Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೈತರಿಗೆ 3 ಪಾಳಿಗಳಲ್ಲಿ 5 ಗಂಟೆ...

ರೈತರಿಗೆ 3 ಪಾಳಿಗಳಲ್ಲಿ 5 ಗಂಟೆ ವಿದ್ಯುತ್ ಪೂರೈಕೆ; ʼಲೋಡ್ ಶೆಡ್ಡಿಂಗ್’ ಆಗದಂತೆ ಎಚ್ಚರಿಕೆ ವಹಿಸಲು ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 Oct 2023 9:26 PM IST
share
ರೈತರಿಗೆ 3 ಪಾಳಿಗಳಲ್ಲಿ 5 ಗಂಟೆ ವಿದ್ಯುತ್ ಪೂರೈಕೆ; ʼಲೋಡ್ ಶೆಡ್ಡಿಂಗ್’ ಆಗದಂತೆ ಎಚ್ಚರಿಕೆ ವಹಿಸಲು ಸಿಎಂ ಸೂಚನೆ

ಬೆಂಗಳೂರು, ಅ.13: ರಾಜ್ಯದಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುವಂತೆ ಹಾಗೂ ಲೋಡ್ ಶೆಡ್ಡಿಂಗ್ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಎಸ್ಕಾಂಗಳ ಎಂ.ಡಿ.ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕೃಷಿ ಕ್ಷೇತ್ರದಲ್ಲಿ ವಿದ್ಯುತ್‍ಗೆ ಬೇಡಿಕೆ ಹೆಚ್ಚಾಗಿದ್ದು, ಎಲ್ಲ ಮುಖ್ಯ ಎಂಜಿನಿಯರ್‍ಗಳನ್ನು ಜಿಲ್ಲೆಗೊಬ್ಬರಂತೆ ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು, ರೈತರಿಗೆ ನಿರಂತರ 5 ಗಂಟೆ ವಿದ್ಯುತ್ ಪೂರೈಕೆ ಆಗುತ್ತಿರುವುದನ್ನು ಖಾತರಿಪಡಿಸಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಇಂದಿನ ಸಭೆಯ ತೀರ್ಮಾನಗಳು ಪಾಲನೆಯಾಗುತ್ತಿರುವುದನ್ನು ಖಾತರಿಪಡಿಸಬೇಕು. ಕಳೆದ ಐದು ವರ್ಷಗಳಿಂದ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮಥ್ರ್ಯ ಹೆಚ್ಚಳ ಕೇವಲ 4 ಸಾವಿರ ಮೆಗಾವ್ಯಾಟ್ ನಷ್ಟು ಮಾತ್ರ ಇದೆ ಎಂದು ಅವರು ಹೇಳಿದರು.

ರಾಜ್ಯದ ಒಟ್ಟಾರೆ ವಿದ್ಯುತ್ ಉತ್ಪಾದನಾ ಸಾಮಥ್ರ್ಯ 32 ಸಾವಿರ ಮೆ.ವ್ಯಾ.ಇದ್ದರೂ ಇದರಲ್ಲಿ 16 ಸಾವಿರ ಮೆ.ವ್ಯಾ. ಸೌರ ವಿದ್ಯುತ್ ಆಗಿದೆ. ಇದು ಹಗಲು ಹೊತ್ತಿನಲ್ಲಿ ಮಾತ್ರ ಉತ್ಪಾದನೆ ಆಗುವುದರಿಂದ ಬೇಡಿಕೆ ನಿರ್ವಹಣೆಯಲ್ಲಿ ವ್ಯತ್ಯಯವಾಗುತ್ತಿದೆ. ಜೊತೆಗೆ ಕಲ್ಲಿದ್ದಲಿನಲ್ಲಿದ್ದ ಕೆಲವು ಸಮಸ್ಯೆಗಳನ್ನು ನಿವಾರಿಸಿ, ಆಮದು ಕಲ್ಲಿದ್ದಲು ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

ನವೆಂಬರ್‍ನಿಂದ ಉತ್ತರ ಪ್ರದೇಶದಿಂದ 300 ಮೆ.ವ್ಯಾ., ಪಂಜಾಬ್ ನಿಂದ 600 ಮೆ.ವ್ಯಾ. ವಿದ್ಯುತ್ ಪಡೆಯಲಾಗುವುದು. ಕೆ.ಇ.ಆರ್.ಸಿ. ಅನುಮೋದನೆಯೊಂದಿಗೆ 1500 ಮೆ.ವ್ಯಾ. ಅಲ್ಪಾವಧಿ ವಿದ್ಯುತ್ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿನ ವಿದ್ಯುತ್ ಉತ್ಪಾದಕರಿಂದ ವಿದ್ಯುತ್ ಪಡೆಯಲು ರಾಷ್ಟ್ರೀಯ ವಿಪತ್ತಿನಡಿಯಲ್ಲಿ ವಿದ್ಯುತ್ ಕಾಯ್ದೆಯ ಸೆಕ್ಷನ್ 11ನ್ನು ಜಾರಿಗೊಳಿಸಲಾಗಿದೆ. ಆ ಮೂಲಕ ವಿದ್ಯುತ್ ಕೊರತೆಯನ್ನು ನಿವಾರಿಸಲಾಗುವುದು ಎಂದು ಅಧಿಕಾರಿಗಳು ವಿವರಿಸಿದರು.

