Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ ...

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ 5,551 ಕೋಟಿ ರೂ. ಜಪ್ತಿ; ಅಗತ್ಯದ ಬಗ್ಗೆ ಹೇಳಿಕೆ ನೀಡಿಲ್ಲ ಎಂದು ಹೈಕೋರ್ಟ್‌ನಲ್ಲಿ ಶಿಯೋಮಿ ವಾದ

ಡಿ.12ಕ್ಕೆ ವಿಚಾರಣೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ21 Nov 2023 11:42 PM IST
share
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ  5,551 ಕೋಟಿ ರೂ. ಜಪ್ತಿ; ಅಗತ್ಯದ ಬಗ್ಗೆ ಹೇಳಿಕೆ ನೀಡಿಲ್ಲ ಎಂದು ಹೈಕೋರ್ಟ್‌ನಲ್ಲಿ ಶಿಯೋಮಿ ವಾದ

ಬೆಂಗಳೂರು, ನ.21: ಶಿಯೋಮಿ ಬ್ಯಾಂಕ್ ಖಾತೆಗಳಿಂದ 5,551 ಕೋಟಿ ರೂ. ವಶಕ್ಕೆ ಪಡೆದಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಸೆಕ್ಷನ್ 37ಎ ಅಡಿ ಏಕೆ ಅದು ಅಗತ್ಯ ಎಂಬುದರ ಬಗ್ಗೆ ಹೇಳಿಕೆ ನೀಡಲಾಗಿಲ್ಲ ಎಂದು ಶಿಯೋಮಿ ಕಂಪೆನಿ ಹೈಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯದ(ಈ.ಡಿ) ಜಪ್ತಿ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿತು.

ಚೀನಾದ ಶಿಯೋಮಿ ತಂತ್ರಜ್ಞಾನ ಸಂಸ್ಥೆಗೆ ಸೇರಿದ್ದ 5,551 ಕೋಟಿ ರೂ. ಜಪ್ತಿ ಮಾಡಿದ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಶಿಯೋಮಿ ಟೆಕ್ನಾಲಜಿ ಪ್ರೈವೆಟ್ ಲಿಮಿಟೆಡ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಶಿಯೋಮಿ ಪರ ವಾದಿಸಿದ ವಕೀಲರು, ಫೆಮಾದ ಸೆಕ್ಷನ್ 37ಎ ಸ್ವೇಚ್ಛೆಯಿಂದ ಕೂಡಿದೆ. ಯಾವಾಗ ಮತ್ತು ಹೇಗೆ ಆ ಅಧಿಕಾರವನ್ನು ಬಳಕೆ ಮಾಡಬೇಕು ಎಂಬುದಕ್ಕೆ ಯಾವುದೇ ಮಾರ್ಗಸೂಚಿಗಳನ್ನು ಪ್ರಾಧಿಕಾರಗಳಿಗೆ ರೂಪಿಸಲಾಗಿಲ್ಲ. ಇದು ಪ್ರಾಧಿಕಾರಗಳಿಗೆ ಅನಿಯಂತ್ರಿತ ಅಧಿಕಾರ ನೀಡಿದೆ ಎಂದು ಪೀಠಕ್ಕೆ ತಿಳಿಸಿದರು.

ಜಪ್ತಿಮಾಡಲು ಅಥವಾ ತಾತ್ಕಾಲಿಕವಾಗಿ ಆಸ್ತಿಯನ್ನು ಜಪ್ತಿಮಾಡಲು ಇತರ ಶಾಸನದಲ್ಲಿ ಅಧಿಕಾರ ನೀಡಲಾಗಿದ್ದು, ಇವುಗಳಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಅಡಕಗೊಳಿಸಲಾಗಿದೆ. ಜಪ್ತಿಆದೇಶಕ್ಕೂ ಮುನ್ನ ಇದನ್ನು ಪೂರೈಸಬೇಕು.ಆದರೆ, ಫೆಮಾ ಸೆಕ್ಷನ್ 37ಎ ಅಡಿ ಯಾವಾಗ ಜಪ್ತಿ ಆದೇಶ ಮಾಡುವುದು ಅಗತ್ಯ ಎಂಬುದಕ್ಕೆ ಸಂಬಂಧಿಸಿದ ಮಾರ್ಗಸೂಚಿ ಇಲ್ಲ ಎಂದು ಪೀಠಕ್ಕೆ ಹೇಳಿದರು.

