Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಯಿ ಕಡಿತದಿಂದ ಮೃತಪಟ್ಟರೆ 5 ಲಕ್ಷ ರೂ....

ನಾಯಿ ಕಡಿತದಿಂದ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 Nov 2023 7:58 PM IST
share
ನಾಯಿ ಕಡಿತದಿಂದ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು ನ.15: ಬೀದಿ ನಾಯಿ ಕಡಿದು ವ್ಯಕ್ತಿ ಗಾಯಗೊಂಡಿದ್ದರೆ ಅದಕ್ಕೆ 5 ಸಾವಿರ ರೂ.ಚಿಕಿತ್ಸೆ ವೆಚ್ಚ ನೀಡಬೇಕು ಮತ್ತು ಒಂದು ವೇಳೆ ಮೃತಪಟ್ಟರೇ ಅವರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ.

ವಕೀಲ ರಮೇಶ್ ಎಲ್. ನಾಯಕ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠವು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಭೆ ನಡೆಸಬೇಕು. 4 ವಾರದಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂದು ಸರಕಾರಕ್ಕೆ ಸೂಚಿಸಿದೆ.

ಬೀದಿ ನಾಯಿಗಳಿಗೆ ಆಹಾರ ನೀಡಲು ಮಾರ್ಗಸೂಚಿ ಪ್ರಕಟಿಸಲಾಗಿದೆ. ಜನಸಾಮಾನ್ಯರಿಗೆ ಇದರ ತಿಳಿವಳಿಕೆ ನೀಡಲು ಕ್ರಮ ಕೈಗೊಳ್ಳಬೇಕು. ವಾರ್ತಾ, ಪ್ರಚಾರ ಇಲಾಖೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಹೇಳಿದೆ.

ಈ ವೇಳೆ ಸರಕಾರದ ಪರ ವಕೀಲರು, 2023ರ ಅ.6ರಂದು ನಡೆದ ಸಭೆಯಲ್ಲಿ ಸಂತ್ರಸ್ತರಿಗೆ ನೀಡುವ ಪರಿಹಾರ ವಿಚಾರವಾಗಿ ಚರ್ಚಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಇದಕ್ಕೆ ನ್ಯಾಯ ಪೀಠ ಸಭೆಯ ನಂತರ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿತು.

ಇದನ್ನೂ ಓದಿ >>> ದೊಡ್ಡಬಳ್ಳಾಪುರ: ಮಕ್ಕಳು ಸೇರಿದಂತೆ 14 ಜನರ ಮೇಲೆ ಬೀದಿ‌ ನಾಯಿಗಳ ದಾಳಿ

8 ತಿಂಗಳಲ್ಲಿ 3.5 ಲಕ್ಷ ನಾಯಿ ಕಡಿತ: ಕಳೆದ 8 ತಿಂಗಳಲ್ಲಿ ರಾಜ್ಯದಲ್ಲಿ 3,05,471 ಮಂದಿ ನಾಯಿ ಕಡಿತಕ್ಕೊಳಗಾಗಿದ್ದಾರೆ. ಇದು ಕಳೆದೆರಡು ವರ್ಷಗಳಿಗೆ ಹೋಲಿಸಿದರೆ ಅತಿ ಹೆಚ್ಚಿನ ಪ್ರಕರಣ. 19ಕ್ಕೂ ಅಧಿಕ ಮಂದಿ ರೇಬಿಸ್‌ನಿಂದ ಮೃತಪಟ್ಟಿದ್ದಾರೆ.

ಜನವರಿ ತಿಂಗಳಲ್ಲಿ 40,287 ಮಂದಿಗೆ ನಾಯಿ ಕಚ್ಚಿದರೆ, ಮೇ ತಿಂಗಳಲ್ಲಿ 42,023 ಮಂದಿಗೆ ನಾಯಿ ಕಚ್ಚಿದೆ. ಉಳಿದೆಲ್ಲ ತಿಂಗಳಲ್ಲಿ 30 ಸಾವಿರಕ್ಕೆ ಮೇಲ್ಪಟ್ಟು ಕಡಿತವಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13,205 ಹಾಗೂ ಉಡುಪಿಯಲ್ಲಿ 11,407 ಪ್ರಕರಣಗಳು ದಾಖಲಾಗಿವೆ. ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಪ್ರಕರಣಗಳು ಸಮ ಪ್ರಮಾಣದಲ್ಲಿ ಇದ್ದರೂ, ನಗರ ಭಾಗದಲ್ಲಿ ಕೊಂಚ ಜಾಸ್ತಿಯೇ ಇದೆ ಎನ್ನುವುದು ಇಲಾಖೆಗಳ ಮಾಹಿತಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X