Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಲೋಕಸೇವಾ ಆಯೋಗಗಳು ಪಾರದರ್ಶಕತೆ,...

ರಾಜ್ಯ ಲೋಕಸೇವಾ ಆಯೋಗಗಳು ಪಾರದರ್ಶಕತೆ, ವೃತ್ತಿಪರತೆಯಿಂದ ಕೆಲಸ ನಿರ್ವಹಿಸಬೇಕು: ಉಪರಾಷ್ಟ್ರಪತಿ ಜಗದೀಪ್ ಧನಕರ್

ವಾರ್ತಾಭಾರತಿವಾರ್ತಾಭಾರತಿ11 Jan 2025 7:40 PM IST
share
ರಾಜ್ಯ ಲೋಕಸೇವಾ ಆಯೋಗಗಳು ಪಾರದರ್ಶಕತೆ, ವೃತ್ತಿಪರತೆಯಿಂದ ಕೆಲಸ ನಿರ್ವಹಿಸಬೇಕು: ಉಪರಾಷ್ಟ್ರಪತಿ ಜಗದೀಪ್ ಧನಕರ್

ಬೆಂಗಳೂರು: ರಾಜ್ಯಗಳ ಲೋಕಸೇವಾ ಆಯೋಗಗಳು ಪಾರದರ್ಶಕತೆ, ಜವಾಬ್ದಾರಿ ಹಾಗೂ ಬದ್ಧತೆಯಿಂದ ಕೆಲಸ ನಿರ್ವಹಿಸಿ ವೃತ್ತಿಪರತೆಯನ್ನು ಎತ್ತಿಹಿಡಿಯಬೇಕೆಂದು ರಾಷ್ಟ್ರಪತಿ ಜಗದೀಪ್ ಧನಕರ್ ತಿಳಿಸಿದರು.

ಶನಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಕರ್ನಾಟಕ ಹಾಗೂ ಕೇಂದ್ರ ಲೋಕಸೇವಾ ಆಯೋಗಗಳ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾದ ರಾಜ್ಯ ಲೋಕಸೇವಾ ಆಯೋಗಗಳ ಅಧ್ಯಕ್ಷರ 25ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ರಾಜ್ಯಗಳ ಲೋಕಸೇವಾ ಆಯೋಗಗಳ ಬಲವರ್ಧನೆಗೆ ಅದರ ಅಧ್ಯಕ್ಷರ, ಸದಸ್ಯರ ಪಾತ್ರ ಹಿರಿದಾಗಿದೆ. ಇದು ಒಳ್ಳೆಯ ಆಡಳಿತಕ್ಕೆ ಕೈಗನ್ನಡಿಯಾಗಬೇಕು. ಇಂದಿನ ಯುವಜನರ ಆಕಾಂಕ್ಷೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಆಯೋಗ ಕೆಲಸ ನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಆಡಳಿತಶಾಹಿ ವರ್ಗವನ್ನು ಬಲವರ್ಧನೆಗೊಳಿಸಲು ಆಯೋಗ ಸ್ಪಷ್ಟ, ದಿಟ್ಟ ಹೆಜ್ಜೆಗಳನ್ನಿಡಬೇಕು. ಉತ್ತಮ ಆಡಳಿತ, ನಡಾವಳಿಗಳನ್ನು ಜನರಿಗೆ ನೀಡಬೇಕು ವಿಕಸಿತ ಭಾರತ-2047 ರ ದೂರದೃಷ್ಟಿಯನ್ನು ಸಕಾರಗೊಳಿಸಬೇಕು. ಈಗಾಗಲೇ ನಾವು ಜಿ.ಎಸ್.ಟಿ. ಮೂಲಕ ಏಕ ರೂಪದ ರಾಷ್ಟ್ರೀಯ ತೆರಿಗೆ ನೀತಿ ತಂದಿದ್ದೇವೆ. ಕೇಂದ್ರ ಹಾಗೂ ರಾಜ್ಯಮಟ್ಟದ ಸೇವಾ ಆಯೋಗಗಳು ಪಾರದರ್ಶಕತೆ, ದಕ್ಷತೆ ಹಾಗೂ ನಿಷ್ಠೆಯಿಂದ ಕೆಲಸ ನಿರ್ವಹಿಸಬೇಕು ಎಂದು ಅವರು ಹೇಳಿದರು.

