Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಟಾಟಾ ಸಮೂಹ ಸಂಸ್ಥೆಯಿಂದ ರಾಜ್ಯದಲ್ಲಿ...

ಟಾಟಾ ಸಮೂಹ ಸಂಸ್ಥೆಯಿಂದ ರಾಜ್ಯದಲ್ಲಿ 2300 ಕೋಟಿ ರೂ. ಹೂಡಿಕೆ

ವಾರ್ತಾಭಾರತಿವಾರ್ತಾಭಾರತಿ19 Feb 2024 11:44 AM IST
share
ಟಾಟಾ ಸಮೂಹ ಸಂಸ್ಥೆಯಿಂದ ರಾಜ್ಯದಲ್ಲಿ 2300 ಕೋಟಿ ರೂ. ಹೂಡಿಕೆ

ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರ ಸಮ್ಮುಖದಲ್ಲಿ ಸೋಮವಾರ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

ಬಳಿಕ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಎಸ್ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ವಿಧಾನಸೌಧದಲ್ಲಿ ನಡೆದ ಒಡಂಬಡಿಕೆ ವಿನಿಮಯದ ನಂತರ ಮಾತನಾಡಿದ ಸಚಿವ ಪಾಟೀಲ್, ‌ʼಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಇಡೀ ಭಾರತದಲ್ಲಿ ಇದು ಇಂತಹ ಮೊಟ್ಟಮೊದಲ ಯೋಜನೆಯಾಗಿದೆ’ ಎಂದರು.

ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕಂಪನಿಯು ಮೂರು ಯೋಜನೆಗಳಿಗೆ 1,030 ಕೋಟಿ ರೂ. ಬಂಡವಾಳ ಹೂಡಲಿದೆ. ಇವುಗಳ ಪೈಕಿ 420 ಕೋಟಿ ರೂ.ಗಳನ್ನು ಅದು ನಾಗರಿಕ ವಿಮಾನಗಳನ್ನು ಸರಕು ಸಾಗಣೆ ವಿಮಾನಗಳನ್ನಾಗಿ (ಫ್ರೈಟರ್) ಪರಿವರ್ತಿಸುವ ಘಟಕ ಸ್ಥಾಪನೆಗೆ ವಿನಿಯೋಗಿಸಲಿದೆ. ಜೊತೆಗೆ 310 ಕೋಟಿ ರೂ. ಹೂಡಿಕೆಯೊಂದಿಗೆ ಗನ್ ತಯಾರಿಕೆ ಘಟಕ ಮತ್ತು 300 ಕೋಟಿ ರೂ. ವೆಚ್ಚದಲ್ಲಿ ವಿಮಾನಯಾನ ಮತ್ತು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಿದೆ. ಇದರಿಂದ 450 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ವಿವರಿಸಿದರು.

ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಮತ್ತು ಕೋಲಾರದಲ್ಲಿ ಟಿಎಎಸ್ಎಲ್ ತಾನು ಸ್ಥಾಪಿಸಲಿರುವ ಗನ್ ತಯಾರಿಕೆ ಘಟಕದ ಮೂಲಕ ತನಗೆ ಅಗತ್ಯವಿರುವ 13 ಸಾವಿರ ಬಿಡಿಭಾಗಗಳ ಪೈಕಿ ಶೇಕಡ 50ರಷ್ಟನ್ನು ಪೂರೈಸಿಕೊಳ್ಳುವ ಆಲೋಚನೆ ಹೊಂದಿದೆ. ಇದರಿಂದಾಗಿ 300ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 2-3 ಸಾವಿರ ಜನರಿಗೆ ಉದ್ಯೋಗಗಳು ಸಿಗಲಿವೆ. 1939ರಷ್ಟು ಹಿಂದೆಯೇ ಬೆಂಗಳೂರಿನಲ್ಲಿ ಎಚ್ಎಎಲ್ ಸ್ಥಾಪನೆಯಾಗುವುದರೊಂದಿಗೆ ರಾಜ್ಯವು ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದು ಅವರು ಹೇಳಿದರು.

ರಕ್ಷಣಾ ಇಲಾಖೆಗೆ ಬೇಕಾಗುವ ವಿಮಾನಗಳು ಮತ್ತು ಹೆಲಿಕಾಪ್ಟರ್ ಗಳ ಪೈಕಿ ಶೇಕಡ 67ರಷ್ಟು ಕರ್ನಾಟಕದಲ್ಲೇ ತಯಾರಾಗುತ್ತಿದೆ. ಜತೆಗೆ ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ರಫ್ತು ವಹಿವಾಟಿಗೆ ರಾಜ್ಯವು ಶೇಕಡ 65ರಷ್ಟು ಕೊಡುಗೆ ನೀಡುತ್ತಿದೆ. ದೇಶದಲ್ಲಿ ಈ ವಲಯದಲ್ಲಿರುವ ಕಂಪನಿಗಳ ಪೈಕಿ ಶೇ.70ರಷ್ಟು ಕಂಪನಿಗಳು ಕರ್ನಾಟಕದಲ್ಲೇ ನೆಲೆ ಹೊಂದಿವೆ.

ಕಾರ್ಯಕ್ರಮದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಏರ್ ಇಂಡಿಯಾದ ಉನ್ನತಾಧಿಕಾರಿಗಳಾದ ಮನನ್ ಚೌಹಾಣ್, ಕಾರ್ತಿಕೇಯ ಭಟ್, ಅತುಲ್ ಶುಕ್ಲ, ಟಿಎಎಸ್ಎಲ್ ಉನ್ನತಾಧಿಕಾರಿಗಳಾದ ಗುರು ದತ್ತಾತ್ರೇಯ, ಅರ್ಜುನ್ ಮೈನೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಹರಿ ಮಾರಾರ್, ಸಿಒಒ ಸಾತ್ಯಕಿ ರಘುನಾಥ್, ಸಿಎಫ್ಒ ಭಾಸ್ಕರ್ ರವೀಂದ್ರ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X