Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇ.ವಿ.ಕ್ಷೇತ್ರದಲ್ಲಿ 40 ಸಾವಿರ ಕೋಟಿ ರೂ....

ಇ.ವಿ.ಕ್ಷೇತ್ರದಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆ: ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ18 Oct 2023 6:55 PM IST
share
ಇ.ವಿ.ಕ್ಷೇತ್ರದಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಅ.18: ವಿದ್ಯುತ್ ಚಾಲಿತ ವಾಹನಗಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಸಮರ್ಪಕ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕವಾಗಿದೆ. ಈಗ ಈ ಕ್ಷೇತ್ರದಲ್ಲಿ ರಾಜ್ಯವು ಈಗಾಗಲೇ 25 ಸಾವಿರ ಕೋಟಿ ರೂ.ಹೂಡಿಕೆಯನ್ನು ಆಕರ್ಷಿಸಿದೆ. ಮುಂಬರುವ ದಿನಗಳಲ್ಲಿ ಇನ್ನೂ 15 ಸಾವಿರ ಕೂಟಿ ರೂ.ಹೂಡಿಕೆ ಸಾಧ್ಯವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

ಬುಧವಾರ ಇಲ್ಲಿನ ಕೆಂಗೇರಿ ಸಮೀಪದ ಮೈಲಸಂದ್ರದಲ್ಲಿರುವ ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿ ಸ್ಥಾಪಿಸಿರುವ ಜಾಗತಿಕ ಮಟ್ಟದ ವಿದ್ಯುತ್ ಚಾಲಿತ ವಾಹನಗಳ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಮೊದಲಿಗೆ ನಮ್ಮಲ್ಲಿ 2017ರಲ್ಲಿ ವಿದ್ಯುತ್ ಚಾಲಿತ ವಾಹನಗಳ ನೀತಿಯನ್ನು ಜಾರಿಗೆ ತರಲಾಯಿತು. 2021ರಲ್ಲಿ ಇದನ್ನು ಜಾಗತಿಕ ಮಟ್ಟಕ್ಕೆ ತಕ್ಕಂತೆ ಪರಿಷ್ಕರಿಸಲಾಯಿತು. ರಾಜ್ಯದ ನೀತಿಯು ಇ.ವಿ.ಬ್ಯಾಟರಿ ಮತ್ತು ಕೋಶಗಳ ಉತ್ಪಾದನೆ, ಬಿಡಿಭಾಗಗಳ ತಯಾರಿಕೆ, ಒಇಎಂ (ಒರಿಜನಲ್ ಎಕ್ವಿಪ್ಮೆಂಟ್ ಮ್ಯಾನುಫ್ಯಾಕ್ಚರರ್ಸ್), ಚಾಜಿರ್ಂಗ್ ಮತ್ತು ಪರೀಕ್ಷಾರ್ಥ ಮೂಲಸೌಲಭ್ಯ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೂಡಿಕೆಯ ಸಮಗ್ರ ಮೌಲ್ಯ ಸರಪಳಿಯನ್ನು ಒಳಗೊಂಡಿದೆ ಎಂದು ಅವರು ನುಡಿದರು.

ರಾಜ್ಯದಲ್ಲಿ ಸದ್ಯಕ್ಕೆ 2 ಲಕ್ಷ ವಿದ್ಯುತ್ ಚಾಲಿತ ವಾಹನಗಳು ನೋಂದಣಿಯಾಗಿದ್ದು, ದೇಶಕ್ಕೆ ಮೂರನೆ ಸ್ಥಾನದಲ್ಲಿದ್ದೇವೆ. ಮುಂಬರುವ ದಿನಗಳಲ್ಲಿ ಇ.ವಿ.ವಾಹನಗಳು ಮತ್ತಷ್ಟು ಜನಪ್ರಿಯವಾಗಲಿದ್ದು, ಸುಗಮ, ತ್ವರಿತ, ಸುರಕ್ಷಿತ ಮತ್ತು ಮಾಲಿನ್ಯರಹಿತ ಸಂಚಾರವನ್ನು ಸಾಧ್ಯವಾಗಿಸಲಿವೆ. ಇನ್ನು ಒಂದು ದಶಕದಲ್ಲಿ ಸಾಂಪ್ರದಾಯಿಕ ಇಂಧನದ ವಾಹನಗಳು ನೇಪಥ್ಯಕ್ಕೆ ಸರಿಯಲಿವೆ ಎಂದು ಅವರು ವಿವರಿಸಿದರು.

ಕರ್ನಾಟಕದಲ್ಲಿ ಸದ್ಯಕ್ಕೆ ಈ ಕ್ಷೇತ್ರದಲ್ಲಿ 7 ಒಇಎಂ, ಬಿಡಿಭಾಗಗಳನ್ನು ತಯಾರಿಸುವ 50 ಕಂಪೆನಿಗಳು, 45 ನವೋದ್ಯಮಗಳು, ಅತ್ಯಧಿಕ ಸಂಶೋಧನೆ ಮತ್ತು ಅಭಿವೃದ್ಧಿ(ಆರ್ ಅಂಡ್ ಡಿ) ಕೇಂದ್ರಗಳು ಇವೆ. ಈ ಕ್ಷೇತ್ರವು ಸಾವಿರಾರು ಸಂಖ್ಯೆಯ ಉದ್ಯೋಗಗಳನ್ನು ಸೃಷ್ಟಿಸುವ ಸಾಮಥ್ರ್ಯ ಹೊಂದಿದ್ದು, ಇದಕ್ಕೆ ತಕ್ಕಂತೆ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸುವ ಉಪಕ್ರಮವನ್ನು ಶಿಕ್ಷಣ ಕ್ರಮದಲ್ಲೆ ಅಳವಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವು ಅತ್ಯುತ್ತಮ ಗುಣಮಟ್ಟದಿಂದ ಕೂಡಿದೆ. ಇದು ತರಬೇತಿ, ಸಂಶೋಧನೆ, ಕೌಶಲಾಭಿವೃದ್ಧಿ, ಸಹಭಾಗಿತ್ವ ಮತ್ತು ಪರಿಪೋಷಣೆಗಳಿಗೆ ಉತ್ತಮ ವೇದಿಕೆಯಾಗಿ ಒದಗಿ ಬರಲಿದೆ. ಇದು ಅಂತಿಮವಾಗಿ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸಲು ಚಿಮ್ಮುಹಲಗೆಯಾಗಿ ಕೆಲಸ ಮಾಡಲಿದೆ ಎಂದು ಎಂ.ಬಿ.ಪಾಟೀಲ್ ಭರವಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮಕ್ಕೂ ಮೊದಲು ಸಚಿವರು ಉತ್ಕೃಷ್ಟತಾ ಕೇಂದ್ರದಲ್ಲಿರುವ 3ಡಿ ಎಕ್ಸ್ಪೀರಿಯನ್ಸ್ ಲ್ಯಾಬ್, ಸರ್ವೀಸ್ ಲ್ಯಾಬ್, ಬಿಡಿಭಾಗಗಳ ಲ್ಯಾಬ್ ಸೇರಿದಂತೆ ಪ್ರತಿಯೊಂದು ವಿಭಾಗಕ್ಕೂ ಭೇಟಿ ನೀಡಿ, ಅಲ್ಲಿನ ಸಾಧನ-ಸಲಕರಣೆಗಳು ಮತ್ತು ಸೌಲಭ್ಯಗಳನ್ನು ವೀಕ್ಷಿಸಿ, ವಿವರಣೆ ಪಡೆದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X