ಶೇ.13ರಷ್ಟು ವಿದ್ಯುತ್ ವಿತರಣಾ ನಷ್ಟವಾಗುತ್ತಿದೆ. ವಿದ್ಯುತ್ ಕಳವು ಗೃಹ ಜ್ಯೋತಿಯಿಂದ ಕಡಿಮೆಯಾಗಿದೆ. ಕೈಗಾರಿಕಾ ವಿದ್ಯುತ್ ಕಳವು ಅತಿ ಕಡಿಮೆ. ಕಬ್ಬಿನ ಬೆಳೆಗೆ ನೀರು ಹಾಯಿಸಲು ಕೆಲವು ಜಿಲ್ಲೆಗಳಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಇನ್ನು ಕೆಲವೆ ದಿನಗಳಲ್ಲಿ ಕಬ್ಬಿನ ಕಟಾವು, ಅರೆಯುವಿಕೆ ಪ್ರಾರಂಭವಾಗುತ್ತಿದ್ದಂತೆ ಬೇಡಿಕೆ ಇಳಿಕೆಯಾಗಲಿದ್ದು, ಕಬ್ಬು ಅರೆಯುವಿಕೆಯೊಂದಿಗೆ ಕೊ-ಜೆನರೇಶನ್ ನಿಂದ ವಿದ್ಯುತ್ ಲಭ್ಯವಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದರು.

ಎಸ್ಕಾಂಗಳ ಎಂ.ಡಿ.ಗಳು ಕಚೇರಿಯಲ್ಲೆ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಮುಖ್ಯ ಎಂಜಿನಿಯರ್ ಗಳು ಫೀಲ್ಡ್ ಗೆ ಹೋಗಬೇಕು. ಪರಿಸ್ಥಿತಿಯನ್ನು ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು. ಹಿಂದಿನ ಸರಕಾರದಲ್ಲಿ ಉತ್ತಮ ಮಳೆ ಆಗಿದ್ದರೂ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ನಮ್ಮ ಸರಕಾರ ಬಂದ ಮೇಲೆ ಮಳೆ ಕೊರತೆ ಆಗಿ, ಬರಗಾಲ ಬಂದಿದೆ. ಇದನ್ನು ರೈತರಿಗೆ ಮನವರಿಕೆ ಮಾಡಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಅಧಿಕಾರಿಗಳ ಮಾಹಿತಿ: ಛತ್ತೀಸ್‍ಗಢ ಪಿಟ್ ಹೆಡ್ ಪವರ್ ಪ್ಲಾಂಟ್ ಯಾವುದೇ ಪ್ರಗತಿ ಮಾಡಿಲ್ಲ. ಒರಿಸ್ಸಾದಲ್ಲಿರುವ ಮಂದಾಕಿನಿ ಕ್ಯಾಪ್ಟಿವ್ ಗಣಿಯಿಂದ ಕಲ್ಲಿದ್ದಲು ಪಡೆಯಲು ಯಾವುದೇ ಅನುಸರಣೆಯಾಗಿಲ್ಲ. ಕುಸುಮ್ ಸಿ ಅಡಿಯಲ್ಲಿ ಸೌರ ವಿಕೇಂದ್ರೀಕೃತ ಸ್ಥಾವರವನ್ನು 3,37,508 ಪಂಪ್‍ಸೆಟ್‍ಗಳಿಗೆ ಮಂಜೂರು ಮಾಡಲಾಗಿದೆ. ಆದರೆ ಅನುμÁ್ಠನವಾಗಿಲ್ಲ ಅಧಿಕಾರಿಗಳು ಮಾಹಿತಿ ನೀಡಿದರು.

