Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯಾದ್ಯಂತ 40 ಸೈಬರ್ ಕ್ರೈಮ್ ಪೊಲೀಸ್...

ರಾಜ್ಯಾದ್ಯಂತ 40 ಸೈಬರ್ ಕ್ರೈಮ್ ಪೊಲೀಸ್ ಠಾಣೆ ಆರಂಭ: ಗೃಹ ಸಚಿವ ಜಿ.ಪರಮೇಶ್ವರ್

ಹೆಚ್ಚುತ್ತಿರುವ ಸೈಬರ್‌ ಕ್ರೈಂ ಪ್ರಕರಣಗಳನ್ನು ಮಟ್ಟ ಹಾಕಲು ಕ್ರಮ

ವಾರ್ತಾಭಾರತಿವಾರ್ತಾಭಾರತಿ19 Dec 2023 10:55 PM IST
share
ರಾಜ್ಯಾದ್ಯಂತ 40 ಸೈಬರ್ ಕ್ರೈಮ್ ಪೊಲೀಸ್ ಠಾಣೆ ಆರಂಭ: ಗೃಹ ಸಚಿವ ಜಿ.ಪರಮೇಶ್ವರ್

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ 40 ಸೈಬರ್ ಕ್ರೈಮ್ ಪೊಲೀಸ್ ಠಾಣೆಗಳನ್ನು ಆರಂಭಿಸಲು ಸರಕಾರ ಮುಂದಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ನಗರದ ಬಾರ್‌ಲೈನ್ ರಸ್ತೆಯ ಸಮೀಪದಲ್ಲಿ ನೂತನವಾಗಿ ನಿರ್ಮಿಸಿರುವ ನೂತನ ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಹೆಚ್ಚುತ್ತಿದ್ದು, ಇಂತಹ ಪ್ರಕರಣಗಳ ಆರೋಪಿಗಳನ್ನು ಪತ್ತೆ ಮಾಡುವುದು ಪೊಲೀಸ್ ಇಲಾಖೆಗೆ ಸವಾಲಿನ ಕೆಲಸವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೈಬರ್ ಕ್ರೈಮ್ ಪೊಲೀಸ್ ಠಾಣೆಗಳನ್ನು ಆರಂಭಿಸಲು ಮುಂದಾಗಿದೆ ಎಂದು ಹೇಳಿದರು.

ಪೊಲೀಸರು ರಾಜ್ಯ ಸರಕಾರದ ಪ್ರಮುಖ ಭಾಗವಾಗಿದೆ. ಕರ್ನಾಟಕದ ಪೊಲೀಸ್ ಇಲಾಖೆ ಇಡೀ ದೇಶಕ್ಕೆ ಮಾದರಿಯಾಗಿದೆ. ಪೊಲೀಸರು ಅತ್ಯುತ್ತಮವಾಗಿ ಕೆಲಸ ಮಾಡಲು ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸರಕಾರದ ಕರ್ತವ್ಯವಾಗಿದ್ದು, ರಾಜ್ಯ ಸರಕಾರ ಪೊಲೀಸರು ಹಾಗೂ ಪೊಲೀಸ್ ಇಲಾಖೆಗೆ ಅಗತ್ಯವಾಗಿರುವ ಎಲ್ಲ ಸೌಲಭ್ಯಗಳನ್ನು ನೀಡಲು ಬದ್ಧವಾಗಿದೆ ಎಂದರು.

ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಯಾವುದೇ ಕೀಳರಿಮೆ ಇರಬಾರದು. ಪೊಲೀಸರು ಸಮಾಜದ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಸಮಾಜದ ಭಾಗವೇ ಆಗಿದ್ದಾರೆ. ರಾಜ್ಯ ಸರಕಾರ ಪೊಲೀಸ್ ಇಲಾಖೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ವಿಶೇಷ ಕಾಳಜಿ ವಹಿಸಿದೆ. ಈ ಹಿಂದೆ ಪೊಲೀಸರು ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿದ್ದ ಹಳೆಯ ಶಿಥಿಲ ಕಟ್ಟಡಗಳಲ್ಲಿ ವಾಸ ಮಾಡುತ್ತಿದ್ದರು. ಇದನ್ನು ನಾನು ಕಣ್ಣಾರೆ ಕಂಡಿದ್ದು, ಪೊಲೀಸರು ಉತ್ತಮವಾಗಿ ಕಾರ್ಯ ನಿರ್ವಹಿಸುವಂತಾಗಲು ವಸತಿ, ಆರೋಗ್ಯ ವಿಮೆಯಂತಹ ಸೌಲಭ್ಯಗಳು ಅತ್ಯಗತ್ಯ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಪೊಲೀಸ್ ಗೃಹ ಯೋಜನೆಯಡಿಯಲ್ಲಿ ಇದುವರೆಗೆ ರಾಜ್ಯಾದ್ಯಂತ 46ಸಾವಿರ ವಸತಿಗೃಹಗಳನ್ನು ನಿರ್ಮಿಸಿದ್ದು, ಶೇ.46ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದಿನ ದಿನಗಳಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿರುವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು. ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿಗೂ ವಸತಿ ಸೌಲಭ್ಯ ಕಲ್ಪಿಸಲು ಸರಕಾರ ಬದ್ಧವಾಗಿದೆ ಎಂದ ಸಚಿವರು, ಪೊಲೀಸ್ ಇಲಾಖೆಯನ್ನು ಜನಸ್ನೇಹಿಯನ್ನಾಗಿಸುವುದು ನನ್ನ ಗುರಿಯಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯನ್ನು ಆಧುನೀಕರಣ ಮಾಡಲು ವಿಶೇಷ ಗಮನ ಹರಿಸಲಾಗುತ್ತಿದೆ ಎಂದು ನುಡಿದರು.

ರಾಜ್ಯದಲ್ಲಿ ಈ ಬಾರಿ ಕಂಡು ಕೇಳರಿಯದ ಬರ ಆವರಿಸಿದೆ. ಇಂತಹ ಪರಿಸ್ಥಿತಿಯಲ್ಲೂ ರಾಜ್ಯ ಸರಕಾರ ಬರ ಪರಿಹಾರಕ್ಕೆ ಅಗತ್ಯ ಕ್ರಮಕೈಗೊಂಡಿದೆ. ಅಭಿವೃದ್ಧಿಗೆ ಒತ್ತು ನೀಡಿದೆ. ಬರ ಪರಿಹಾರಕ್ಕೆ ಕೇಂದ್ರದ ಬಳಿ 15 ಸಾವಿರ ಕೋ. ರೂ. ಅನುದಾನ ಕೇಳಿದ್ದು, ಇನ್ನೂ ಅನುದಾನ ನೀಡಿಲ್ಲ. ಆದರೂ ಸರಕಾರ ಬರ ಪರಿಹಾರವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದು ರಾಜ್ಯದಲ್ಲ ಎಲ್ಲ ಜಿಲ್ಲಾಧಿಕಾರಿಗಳ ಪಿಡಿ ನಿಧಿಯಲ್ಲಿ ಬರ ಪರಿಹಾರಕ್ರಮಗಳಿಗಾಗಿ 5 ಕೋ. ರೂ. ಮೀಸಲಿಡಲಾಗಿದೆ. ರಾಜ್ಯ ಸರಕಾರ ಇಡೀ ದೇಶದಲ್ಲಿ ಮಾದರಿ ಆಡಳಿತ ನೀಡುತ್ತಿದೆ ಎಂದು ಗೃಹ ಪರಮೇಶ್ವರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿ, ಸಿಬ್ಬಂದಿಯನ್ನು ಗೌರವಿಸಲಾಯಿತು. ಇದೇ ವೇಳೆ ನೀತನ ವಸತಿ ಸಮುಚ್ಚಯದಲ್ಲಿ ವಸತಿ ಸೌಲಭ್ಯ ಪಡೆದವರಿಗೆ ಮನೆಗಳ ಕೀಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ರಾಜೇಗೌಡ, ನಯನಾ ಮೋಟಮ್ಮ, ನಗರಸಭೆ ಅಧ್ಯಕ್ಷ ವೇಣುಗೋಪಾಲ್, ಡಿಐಜಿ ಚಂದ್ರಗುಪ್ತ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್ಪಿಡಾ.ವಿಕ್ರಮ್ ಅಮಟೆ, ಎಡಿಜಿಪಿ ಹಿತೇಂದ್ರ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X