ಸೆಕ್ಷನ್ 37ಎ ಅಡಿ ಏಕೆ ಅಧಿಕಾರ ಚಲಾಯಿಸಲಾಗಿದೆ? ಏನನ್ನೂ ಉಲ್ಲೇಖಿಸಲಾಗಿಲ್ಲ. ಇದನ್ನು ಪ್ರಾಧಿಕಾರದ ವಿವೇಚನೆಗೆ ಬಿಡಲಾಗಿದೆ. ಸೆಕ್ಷನ್ 37ಎ ಚಲಾಯಿಸುವಾಗ ಸ್ವತಂತ್ರ ಮತ್ತು ಪ್ರಬಲವಾದ ಕಾರಣ ಇರಬೇಕು. ನಮ್ಮ ಖಾತೆಯಲ್ಲಿನ 5,551 ಸಾವಿರ ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. ಇದನ್ನು ಹೇಗೆ ಮರಳಿಸುತ್ತಾರೆ? ಇದರಿಂದಾಗಿ ಈ ದೇಶದಲ್ಲಿ ನಾನು ಉದ್ಯಮ ನಡೆಸಲಾಗುತ್ತಿಲ್ಲ ಎಂದರು.

ಜಪ್ತಿ ಆದೇಶ ಮಾಡುವಾಗ ಸರಕಾರದ ಪ್ರಾಧಿಕಾರಗಳು ಉಲ್ಲೇಖಿಸಿರುವ ಎಲ್ಲ ಜಮೆಗಳು ಕಾನೂನುಬದ್ಧ ಜಮೆಗಳಾಗಿವೆ. ಹೀಗಾಗಿ, ಅದು ಸೆಕ್ಷನ್ 4ರ ಅಡಿ ಉಲ್ಲಂಘನೆಯಲ್ಲ. ಏನನ್ನೂ ರಹಸ್ಯವಾಗಿ ಮಾಡಿಲ್ಲ ಎಂದರು.

ಶಿಯೋಮಿ ಬ್ಯಾಂಕ್ ಖಾತೆಯನ್ನು ಏಕೆ ಜಪ್ತಿ ಮಾಡಲಾಗುತ್ತಿದೆ ಎಂಬುದಕ್ಕೆ ಒಂದೇ ಒಂದು ವಿಚಾರವನ್ನು ಹೇಳಲಾಗಿಲ್ಲ. ಫೆಮಾದ ಸೆಕ್ಷನ್ 4ಅನ್ನು ಉಲ್ಲಂಘಿಸಿರುವ ಆರೋಪ ಬಂದ ಎಲ್ಲ ಪ್ರಕರಣಗಳಲ್ಲೂ ಸೆಕ್ಷನ್ 37ಎ ಚಲಾಯಿಸಬಹುದೇ? ಎಂದರು.

ಆಗ ಪೀಠವು ಆ ಪ್ರಶ್ನೆಯನ್ನು ನೀವು ನಮಗೆ ಹಾಕಿದರೆ ಅದು ಆಗಬಹುದು. ಅದು ಸಾಧ್ಯವಿದೆ ಎಂದು ಹೇಳುತ್ತೇವೆ ಎಂದಿತು. ಇದಕ್ಕೆ ಶಿಯೋಮಿ ಪರ ವಕೀಲರು, ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮ ಬೀರಬಲ್ಲ ಗಂಭೀರ ಕಾನೂನು ಪಿಎಂಎಲ್‌ಎದಲ್ಲೂ ಸುರಕ್ಷತಾ ಕ್ರಮಗಳಿವೆ ಎಂದರು. ವಾದ ಆಲಿಸಿದ ಪೀಠವು ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X