೇ ರೀತಿ ಈ ಬಾರಿಯೂ ₹60,000 ಕೋಟಿಯಷ್ಟು ನಷ್ಟ ಸಂಭವಿಸಿದರೆ, ಮಾರ್ಗಸೂಚಿಗಳ ಪ್ರಕಾರ ಅಂದಾಜು ₹18,000 ಕೋಟಿಯಿಂದ ₹20,000 ಕೋಟಿಯವರೆಗೆ ಪರಿಹಾರ ಕೋರಬೇಕಾಗಬಹುದು ಎಂದು ಹೇಳಿದರು.

ಇವು ಪ್ರಾಥಮಿಕ ಅಂದಾಜುಗಳಾಗಿದ್ದು, ಅಂತಿಮ ಅಂಕಿಅಂಶಗಳಲ್ಲ. ನಷ್ಟದ ಸಂಪೂರ್ಣ ವಿವರಗಳು ಹಾಗೂ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಲೆಕ್ಕಾಚಾರ ಪೂರ್ಣಗೊಂಡ ಬಳಿಕವೇ ಕೇಂದ್ರದಿಂದ ಕೋರಬೇಕಾದ ಪರಿಹಾರದ ಮೊತ್ತವನ್ನು ಅಂತಿಮಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಸುಪ್ರೀಂನಲ್ಲಿ ಮೇಲ್ಮನವಿ

ಎಸ್‌ಸಿ, ಎಸ್‌ಟಿ ಮೀಸಲಾತಿ ಬಗ್ಗೆ ಹೈಕೋರ್ಟ್ ತೀರ್ಪಿಗೆ ಸಂಬಂಧಪಟ್ಟ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮುಂದಿನ ಕಾನೂನಾತ್ಮಕ ಹಾಗೂ ಆಡಳಿತಾತ್ಮಕ ಕ್ರಮಗಳ ಬಗ್ಗೆ ರಾಜಕೀಯ ವ್ಯವಹಾರಗಳ ಸಮಿತಿಯಲ್ಲಿ ಚರ್ಚಿಸಲಾಗುವುದು. ವಿಶೇಷವಾಗಿ 9ನೇ ಅನುಸೂಚಿಗೆ ಸೇರಿಸುವ ಸಾಧ್ಯತೆ ಸೇರಿದಂತೆ ಮುಂದಿನ ಕ್ರಮಗಳ ಕುರಿತು ಸಮಿತಿಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸ್ಟಿಂಗ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳ ಮೂಲಕ ತನಿಖೆ ನಡೆಸುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ತನಿಖೆಗೆ ಸಂಬಂಧಿಸಿದಂತೆ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ ಎಂದು ತಿಳಿಸಿದರು.

Tags

Drought-HitG.Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X