Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ...

ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ

ಮುಷ್ಕರ ಹಿಂಪಡೆಯಲು ಸಿಎಂ ಮನವಿ

ವಾರ್ತಾಭಾರತಿವಾರ್ತಾಭಾರತಿ6 Jan 2024 3:45 PM IST
share
ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ  ಸಮ್ಮತಿ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮತ್ತು ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಲು ಸಮ್ಮತಿ ನೀಡಿದ ಮುಖ್ಯಮಂತ್ರಿಗಳು ಅತಿಥಿ ಉಪನ್ಯಾಸಕರು ಕೂಡಲೇ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು.

ಅವರು ಇಂದು ಮುಷ್ಕರ ನಿರತ ಅತಿಥಿ ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿದ್ದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು.

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಇದರೊಂದಿಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಡು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.

ಇದರೊಂದಿಗೆ ನೇಮಕಾತಿಯಲ್ಲಿ ಅವರ ಸೇವಾನುಭವ ಆಧರಿಸಿ, ವೈಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸ್ ಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಮ್ಮತಿಸಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಎಂ.ಎಸ್. ಶ್ರೀಕರ್‌, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ. ಜಗದೀಶ್‌ ಮತ್ತು ಇತರ ಹಿರಿಯ ಅಧಿಕಾರಿಗಳು, ಅತಿಥಿ ಉಪನ್ಯಾಸಕರ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X