2020-21ರಲ್ಲಿ ರಾಜ್ಯಕ್ಕೆ ಹಂಚಿಕೆಯಾಗಿದ್ದ 7 ಸಾವಿರ ಆಫ್ ಗ್ರಿಡ್/ಸ್ಟ್ಯಾಂಡ್ ಅಲೋನ್ ಸೌರ ಪಂಪ್ ಗಳ ಅಳವಡಿಕೆಯಾಗಿಲ್ಲ. ಇತರೆ ರಾಜ್ಯಗಳಿಗೆ 1 ಲಕ್ಷ ಪಂಪ್ ಗಳ ಹಂಚಿಕೆಯಾಗಿದೆ. ರಾಜ್ಯದ ಪಾಲಾದ 150 ಮೆಗಾ ವ್ಯಾಟ್ ವಿದ್ಯುತ್ತನ್ನು ಹೊಸದಿಲ್ಲಿಗೆ ಹಂಚಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ದೈನಂದಿನ ಬಳಕೆಯು 180 ಮಿಲಿಯನ್ ಯೂನಿಟ್ ನಿಂದ 260 ಮಿಲಿಯನ್ ಯೂನಿಟ್ ಗಳಿಗೆ ಏರಿಕೆಯಾಗಿದೆ. ಗರಿಷ್ಠ ಹಗಲಿನ ವಿದ್ಯುತ್ ಬೇಡಿಕೆ 11 ಸಾವಿರ ಮೆಗಾವ್ಯಾಟ್ ನಿಂದ 16 ಸಾವಿರ ಮೆಗಾ ವ್ಯಾಟ್‍ಗೆ ಏರಿಕೆಯಾಗಿದೆ(ಮಳೆಗಾಲದಲ್ಲಿ). ಜಲವಿದ್ಯುತ್ ಮತ್ತು ಪವನ ವಿದ್ಯುತ್ ಲಭ್ಯತೆಯಲ್ಲಿನ ಕೊರತೆಯಿಂದಾಗಿ, ರಾತ್ರಿಯ ವೇಳೆಯಲ್ಲಿ ಸುಮಾರು 10 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಕೊರತೆ ಎದುರಿಸಲಾಗುತ್ತಿದೆ. ರಾಜ್ಯದಿಂದ 1 ಸಾವಿರ ದಿಂದ 1500 ಮೆಗಾ ವ್ಯಾಟ್ ಖರೀದಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ಹೆಚ್ಚು ವಿದ್ಯುತ್ ಉತ್ಪಾದಿಸಲು ಪ್ರಯತ್ನಗಳು: ಜಲವಿದ್ಯುತ್ ಲಭ್ಯತೆಯಲ್ಲಿ 3 ಸಾವಿರ ದಶಲಕ್ಷ ಯೂನಿಟ್ ರಷ್ಟು ಕಡಿಮೆಯಾಗಿದೆ. ಪ್ರತಿ ದಿನಕ್ಕೆ ಸರಾಸರಿ 10 ದಶಲಕ್ಷ ಯೂನಿಟ್ ಜಲವಿದ್ಯುತ್ತನ್ನು ಗರಿಷ್ಠ ಬೇಡಿಕೆ ಪೂರೈಸಲು ಮತ್ತು ವಿದ್ಯುತ್ ಜಾಲದ ನಿರ್ವಹಣೆಗಾಗಿ ಮಾತ್ರ ಬಳಸಲಾಗುತ್ತಿದೆ. ಹೆಚ್ಚಿನ ಬೇಡಿಕೆಯ ಕಾರಣದಿಂದ ಶಾಖೋತ್ಪನ್ನ ಘಟಕಗಳನ್ನು ಮರುಚಾಲನೆಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ನಾಗಪುರ/ರಾಮಗೊಂಡಂ ಪ್ರದೇಶದಲ್ಲಿ ಮಳೆಯಿಂದಾಗಿ ಕಲ್ಲಿದ್ದಲಿನ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ, ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ. ಈ ಸಮಸ್ಯೆಗಳ ಬಗ್ಗೆ ಕಲ್ಲಿದ್ದಲು ಮಂತ್ರಾಲಯದೊಂದಿಗೆ ವ್ಯವಹರಿಸಲಾಗಿದೆ. ಅಸ್ತಿತ್ವದಲ್ಲಿರುವ ಎಲ್ಲ ಕಲ್ಲಿದ್ದಲು ಸಂಸ್ಥೆಗಳಿಂದ ತಿಂಗಳಿಗೆ 15 ಲಕ್ಷ ಮೆಟ್ರಿಕ್ ಟನ್ ಪಡೆಯಲು ಕ್ರಮವಹಿಸಲಾಗಿದೆ ಎಂದು ಅವರು ಸಭೆಗೆ ತಿಳಿಸಿದರು.

ಸೆಪ್ಟೆಂಬರ್ ತಿಂಗಳಿನಲ್ಲಿ ಎಂಸಿಎಲ್-ಆರ್‍ಎಸ್‍ಆರ್ ನಿಂದ 2 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಕಲ್ಲಿದ್ದಲು ಪಡೆಯಲಾಗಿದೆ. 2.5 ಲಕ್ಷ ಟನ್ ಆಮದು ಮಾಡಿದ ಕಲ್ಲಿದ್ದಲು ಪಡೆಯಲು ಟೆಂಡರ್ ಮಾಡಲಾಗಿದ್ದು ಮೌಲ್ಯಮಾಪನ ಮಾಡಲಾಗುತ್ತಿದೆ, ಆಮದು ಕಲ್ಲಿದ್ದಲಿನಲ್ಲಿ ಉತ್ತಮ ಕಾಲೋರಿಫಿಕ್ ಮೌಲ್ಯ ಇರುವುದರಿಂದ ವಿದ್ಯುತ್ ಉತ್ಪಾದನಾ ಸಾಮಥ್ರ್ಯವನ್ನು ವರ್ಧಿಸುತ್ತದೆ ಎಂದು ಅಧಿಕಾರಿಗಳು ಹೇಳಿದರು.

ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸಹಿತ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X