Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. BJP ಟಿಕೆಟ್ ಕೊಡಿಸುವುದಾಗಿ ನಿವೃತ್ತ...

BJP ಟಿಕೆಟ್ ಕೊಡಿಸುವುದಾಗಿ ನಿವೃತ್ತ ಅಧಿಕಾರಿಗೆ ವಂಚನೆ ಆರೋಪ: ಎಫ್‌ಐಆರ್‌ ದಾಖಲು

ನಳಿನ್ ಕುಮಾರ್ ಕಟೀಲು ಅವರ ಹೆಸರು ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ22 Oct 2023 10:13 PM IST
share
BJP ಟಿಕೆಟ್ ಕೊಡಿಸುವುದಾಗಿ ನಿವೃತ್ತ ಅಧಿಕಾರಿಗೆ ವಂಚನೆ ಆರೋಪ: ಎಫ್‌ಐಆರ್‌ ದಾಖಲು

ಬೆಂಗಳೂರು, ಅ.22: ಚೈತ್ರಾ ವಂಚನೆ ಪ್ರಕರಣದ ಮಾದರಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎಸ್.ಪಿ. ಮತ್ತು ಕೊಟ್ಟೂರಿನ ರೇವಣಸಿದ್ದಪ್ಪ ಅವರು 2 ಕೋಟಿ ರೂ.ಗೂ ಅಧಿಕ ಹಣವನ್ನು ಪಡೆದಿದ್ದು, ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರೂ ಶಾಮೀಲಾಗಿದ್ದಾರೆ. ಹಣವನ್ನು ವಾಪಾಸ್ ಕೊಡುವಂತೆ ಒತ್ತಾಯಿಸಿದರೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಲೋಕೋಪಯೋಗಿ (ಪಿಡಬ್ಲ್ಯುಡಿ) ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಗಂಭೀರ ಆರೋಪ ಮಾಡಿದ್ದಾರೆ.

ರವಿವಾರ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿರುವ ತನ್ನ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಟ್ಟೂರಿನ ರೇವಣ ಸಿದ್ದಪ್ಪ ನನ್ನ ನಿವೃತ್ತಿ ಕಾರ್ಯ ಕ್ರಮದಲ್ಲಿ ಪರಿಚಯವಾಗಿ 2023ರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ನನ್ನನ್ನು ಪದೇ ಪದೇ ಭೇಟಿ ಮಾಡಿ ಬಿಜೆಪಿಯ ಟಿಕೆಟನ್ನು ನಿಮಗೆ ಕೊಡಿಸುವೆ, ನೀವು ಟಿಕೆಟ್ ಪಡೆಯಲು ಯೋಗ್ಯರು.. ಎಂದು ಪುಸಲಾಯಿಸುವ ಮಾತುಗಳನ್ನು ಹೇಳಿ ನನಗೆ ಟಿಕೆಟ್ ಮೇಲೆ ಶ್ರದ್ಧೆ ಬರುವ ರೀತಿಯಲ್ಲಿ ನಡೆದುಕೊಂಡಿದ್ದರು. 2022ರ ಅ.23ರಂದು ರೇವಣಸಿದ್ದಪ್ಪ ನನ್ನನ್ನು ಬೆಂಗಳೂರಿಗೆ ಕರೆತಂದು ಒಂದು ಹೋಟೆಲ್ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದರು ಎಂದು ವಿವರಿಸಿದರು.

ಇದನ್ನೂ ಓದಿ >> MLA ಟಿಕೆಟ್ ಕೊಡಿಸುವುದಾಗಿ ಪುತ್ತೂರಿನ ಬಿಜೆಪಿ ಮುಖಂಡನಿಂದ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ಶೇಖರ್ ಎಸ್.ಪಿ. ನನಗೆ ಪರಿಚಯ ಆದ ಮೇಲೆ, ಮಲ್ಲೇಶ್ವರದ ಬಿಜೆಪಿ ಕಚೇರಿ ಜಗನ್ನಾಥ‘ವನಕ್ಕೆ ಕರೆದುಕೊಂಡು ಹೋಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಸಿದರು. ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್ ವಿಚಾರದ ಎಲ್ಲ ವ್ಯವಹಾರವನ್ನು ಶೇಖರ್ ಎನ್.ಪಿ. ಅವರ ಬಳಿಯೇ ಮಾತನಾಡಿ ಎಂದು ತಿಳಿಸಿದರು.

