Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ 28,985 ಇಂಜಿನಿಯರಿಂಗ್...

ರಾಜ್ಯದಲ್ಲಿ 28,985 ಇಂಜಿನಿಯರಿಂಗ್ ಸೀಟುಗಳು ಖಾಲಿ : ಸಚಿವ ಬಸವರಾಜ ರಾಯರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ17 Aug 2026 7:57 PM IST
share
ರಾಜ್ಯದಲ್ಲಿ 28,985 ಇಂಜಿನಿಯರಿಂಗ್ ಸೀಟುಗಳು ಖಾಲಿ : ಸಚಿವ ಬಸವರಾಜ ರಾಯರೆಡ್ಡಿ

ಬೆಂಗಳೂರು : 2025-26ನೇ ಸಾಲಿನಲ್ಲಿ ಸರಕಾರಿ ಮತ್ತು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು 1,16,866 ಸೀಟುಗಳು ಲಭ್ಯವಿದ್ದು, ಖಾಸಗಿ ವಿವಿಗಳನ್ನು ಹೊರತುಪಡಿಸಿ 87,881 ಸೀಟುಗಳು ಭರ್ತಿಯಾಗಿವೆ. ಇನ್ನೂ 28,985 ಸೀಟುಗಳು ಭರ್ತಿಯಾಗದೆ ಖಾಲಿ ಉಳಿದಿವೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ವಿವರಿಸಿದ್ದಾರೆ.

ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‍ನ ಬಸನಗೌಡ ಬಾದರ್ಲಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಕರ್ನಾಟಕದಲ್ಲಿ ಸರಕಾರದ 17 ಹಾಗೂ ಖಾಸಗಿ ವಲಯದ 205 ಇಂಜಿನಿಯರಿಂಗ್ ಕಾಲೇಜುಗಳು ಕಾರ್ಯಾಚರಿಸುತ್ತಿವೆ. ರಾಜ್ಯದಲ್ಲಿ ಒಟ್ಟು 87,881 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ ಎಂದರು.

ಕೆಇಎ ನಡೆಸುವ ಪ್ರವೇಶ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಕಾಲೇಜುಗಳ ಪ್ರತಿ ಕೋರ್ಸ್‍ನಲ್ಲಿ ಲಭ್ಯವಿರುವ ಸರಕಾರಿ ಕೋಟಾದ ಶೇ.70 ರಷ್ಟು ಸೀಟುಗಳನ್ನು ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಿಡಲಾಗುತ್ತದೆ. ಇದರೊಂದಿಗೆ ಹೊರಗಿನ ಕಾಲೇಜುಗಳ ಸರಕಾರಿ ಕೋಟಾದ ಶೇ.8 ರಷ್ಟು ಸೀಟುಗಳನ್ನು ಸಹ ಕಲ್ಯಾಣ ಕರ್ನಾಟಕ ಪ್ರದೇಶದ ವಿದ್ಯಾರ್ಥಿಗಳಿಗೆ ಮೀಸಲಿರಿಸಲಾಗಿದೆ ಎಂದು ಬಸವರಾಜ ರಾಯರೆಡ್ಡಿ ತಿಳಿಸಿದರು.

ಈ ಎಲ್ಲ ಅಂಶಗಳು, ಮೂಲಭೂತ ಸೌಕರ್ಯಗಳ ಅಗತ್ಯತೆ ಹಾಗೂ ಪ್ರಸ್ತುತ ಲಭ್ಯವಿರುವ ಸೀಟುಗಳ ಸಂಖ್ಯೆಯನ್ನು ಪರಿಗಣಿಸಿ ಸಿಂಧನೂರು ತಾಲೂಕಿನಲ್ಲಿ ಹೊಸ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆಯನ್ನು ಪರಿಶೀಲಿಸಲಾಗುತ್ತಿದೆ. ಅಲ್ಲದೇ, ಇಂಜಿನಿಯರಿಂಗ್ ಕಾಲೇಜಿನ ಬದಲಿಗೆ ಕೌಶಲ್ಯ ಅಭಿವದ್ದಿ ಕೇಂದ್ರಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಕ್ರಮ ವಹಿಸಲಾಗುವುದು ಎಂದು ರಾಯರೆಡ್ಡಿ ತಿಳಿಸಿದರು.

ರಾಜ್ಯ ಸರಕಾರದಿಂದ ಹೊಸ ಇಂಜಿನಿಯರಿಂಗ್ ಅಥವಾ ಪಾಲಿಟೆಕ್ನಿಕ್ ಕಾಲೇಜುಗಳನ್ನು ಪ್ರಾರಂಭಿಸಲು ಎಐಸಿಟಿಇ ಮಾರ್ಗದರ್ಶಿ ಸೂಚಿಗಳನ್ವಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಂಡು ಹೊಸದಿಲ್ಲಿಯ ಎಐಸಿಟಿಇ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ. ಪರಿಷ್ಕೃತ ನಿಯಮಗಳ ಪ್ರಕಾರ ಅಗತ್ಯವಿರುವ ಬಿಲ್ಟ್-ಅಪ್ ಏರಿಯಾ ಹಾಗೂ ಎಫ್‍ಎಸ್‍ಐ/ಎಫ್‍ಎಆರ್ ಮಾನದಂಡಗಳನ್ವಯ ಅಗತ್ಯ ಜಮೀನನ್ನು ಒದಗಿಸಬೇಕಾಗುತ್ತದೆ ಎಂದು ರಾಯರೆಡ್ಡಿ ಹೇಳಿದರು.

ಸಿಂಧನೂರು ತಾಲೂಕಿನ ವಿದ್ಯಾರ್ಥಿಗಳಿಗೆ ಸಮೀಪದಲ್ಲೇ ಅಭ್ಯಾಸ ಮಾಡಲು ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳು ಲಭ್ಯವಿವೆ. ಸಿಂಧನೂರಿನಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಗಂಗಾವತಿಯ ಸರಕಾರಿ ಇಂಜಿನಿಯರಿಂಗ್ ಕಾಲೇಜು, 90 ಕಿ.ಮೀ ದೂರದಲ್ಲಿರುವ ರಾಯಚೂರು ಸರಕಕಾರಿ ಇಂಜಿನಿಯರಿಂಗ್ ಕಾಲೇಜು ಹಾಗೂ 100 ಕಿ.ಮೀ ದೂರದಲ್ಲಿರುವ ತಳಕಲ್ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಸ್ತುತ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶವಿದೆ ಎಂದು ಬಸವರಾಜ ರಾಯರೆಡ್ಡಿ ತಿಳಿಸಿದರು.

ಕಾಲೇಜು ಸ್ಥಾಪನೆ ಬಗ್ಗೆ ಪರಿಶೀಲಿಸಿ ಕ್ರಮ: ಸಿಂಧನೂರು ತಾಲೂಕಿನಲ್ಲಿ ಹೊಸದಾಗಿ ಸರಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಪ್ರಸ್ತಾವನೆ ಕುರಿತು ಕೂಲಂಕಶವಾಗಿ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಸಿಂಧನೂರು ತಾಲೂಕಿನಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ದೂರದ ನಗರಗಳಿಗೆ ಪ್ರಯಾಣ ಮಾಡುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ ಎಂದು ರಾಯರೆಡ್ಡಿ ತಿಳಿಸಿದರು.

Tags

engineeringBasavaraj Rayareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X