Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 800 ಉರ್ದು, 200 ಮರಾಠಿ ಮಾಧ್ಯಮ ಶಾಲಾ...

800 ಉರ್ದು, 200 ಮರಾಠಿ ಮಾಧ್ಯಮ ಶಾಲಾ ಶಿಕ್ಷಕರ ನೇಮಕಾತಿಗೆ ಮುಖ್ಯಮಂತ್ರಿ ಅನುಮೋದನೆ?

ವಾರ್ತಾಭಾರತಿವಾರ್ತಾಭಾರತಿ22 Aug 2026 12:00 AM IST
share
800 ಉರ್ದು, 200 ಮರಾಠಿ ಮಾಧ್ಯಮ ಶಾಲಾ ಶಿಕ್ಷಕರ ನೇಮಕಾತಿಗೆ ಮುಖ್ಯಮಂತ್ರಿ ಅನುಮೋದನೆ?

ಬೆಂಗಳೂರು : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 800 ಉರ್ದು ಹಾಗೂ 200 ಮರಾಠಿ ಭಾಷಾ ಮಾಧ್ಯಮ ಶಿಕ್ಷಕರ ನೇಮಕಾತಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನುಮೋದನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಶುಕ್ರವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್, ರಾಜ್ಯದ ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ವಿಷಯ ಪ್ರಸ್ತಾಪಿಸಿದರು ಎಂದು ಹೇಳಲಾಗಿದೆ.

ರಾಜ್ಯಾದ್ಯಂತ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜೆ. ಆದರೆ, ಈ ನೇಮಕಾತಿ ಮುಖ್ಯವಾಗಿ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮದ ಶಾಲೆಗಳಿಗೆ ಮಾತ್ರ ಸೀಮಿತವಾಗಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ ಎಂದು ಯು.ಟಿ.ಖಾದರ್ ಸಭೆಯ ಗಮನ ಸೆಳೆದರು ಎಂದು ತಿಳಿದು ಬಂದಿದೆ.

ಈ ಹುದ್ದೆಗಳಲ್ಲಿ 6,967 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹಾಗೂ 8,033 ಹುದ್ದೆಗಳನ್ನು ರಾಜ್ಯದ ಇತರೆ ಭಾಗಗಳಿಗೆ ಹಂಚಿಕೆ ಮಾಡಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಉರ್ದು, ಮರಾಠಿ, ತಮಿಳು, ತೆಲುಗು, ಹಿಂದಿ ಮುಂತಾದ ಇತರ ಮಾಧ್ಯಮದ ಶಾಲೆಗಳಿಗೆ ಪ್ರತ್ಯೇಕ ನೇಮಕಾತಿ ಅಥವಾ ಹುದ್ದೆಗಳ ಹಂಚಿಕೆ ಮಾಡಲಾಗಿಲ್ಲ ಎಂದು ಖಾದರ್ ತಿಳಿಸಿದರು ಎಂದು ಹೇಳಲಾಗಿದೆ.

ಅಲ್ಲದೇ, ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಭಾಪತಿ ಸಲೀಂ ಅಹ್ಮದ್, ಅಲ್ಪಸಂಖ್ಯಾತ ಸಮುದಾಯದ ಶಾಸಕರು, ಸಚಿವರೊಂದಿಗೆ ನಡೆಸಿದ ಸಭೆಯ ಕುರಿತು ಮುಖ್ಯಮಂತ್ರಿಗೆ ಯು.ಟಿ.ಖಾದರ್ ಮನವರಿಕೆ ಮಾಡಿಕೊಟ್ಟರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 800 ಉರ್ದು ಹಾಗೂ 200 ಮರಾಠಿ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿದರು ಎಂದು ತಿಳಿದು ಬಂದಿದೆ.

Tags

school teachers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X