ಶೇಖರ್ ಎನ್.ಪಿ. ನನ್ನ ಬಳಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಕೇಳಿದರು. ಟಿಕೆಟ್ ಸಿಗದೇ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ ನೀಡುತ್ತೇನೆಂದು ತಿಳಿಸಿದರು. ಹೀಗೆ 2022ರ ಅ.9ರಿಂದ ಆರಂ‘ವಾದ ನಮ್ಮ ಹಣದ ವ್ಯವಹಾರ ಎಪ್ರಿಲ್ 2023ಕ್ಕೆ 2.55 ಕೋಟಿ ರೂ. ಪಡೆದುಕೊಂಡಿದ್ದಾರೆ ಎಂದು ಅವರು ದೂರಿದರು.

2022ರ ಅ.15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಎನ್.ಪಿ. ಕುಂದಾಪುರದ ಅರ್ಜುನ ಎಂಬವನನ್ನು ಕಳುಹಿಸಿ 50 ಲಕ್ಷ ರೂ. ಪಡೆದಿದ್ದಾರೆ. ಆನಂತರ ಆನ್ಲೈನ್ ಪೇಮೆಂಟ್ ಸೇರಿ ಇದೇ ರೀತಿಯಲ್ಲಿ 1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸಂದಾಯವಾಗಿದೆ ಎಂದು ಶಿವಮೂರ್ತಿ ವಿವರ ನೀಡಿದರು.

ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದು ಬಿನ್ ಸಿದ್ದಲಿಂಗಪ್ಪ ಒಂದು ಹೋಟೆಲ್‌ ಗೆ ಕರೆದುಕೊಂಡು ಹೋಗಿ, ಬಿಜೆಪಿ ಹಿರಿಯ ನಾಯಕರಿಗೆ ಮತ್ತು ಇತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ನಗದನ್ನು ಕುಗ್ಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸೆಸ್ಸ್ ಮುಖಂಡರಾದ ನಾಗಣ್ಣ ಅವರು ಪಡೆದಿರುತ್ತಾರೆ ಎಂದು ಶಿವಮೂರ್ತಿ ತಿಳಿಸಿದರು.

ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಾಟ ಮಾರಿ ನನ್ನ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ಮಾಡಿ, ನನ್ನ ಆಪ್ತ ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರ(ಎಸ್ಸಿ)ದ ಬಿಜೆಪಿ ಟಿಕೆಟ್ ನನಗೆ ಬರುವುದಿಲ್ಲ. ಬದಲಿಗೆ ಬಿ.ರಾಮು ಎಂಬವರಿಗೆ ಸಿಗುತ್ತದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಇದರಿಂದ ಆಘಾತವಾದ ನನಗೆ ಏನು ಮಾಡಬೇಕೆಂದು ತಿಳಿಯದೆ ಮೇಲೆ ತಿಳಿಸಿರುವ ಹಣ ಪಡೆದವರಿಗೆ ಕರೆ ಮಾಡಿದಾಗ ಒಂದು ತಿಂಗಳು ಅವರು ನನ್ನ ಕರೆಯನ್ನು ಸ್ವೀಕರಿಸಲಿಲ್ಲ. ಬೇರೆಯವರ ನಂಬರಿನಿಂದ ಕರೆ ಮಾಡಿದಾಗ ಸ್ವೀಕರಿಸಿದ್ದಾರೆ. ಆಗ ನನ್ನ ಬಳಿ ಮಾತನಾಡಿದ ಇವರು ಹಣ ವಾಪಸ್ ನೀಡಲು ಹಲವಾರು ದಿನಾಂಕಗಳು, ಸಬೂಬುಗಳನ್ನು ನೀಡುತ್ತಾ ಬಂದಿದ್ದು, ಈವರೆಗೆ ಹಣ ನೀಡಲು ಸತಾಯಿಸುತ್ತಿದ್ದಾರೆ ಎಂದು ಅವರು ದೂರಿದರು.

ನ್ಯಾಯ ಒದಗಿಸುವಂತೆ ಸಿಎಂ ಸಿದ್ದರಾಮಯ್ಯಗೆ ಒತ್ತಾಯ

ನನ್ನ ತಮ್ಮನ ಸ್ನೇಹಿತರು, ಕೆಲ ಸಂಘಟನೆಯವರ ಬಳಿ ಮಾತನಾಡಿದಾಗ ಚೆಕ್ ಕೊಟ್ಟರು. ಅವುಗಳು ಬೌನ್ಸ್ ಆಗಿವೆ. ಹಾಗಾಗಿ ನಾನು ಅನಿವಾರ್ಯವಾಗಿ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದೇನೆ. ಈಗ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆಯನ್ನು ಒಡ್ಡುತ್ತಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ, ನ್ಯಾಯ ಒದಗಿಸಬೇಕು ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X