Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಂದೇ ದಿನ 26,058 ಆಸ್ತಿ ನೋಂದಣಿ: 311...

ಒಂದೇ ದಿನ 26,058 ಆಸ್ತಿ ನೋಂದಣಿ: 311 ಕೋಟಿ ರೂ. ದಾಖಲೆಯ ಆದಾಯ

ವಾರ್ತಾಭಾರತಿವಾರ್ತಾಭಾರತಿ27 Sept 2023 11:35 PM IST
share
ಒಂದೇ ದಿನ 26,058 ಆಸ್ತಿ ನೋಂದಣಿ: 311 ಕೋಟಿ ರೂ. ದಾಖಲೆಯ ಆದಾಯ

ಬೆಂಗಳೂರು, ಸೆ.27: ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಇತಿಹಾಸದಲ್ಲೇ ಸೆ.27ರಂದು ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 26,058 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 311 ಕೋಟಿ ರೂ.ಆದಾಯ ಸಂಗ್ರಹವಾಗಿರುವುದು ರಾಷ್ಟ್ರಮಟ್ಟದಲ್ಲೆ ಹೊಸ ದಾಖಲೆಯಾಗಿದೆ.

ಕಳೆದ ಸೋಮವಾರವಷ್ಟೇ 15,936 ನೋಂದಣಿ ದಸ್ತಾವೇಜು ಪ್ರಕ್ರಿಯೆ ನಡೆದಿದ್ದು 158.28 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು. ಇದೀಗ ಎರಡೇ ದಿನದಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚುತ್ತಲೇ ಇದ್ದು, ಕಂದಾಯ-ನೋಂದಣಿ ಇಲಾಖೆ ಮತ್ತೊಂದು ಮೈಲುಗಲ್ಲು ಮುಟ್ಟಿದಂತಾಗಿದೆ.

ಸೆ.22ರಂದು 12,955 ಆಸ್ತಿ ನೋಂದಣಿ, ದಸ್ತಾವೇಜು ಪ್ರಕ್ರಿಯೆ ಮೂಲಕ 130.87 ಕೋಟಿ ರೂ. ಹಾಗೂ ಸೆ.25ರಂದು 158.28 ಕೋಟಿ ರೂ.ಹಣ ಸರಕಾರದ ಬೊಕ್ಕಸಕ್ಕೆ ಬಂದಿದೆ. ನೋಂದಣಿ ಸೇರಿದಂತೆ ಇತರ ಪ್ರಕ್ರಿಯೆಗಳಿಗೆ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯಿಲ್ಲದೆ ಆಸ್ತಿದಾರರೇ ಬಯಸಿದ ದಿನ ಮತ್ತು ಸಮಯಕ್ಕೆ ಆಸ್ತಿ ನೋಂದಣಿ ಮಾಡಿಕೊಳ್ಳುವ, ಆನ್ಲೈನ್ನಲ್ಲೆ ಶುಲ್ಕ ಪಾವತಿ ವ್ಯವಸ್ಥೆಯಿರುವ ‘ಕಾವೇರಿ-2’ ತಂತ್ರಾಂಶವು ಈಗಾಗಲೇ ಅಳವಡಿಕೆಯಾಗಿದೆ. ಇದೇ ಕಾರಣಕ್ಕೆ ಆಸ್ತಿ ನೋಂದಣಿ ಸಂಖ್ಯೆಯೂ ಹೆಚ್ಚುತ್ತಿದೆ.

ರಾಜ್ಯದ 256 ಉಪನೋಂದಣಿ ಕಚೇರಿಗಳಲ್ಲಿ ಜೂ.25ರಿಂದ ಪೂರ್ಣ ಪ್ರಮಾಣದಲ್ಲಿ ಸುಧಾರಿತ ತಂತ್ರಾಂಶ ದಡಿಯೇ ನೋಂದಣಿ, ದಸ್ತಾವೇಜು ಕಾರ್ಯ ನಡೆದಿವೆ. ಒಂದೇ ದಿನದಲ್ಲಿ ಗರಿಷ್ಠ ನೋಂದಣಿ, ದಸ್ತಾವೇಜು ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ತಂತ್ರಾಂಶವು ತನ್ನ ಗರಿಷ್ಠ ಕಾರ್ಯಕ್ರಮತೆಯನ್ನು ಸಾಬೀತುಪಡಿಸುತ್ತಿದೆ.

ಕಾವೇರಿ-2 ತಂತ್ರಾಂಶಕ್ಕೆ ಆರಂಭದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಇದರಲ್ಲಿರುವ ಸಮಸ್ಯೆಗಳ ಕುರಿತು ಸಾಕಷ್ಟು ದೂರುಗಳೂ ಇಲಾಖೆಗೆ ಬಂದಿದ್ದವು. ಇದೀಗ ಎಲ್ಲ್ಲ ಸಮಸ್ಯೆಗಳನ್ನೂ ನಿವಾರಿಸಿದ್ದು, ಕಾವೇರಿ-2 ತಂತ್ರಾಂಶ ಸಾಕಷ್ಟು ಜನ ಮನ್ನಣೆ ಗಳಿಸಿದೆ.

ಇದರ ಸಹಾಯದಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೇ ಶೀಘ್ರ ಮತ್ತು ಪಾರದರ್ಶಕವಾಗಿ ನೋಂದಣಿ ಪ್ರಕ್ರಿಯೆಗಳು ಮುಗಿಯುತ್ತಿವೆ. ಈ ಮೂಲಕ ಸರ್ಕಾರಕ್ಕೂ ಆದಾಯ ಹೆಚ್ಚುತ್ತಿದ್ದು, ಜನರಿಗೂ ಸರಳ ಸುಲಭ ಸೇವೆಯ ಜೊತೆಗೆ ಸಮಯವೂ ಉಳಿಯುತ್ತಿದೆ ಎಂದು ಕಂದಾಯ ಇಲಾಖೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X