Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇದು ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಅಲ್ಲ;...

ಇದು ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಅಲ್ಲ; ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ: ಸಿಎಂ ಸಿದ್ದರಾಮಯ್ಯ ಕರೆ

ಭಾರತ್‌ ಜೋಡೊ ಯಾತ್ರೆಯ ಫೋಟೋಗಳನ್ನು ಹಂಚಿಕೊಂಡ ಸಿಎಂ

ವಾರ್ತಾಭಾರತಿವಾರ್ತಾಭಾರತಿ7 Sept 2023 7:05 PM IST
share
ಇದು ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಅಲ್ಲ; ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ: ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ''ಇದು ನಾವೆಲ್ಲ ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಅಲ್ಲ. ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ,ಸಮಗ್ರತೆಯನ್ನು ಉಳಿಸಲು, ದೇಶದ ಸಂಪತ್ತಿನ ಲೂಟಿಯನ್ನು ತಡೆಯಲು, ಸಂವಿಧಾನದ ಗೌರವವನ್ನು ಕಾಪಾಡಲು, ನಮ್ಮ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ನಡೆಸಿದ್ದ ಭಾರತ್ ಜೋಡೊ ಯಾತ್ರೆಯ ಒಂದನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಟ್ವಿಟರ್‌ ನಲ್ಲಿ ಭಾರತ್ ಜೋಡೊ ಯಾತ್ರೆಯ ಫೋಟೊಗಳನ್ನು ಹಂಚಿಕೊಂಡಿರುವ ಅವರು, ʼʼಈ ಹೋರಾಟಕ್ಕೆ ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್, ಪಂಡಿತ ಜವಾಹರಲಾಲ ನೆಹರೂ, ಮೌಲಾನ ಅಬುಲ್ ಕಲಮ್ ಆಜಾದ್, ವಲ್ಲಭಭಾಯಿ ಪಟೇಲ್, ಶ್ರೀಮತಿ ಇಂದಿರಾಗಾಂಧಿ, ಶ್ರೀ ರಾಜೀವ್ ಗಾಂಧಿ ಸೇರಿದಂತೆ ಹಿರಿಯ ಚೇತನಗಳು ನಡೆಸಿದ ಹೋರಾಟ ಸ್ಪೂರ್ತಿಯಾಗಬೇಕುʼʼ ಎಂದು ಹೇಳಿದ್ದಾರೆ.

ʼʼಬನ್ನಿ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಮುನ್ನಡೆಯೋಣ, ಕೈಗೆ ಕೈ ಜೋಡಿಸಿ ಹೋರಾಟಕ್ಕೆ ಬಲತುಂಬೋಣ. ಒಡೆಯುವವರನ್ನು ಹಿಮ್ಮೆಟ್ಟಿಸಿ ಕಟ್ಟುವ ಕಾಯಕದಲ್ಲಿ ತೊಡಗಿಸೋಣ. ನವಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸೋಣʼʼ ಎಂದು ಅವರು ಕರೆ ನೀಡಿದ್ದಾರೆ.

ʼʼಮೂರು ದಶಕಗಳ ಹಿಂದೆ ಈ ದೇಶದಲ್ಲಿ ರಥಯಾತ್ರೆಯೊಂದು ಹೊರಟಿತ್ತು. ದ್ವೇಷ, ಸುಳ್ಳು, ಅಪನಂಬಿಕೆಗಳನ್ನು ಬಿತ್ತುತ್ತಾ ಸಾಗಿದ ಆ ಯಾತ್ರೆ ಬಹುತ್ವ ಭಾರತದ ಎದೆಯೊಳಗೆ ಮಾಡಿದ ಗಾಯ ಇನ್ನೂ ಮಾಸಿಲ್ಲ. ಆ ಗಾಯಕ್ಕೆ ಪ್ರೀತಿ, ಶಾಂತಿ, ಸಹಬಾಳ್ವೆಯ ಮುಲಾಮು ಹಚ್ಚಿ ಗುಣಪಡಿಸುವ ಸದುದ್ದೇಶದಿಂದ ರಾಹುಲ್ ಗಾಂಧಿಯವರು ಪಾದಯಾತ್ರೆ ಶುರುಮಾಡಿದ್ದರುʼʼ ಎಂದು ಅವರು ವಿವರಿಸಿದ್ದಾರೆ.

ʼʼಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಭುತ್ವ ಪ್ರಜೆಗಳ ದನಿಗೆ ಕಿವಿಗೊಡಬೇಕು. ಅವರ ಕಷ್ಟ-ಸುಖ, ಸಮಸ್ಯೆ-ಸಂಕಷ್ಟಗಳನ್ನು ಅರಿಯುವ ಕೆಲಸವನ್ನು ಮಾಡಬೇಕು. ಜನ ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಟ್ಟಾಗಿ ಬದುಕುವ ವಾತಾವರಣವನ್ನು ಕಲ್ಪಿಸಬೇಕು. ಆದರೆ ಭಾರತೀಯ ಜನತಾ ಪಕ್ಷ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ನಡುವೆ ಪರಸ್ಪರ ದ್ವೇಷಾಸೂಯೆಗಳನ್ನು ಬಿತ್ತಿ ಸಮಾಜವನ್ನು ಜಾತಿ-ಧರ್ಮದ ಆಧಾರದಲ್ಲಿ ಒಡೆಯುವ ಕೆಲಸವನ್ನು ಮಾಡುತ್ತಿದೆ. ಅನ್ಯಾಯದ ವಿರುದ್ದ ದನಿ ಎತ್ತುವವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡಲಾಗುತ್ತಿದೆ. ಇದರ ವಿರುದ್ದ ಸಂಘಟಿತವಾದ ಹೋರಾಟ ನಡೆಯಬೇಕಾಗಿದೆʼʼ ಎಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X