Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 33ಲಕ್ಷ ರೈತರ ಖಾತೆಗೆ 628 ಕೋಟಿ ರೂ. ಬರ...

33ಲಕ್ಷ ರೈತರ ಖಾತೆಗೆ 628 ಕೋಟಿ ರೂ. ಬರ ಪರಿಹಾರದ ಹಣ ಬಿಡುಗಡೆ: ಸಚಿವ ಕೃಷ್ಣ ಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ11 Feb 2024 6:16 PM IST
share
33ಲಕ್ಷ ರೈತರ ಖಾತೆಗೆ 628 ಕೋಟಿ ರೂ. ಬರ ಪರಿಹಾರದ ಹಣ ಬಿಡುಗಡೆ: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ರಾಜ್ಯ ಸರಕಾರ ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ಈಗಾಗಲೇ 2ಸಾವಿರ ಕೋಟಿ ರೂಪಾಯಿ ಅನುದಾನ ನಿಗದಿಪಡಿಸಿದ್ದು, ಅದರಂತೆ 628 ಕೋಟಿ ರೂಪಾಯಿ ನೇರವಾಗಿ 33 ಲಕ್ಷ ರೈತರ ಖಾತೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ರವಿವಾರ ವಿಧಾನಸೌಧದ ತಮ್ಮ ಸಮಿತಿ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗಳಿಗೂ ಬರ ಪರಿಹಾರದ ಹಣವನ್ನು ರಾಜ್ಯ ಸರಕಾರದಿಂದ ಬಿಡುಗಡೆ ಮಾಡಲಾಗುವುದು ಎಂದರು.

ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ಹಾಗೂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಬರ ಪರಿಹಾರ ಬಿಡುಗಡೆ ಮಾಡಿರುವ ರೈತ ಪಟ್ಟಿಯನ್ನು ಪ್ರಕಟ ಮಾಡಬೇಕು ಎಂದು ಸೂಚನೆ ನೀಡಿರುವ ಹಿನ್ನೆಲೆ, ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ರೈತರ ಹೆಸರು ಬಿಟ್ಟು ಹೋಗಿದ್ದಲ್ಲಿ, ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ಭೇಟಿ ನೀಡಿ, ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯ ಸರಕಾರವು ರಾಜ್ಯದ 223 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ಘೋಷಿಸಿದ್ದು, ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ, ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಗಳ ಖಾತೆಗಳಿಗೆ 870 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಪರಿಹಾರದ ಹಣವನ್ನು ಸಮರ್ಪಕವಾಗಿ ಬಳಸಲು, ಶಾಸಕರ ಅಧ್ಯಕ್ಷತೆಯಲ್ಲಿ 223 ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದ್ದು, ರಾಜ್ಯಾದ್ಯಂತ ಇಲ್ಲಿಯವರೆಗೆ, 431 ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಲಾಗಿದೆ ಎಂದು ಅವರು ವಿವರಿಸಿದರು.

ಅದೇ ರೀತಿ, ರಾಜ್ಯದ 156 ಹಳ್ಳಿಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ಬಾಡಿಗೆ ಆಧಾರದ ಮೇಲೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಅಲ್ಲದೇ 46 ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದಲ್ಲಿನ 46 ವಾರ್ಡ್‍ಗಳಲ್ಲಿ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಐದು ವರ್ಷದ ಅಂಕಿ-ಅಂಶಗಳ ಆಧಾರದಮೇಲೆ, ಮುಂಜಾಗ್ರತಾ ಕ್ರಮವಾಗಿ, ಮುಂಬರುವ ದಿನಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ 782 ಗ್ರಾಮಗಳು ಹಾಗೂ 1193 ವಾರ್ಡ್‍ಗಳನ್ನು ಗುರುತಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಸಹ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ರಮವನ್ನು ಕೈಗೊಳ್ಳಲಾಗಿದೆ ಎಂದೂ ಅವರು ಹೇಳಿದರು.

ಕುಡಿಯುವ ನೀರಿನ ಸಮಸ್ಯೆಯ ನಿರ್ವಹಣೆಗೆ ಹೊಸ ಕೊಳವೆಬಾವಿಗಳ ಕೊರೆಯುವ ಅವಶ್ಯಕತೆ ಇದ್ದಲ್ಲಿ, ಕೊಳವೆ ಬಾವಿಗಳನ್ನು ಕೊರೆಯಲು ಕ್ರಮವಹಿಸುವಂತೆ ಸಿಎಂ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೂಚಿಸಿದ್ದಾರೆ. ಮೇವಿನ ಸಮಸ್ಯೆ ನೀಗಿಸಲು ನವೆಂಬರ್ ತಿಂಗಳಲ್ಲಿ ಮೊದಲ ಹಂತವಾಗಿ 7ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್‍ಗಳನ್ನು ರೈತರಿಗೆ ನೀಡಲಾಗಿದ್ದು, ಎರಡನೆ ಹಂತವಾಗಿ 7ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್‍ಗಳನ್ನು ರೈತರಿಗೆ ವಿತರಿಸಲು ಪಶುಸಂಗೋಪನೆ ಇಲಾಖೆಗೆ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X