Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭಾರೀ ಮಳೆಯಿಂದ ಎಸ್ಕಾಂಗಳಿಗೆ 96.66 ಕೋಟಿ...

ಭಾರೀ ಮಳೆಯಿಂದ ಎಸ್ಕಾಂಗಳಿಗೆ 96.66 ಕೋಟಿ ರೂ. ನಷ್ಟ : ಸಚಿವ ಕೆ.ಜೆ.ಜಾರ್ಜ್‌

"ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಿಸಿ ಕಾರ್ಯಾಚರಣೆ"

ವಾರ್ತಾಭಾರತಿವಾರ್ತಾಭಾರತಿ30 July 2024 4:55 PM IST
share
ಭಾರೀ ಮಳೆಯಿಂದ ಎಸ್ಕಾಂಗಳಿಗೆ 96.66 ಕೋಟಿ ರೂ. ನಷ್ಟ : ಸಚಿವ ಕೆ.ಜೆ.ಜಾರ್ಜ್‌

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಎಸ್ಕಾಂಗಳಿಗೆ ಒಟ್ಟಾರೆ 96.66 ಕೋಟಿ ರೂ. ನಷ್ಟವಾಗಿದ್ದು, ಹಾನಿಗೊಳಗಾಗಿರುವ ಸಾವಿರಾರು ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು ಹಾಗೂ ಲೈನ್‌ಗಳನ್ನು ದುರಸ್ತಿಗೊಳಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಠಿಯಿಂದಾಗಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ಪರಿಸ್ಥಿತಿಗಳ ಕುರಿತು ಎಲ್ಲಾ ಎಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

"ಮಳೆ ಮತ್ತು ಗಾಳಿಯಿಂದ 53,816 ಕಂಬಗಳು, 3,924 ಟ್ರಾನ್ಸ್ ಫಾರ್ಮರ್ ಗಳು, 1,120 ಕಿ.ಮೀ. ವಿದ್ಯುತ್ ತಂತಿಗಳು ಹಾನಿಗೊಳಗಾಗಿದ್ದು. ಈ ಪೈಕಿ 51,119 ಕಂಬಗಳು, 3,918 ಟ್ರಾನ್ಸ್ ಫಾರ್ಮರ್ ಗಳು, 1,063 ಕಿ.ಮೀ. ವಿದ್ಯುತ್ ತಂತಿಗಳನ್ನು ದುರಸ್ತಿಗೊಳಿಸುವ ಕಾರ್ಯ ಪೂರ್ಣಗೊಂಡಿದೆ. ಬಾಕಿ ಉಳಿದ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಮರ್ಪಕ ವಿದ್ಯುತ್ ಪೂರೈಕೆಗೆ ಎಸ್ಕಾಂ ಸಿಬ್ಬಂದಿ ಸತತವಾಗಿ ಶ್ರಮಿಸುತ್ತಿದ್ದಾರೆ," ಎಂದರು.

"ವಿದ್ಯುತ್ ಕಂಬ, ತಂತಿ, ಟ್ರಾನ್ಸ್ ಫಾರ್ಮರ್‌ಗಳ ದುರಸ್ತಿಗೆ ಮೆಸ್ಕಾಂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಭಾರಿ ಮಳೆ ಬೀಳುತ್ತಿರುವ ಮಲೆನಾಡು, ಕರಾವಳಿ ಮತ್ತು ಬೆಳಗಾವಿ ಭಾಗಗಳಲ್ಲಿ ನೀರಿನ ಮಧ್ಯೆಯೂ ಕೆಲಸ ಮಾಡುತ್ತಿದ್ದಾರೆ. ಹೆಚ್ಚು ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಹೆಚ್ಚುವರಿ ಲೈನ್ ಮೆನ್ ಗಳನ್ನು ನೇಮಿಸುವುದರ ಜತೆಗೆ ಗುತ್ತಿಗೆದಾರರ ನೆರವಿನೊಂದಿಗೆ ತಂಡಗಳನ್ನು ಮಾಡಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯುತ್ ಮರು ಸಂಪರ್ಕಕ್ಕೆ ಕಂಬಗಳು, ಕಂಡಕ್ಟರ್ ಗಳು, ತಂತಿಗಳ ಕೊರತೆಯಾಗದಂತೆ ಮೊದಲೇ ಸಂಗ್ರಹಿಸಿಟ್ಟುಕೊಳ್ಳಲಾಗಿತ್ತು. ಇದರಿಂದ ಮಳೆಯಿಂದ ಆಗಿರುವ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲಾಗುತ್ತಿದೆ," ಎಂದು ತಿಳಿಸಿದರು.

"ತುರ್ತು ಪರಿಸ್ಥಿತಿಗೆ ಸ್ಪಂದಿಸಲು ಅನುಕೂಲವಾಗುವಂತೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಹಾರ ಕಾರ್ಯ ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಳೆ ಮತ್ತು ಗಾಳಿಯಿಂದ ಸದ್ಯಕ್ಕೆ ಸಾಕಷ್ಟು ಸಮಸ್ಯೆಯಾಗಿದ್ದರೂ ಜಲಾಶಯಗಳು ತುಂಬುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ಜಲ ವಿದ್ಯುತ್ ಉತ್ಪಾದನೆಗೆ ಅನುಕೂಲವಾಗುತ್ತದೆ", ಎಂದು ಹೇಳಿದರು.

ಕುಸುಮ್ - ಜಂಟಿ ಸರ್ವೇ :"ಕೃಷಿಗೆ ಸೌರ ಪಂಪ್ ಸೆಟ್ ಗಳನ್ನು ಒದಗಿಸುವ ಕುಸುಮ್ ಬಿ ಯೋಜನೆಯಡಿ ಆನ್ ಲೈನ್ ಮೂಲಕ 26,238 ಅರ್ಜಿಗಳು ಬಂದಿದ್ದು, ಈ ಹಿಂದಿನ ಅನಧಿಕೃತ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಅಡಿಯಲ್ಲಿ 10,073 ಬಂದಿರುವ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ. ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿರುವವರ ಪಂಪ್ ಸೆಟ್ ಗಳು ಗ್ರಿಡ್ ನಿಂದ 500 ಮೀಟರ್ ಒಳಗೆ ಇದ್ದರೆ ವಿದ್ಯುತ್ ಪಂಪ್ ಸೆಟ್ ಒದಗಿಸಲಾಗುವುದು. ಉಳಿದವರಿಗೆ ಸೌರ ಪಂಪ್ ಸೆಟ್ ಒದಗಿಸಲಾಗುವುದು. ಇದಕ್ಕೆ ಫಲಾನುಭವಿಗಳು ಶೇ. 20ರಷ್ಟು ಅನುದಾನ ಭರಿಸಿದರೆ ಉಳಿದ ಶೇ. 30ರಷ್ಟನ್ನು ಕೇಂದ್ರ ಸರ್ಕಾರ ಮತ್ತು ಶೇ. 50ನ್ನು ರಾಜ್ಯ ಸರ್ಕಾರ ಭರಿಸುತ್ತದೆ. ಬಂದಿರುವ ಅರ್ಜಿಗಳ ಆಧಾರದ ಮೇಲೆ ಸರ್ವೇ ಕಾರ್ಯ ನಡೆಸಲಾಗುತ್ತಿದ್ದು, ಈ ಕೆಲಸ ಮುಗಿದ ಕೂಡಲೇ ಪಂಪ್ ಸೆಟ್ ಒದಗಿಸಲಾಗುವುದು," ಎಂದು ಸಚಿವರು ಮಾಹಿತಿ ನೀಡಿದರು.

ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X