ಪರೀಕ್ಷೆಗಳನ್ನು ಸಮರ್ಥವಾಗಿ ನಡೆಸಿ ಜನರ ವಿಶ್ವಾಸಾರ್ಹತೆಗೆ ಪಾತ್ರವಾಗಬೇಕು. ಆಕಾಂಕ್ಷಿಗಳಲ್ಲಿ ಪರೀಕ್ಷೆಗಳ ಹಾಗೂ ಪ್ರಶ್ನೆ ಪತ್ರಿಕೆಯ ಸೋರಿಕೆಯ ಭಯ ಹೋಗಲಾಡಿಸಬೇಕು. ಭ್ರಷ್ಟಾಚಾರ ನಿರ್ಮೂಲನೆಗೆ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ನಿಗ್ರಹ) ಕಾಯ್ದೆ 2024 ಅನ್ನು ತಂದಿರುವುದು ಗಮನಾರ್ಹ. ಆದರೂ ಯಾವುದೇ ಅಡೆ ತಡೆಗಳಿಲ್ಲದೆ ಇವನ್ನು ಅನುಷ್ಠಾನಗೊಳಿಸಲು ರಾಜ್ಯ ಸಜ್ಜಾಗಬೇಕು ಎಂದು ಉಪ ರಾಷ್ಟ್ರಪತಿ ಹೇಳಿದರು.

ಆಯೋಗಗಳು ಸಾಮಥ್ರ್ಯ ನಿರ್ಮಾಣ, ವೃತ್ತಿ ಪರತೆಗಳಿಗೆ ಒತ್ತು ನೀಡಿ ತರಬೇತಿಗಳನ್ನು ನಡೆಸಬೇಕಿದೆ. ಆಗಿಂದಾಗ್ಗೆ ಆಗುವ ನಿಯಮಗಳು, ಕಾಯ್ದೆಗಳಿಗೆ ಅನುಗುಣವಾಗಿ ಆಯೋಗ ತನ್ನ ಕೆಲಸ ನಿರ್ವಹಣೆ ಜೊತೆಗೆ ಉತ್ತಮ ಪ್ರತಿಫಲ ನೀಡಬೇಕಿದೆ. ಸಂವಿಧಾನದ ತತ್ವ ಮತ್ತು ಮೌಲ್ಯಗಳನ್ನು ಎತ್ತಿ ಹಿಡಿದು, ವ್ಯಕ್ತಿ, ಸಮಾಜದ ಏಳ್ಗೆಗೆ ಶ್ರಮಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, 1951 ರಲ್ಲಿ ಸ್ಥಾಪಿಸಲಾದ ಕರ್ನಾಟಕ ಲೋಕಸೇವಾ ಆಯೋಗ ತನ್ನದೆ ಆದ ಕಾರ್ಯಕ್ಷಮತೆ ಪಾರದರ್ಶಕತೆಗೆ ಹೆಸರಾಗಿದೆ. ಪಿ.ಸಿ.ಹೋಟಾ ಸಮಿತಿ ಶಿಫಾರಸ್ಸಿನಂತೆ ಸರಕಾರ ನೇಮಕಾತಿಯಲ್ಲಿ ಸೂಕ್ತ ಬದಲಾವಣೆ ತಂದಿದೆ. ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಬಿ’ ಹುದ್ದೆಗಳಿಗೆ ಸಂದರ್ಶನವನ್ನು ರದ್ದು ಮಾಡಿ ಪ್ರಕ್ರಿಯೆಯಲ್ಲಿ ಸಮತೋಲನ ತರಲಾಗಿದೆ ಎಂದು ಹೇಳಿದರು.

ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಯ ಸಂದರ್ಶನ ಅಂಕಗಳನ್ನು 25ಕ್ಕೆ ಇಳಿಸಿ ನೇಮಕಾತಿಯಲ್ಲಿ ಪಾರದರ್ಶಕತೆ ತರಲಾಗಿದೆ. ಅದಾಗ್ಯೂ ಪ್ರಶ್ನೆ ಪತ್ರಿಕೆ ಸೋರಿಕೆ ಮುಂತಾದ ಸಮಸ್ಯೆಗಳು ಉದ್ಭವಿಸುತ್ತಿದ್ದು, ಸರಕಾರ ಇದನ್ನು ತಡೆಗಟ್ಟಲು ಕಠಿಣ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗಿದ್ದು, ತ್ವರಿತ ನೇಮಕಾತಿ ಪ್ರಕ್ರಿಯೆಗಾಗಿ ಕೇಂದ್ರ ಲೋಕ ಸೇವಾ ಆಯೋಗದ ಮಾದರಿಯನ್ನು ಅನುಸರಿಸಲು ಕ್ರಮಕೈಗೊಳ್ಳಲಾಗಿದೆ. ಬ್ಯಾಕ್‍ಲಾಗ್ ಹುದ್ದೆಗಳ ನೇಮಕಾತಿಯನ್ನು ಸರಳೀಕರಣಗೊಳಿಸಲಾಗಿದೆ. ಆಧುನಿಕ ಡಿಜಿಟಲ್ ತಂತ್ರಜ್ಞಾನಗಳಾದ ಕೃತಕ ಬುದ್ಧಿಮತ್ತೆ ಮುಂತಾದವುಗಳ ಬಳಕೆಯನ್ನು ಇತರೆ ರಾಜ್ಯದವರಿಂದ ತಿಳಿದು ಅಳವಡಿಸಿಕೊಳ್ಳಲಾಗುತ್ತಿದೆ. ಇದರಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಹಿಳೆ ಹಾಗೂ ಹಿಂದುಳಿದ ಜನಾಂಗಗಳಿಗೆ ಉದ್ಯೋಗದಲ್ಲಿ ಅವಕಾಶ ಕಲ್ಪಿಸಲು ಕರ್ನಾಟಕ ಲೋಕಸೇವಾ ಆಯೋಗ ಬದ್ಧವಾಗಿದೆ. ಇದಕ್ಕೆ ಡಿಟ್ಟ ಹೆಜ್ಜೆಯನ್ನು ಇಡಲಾಗಿದೆ. ಆಯ್ಕೆಯಾದವರಿಗೆ ಕಾಲಕಾಲಕ್ಕೆ ಸೂಕ್ತ ತರಬೇತಿ ನೀಡಿ ಸಮಾಜದ ಬೇಡಿಕೆಗಳನ್ನು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆಯೋಗ ದಕ್ಷತೆ, ಪಾರದರ್ಶಕತೆ ಹಾಗೂ ಇನ್ನಷ್ಟು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸುತ್ತದೆ. ಇದರಿಂದ ಉತ್ತಮ ಸಮಾಜ ನಿರ್ಮಾಣಕ್ಕೆ ಬುನಾದಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಯ ಪತ್ನಿ ಸುದೇಶಾ ಧನಕರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷೆ ಪ್ರೀತಿ ಸುದಾನ್, ರಾಜ್ಯ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಹರಿಯಾಣ ಲೋಕಸೇವಾ ಆಯೋಗದ ಅಧ್ಯಕ್ಷ ಅಲೋಕ್ ವರ್ಮಾ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಡಿಜಿ ಐಜಿಪಿ ಡಾ.ಅಲೋಕ್ ಮೋಹನ್ ಹಾಗೂ ವಿವಿಧ ರಾಜ್ಯಗಳ ಲೋಕಸೇವಾ ಆಯೋಗದ ಅಧ್ಯಕ್ಷರು, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X