Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 9 ತಾಲೂಕುಗಳು ಬರಪೀಡಿತ ಪಟ್ಟಿಗೆ...

9 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ; ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ : ಜಿ.ಪರಮೇಶ್ವರ್‌

"ಬರ ಪರಿಹಾರದ ಅಂತಿಮ ಮೆಮೊರಾಂಡಮ್ ಸಿದ್ಧತೆ; ಶೀಘ್ರದಲ್ಲೇ ಕೇಂದ್ರಕ್ಕೆ ನಿಯೋಗ"

ವಾರ್ತಾಭಾರತಿವಾರ್ತಾಭಾರತಿ14 Oct 2026 1:27 PM IST
share
9 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ; ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ : ಜಿ.ಪರಮೇಶ್ವರ್‌

ಬೆಂಗಳೂರು : ರಾಜ್ಯದಲ್ಲಿ ಬರದಿಂದ ಉಂಟಾಗಿರುವ ನಷ್ಟದ ಕುರಿತು ಅಂತಿಮ ಮೆಮೊರಾಂಡಮ್ ಸಿದ್ಧಪಡಿಸಲಾಗುತ್ತಿದ್ದು, ಬಹುಶಃ ಇನ್ನೊಂದು ವಾರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್‌ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದು ಮತ್ತೆ 9 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗುತ್ತಿದ್ದು, ಈ ಮೂಲಕ ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಲಿದೆ. ಈ ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಇನ್ನುಳಿದ ಕೆಲವು ತಾಲೂಕುಗಳಲ್ಲಿ ಟ್ರಿಗರ್-1 ಮಾನದಂಡಗಳ ಪರಿಶೀಲನೆ ನಡೆಯುತ್ತಿದೆ. ಅವುಗಳು ಅರ್ಹತೆ ಪಡೆದರೆ ಗ್ರೌಂಡ್ ಟ್ರೂಥಿಂಗ್‌ಗೆ ಕಳುಹಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಬರದಿಂದ ಉಂಟಾಗಿರುವ ಒಟ್ಟು ನಷ್ಟದ ಅಂದಾಜು ಅಂತಿಮ ಮೆಮೊರಾಂಡಮ್ ಸಿದ್ಧಪಡಿಸುವ ಸಂದರ್ಭದಲ್ಲಿ ಸ್ಪಷ್ಟವಾಗಲಿದೆ. ಅದರ ಪ್ರಮಾಣಕ್ಕೆ ಅನುಗುಣವಾಗಿ ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಗಳ ಪ್ರಕಾರ ಪರಿಹಾರದ ಮೊತ್ತವನ್ನು ಲೆಕ್ಕಹಾಕಲಾಗುವುದು. ಕಳೆದ ವರ್ಷ ಸುಮಾರು ₹18,000 ಕೋಟಿ ಪರಿಹಾರ ಕೋರಲಾಗಿತ್ತು. ಈ ಬಾರಿ ಇಡೀ ರಾಜ್ಯದಲ್ಲಿ ನಷ್ಟ ಸಂಭವಿಸಿದ್ದು, ಈಗಾಗಲೇ 226 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಹಂತ ತಲುಪಿದ್ದೇವೆ. ಇನ್ನಷ್ಟು ತಾಲೂಕುಗಳು ಅರ್ಹತೆ ಪಡೆದರೆ ನಷ್ಟದ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ಹೀಗಾಗಿ, ಈ ಬಾರಿ ಕೇಂದ್ರದಿಂದ ಕೋರಲಾಗುವ ಪರಿಹಾರದ ಮೊತ್ತವೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳನ್ನು ಸಡಿಲಗೊಳಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಈ ಕುರಿತು ನಾನು ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ರ ಬರೆದಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ನನಗೆ ಕೇಂದ್ರ ಕೃಷಿ ಸಚಿವರಿಂದ ಪತ್ರ ಬಂದಿದ್ದು, ವಿಷಯವನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಇದನ್ನು ಹೊರತುಪಡಿಸಿ ಕೇಂದ್ರದಿಂದ ಬೇರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದರು.

ಅಂತಿಮ ಮೆಮೊರಾಂಡಮ್ ಸಿದ್ಧವಾದ ಬಳಿಕ ಮುಖ್ಯಮಂತ್ರಿ, ನಾನು ಹಾಗೂ ಇತರರನ್ನು ಒಳಗೊಂಡ ನಿಯೋಗ ದೆಹಲಿ ಭೇಟಿಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ನಿಯೋಗವು ಖುದ್ದಾಗಿ ದೆಹಲಿಗೆ ತೆರಳಿ ಕೇಂದ್ರ ಸರ್ಕಾರಕ್ಕೆ ಮೆಮೊರಾಂಡಮ್ ಸಲ್ಲಿಸಲಿದೆ. ನಷ್ಟದ ವಿವರವನ್ನು ಪ್ರಸ್ತಾಪಿಸಿ ಪರಿಹಾರಕ್ಕೆ ಕೋರಲಾಗುವುದು ಎಂದು ತಿಳಿಸಿದರು.

ಎಸ್‌ಸಿ-ಎಸ್‌ಟಿ ಮೀಸಲಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ವಿಚಾರವಾಗಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕೇ ಅಥವಾ ಒಂಬತ್ತನೇ ಶೆಡ್ಯೂಲ್‌ಗೆ ಸೇರಿಸುವಂತೆ ಭಾರತ ಸರ್ಕಾರಕ್ಕೆ ಮನವಿ ಸಲ್ಲಿಸಬೇಕೇ ಎಂಬುದರ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿದೆ. ಸಚಿವ ಸಂಪುಟದ ನಿರ್ಧಾರದ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

Tags

G.Parameshwardrought-hit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X