Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ...

ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 Dec 2023 6:09 PM IST
share
ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿ.6: ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಎಂದರು.

ಅಂಬೇಡ್ಕರ್ ಅವರು ಇನ್ನೂ ಬದುಕಿರಬೇಕಿತ್ತು. ಅವರು ಇದ್ದಿದ್ದರೆ ಸಮಾನತೆಯ ಪರವಾಗಿ ಇನ್ನಷ್ಟು ಹೋರಾಟಗಳಾಗುತ್ತಿತ್ತು. ಸಮಾಜ ನಿರ್ಮಾಣ ಮಾಡಲು ಸಾಧ್ಯ ವಾಗುತ್ತಿತ್ತು. ಸಂವಿಧಾನದ ಕರ್ತೃ ಅಂಬೇಡ್ಕರ್ ಅವರು ದೇಶದ ಸಂವಿಧಾನವನ್ನು ಬಹಳ ಶ್ರಮ ವಹಿಸಿ ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತದ ವ್ಯವಸ್ಥೆಗೆ ಎಂಥ ಸಂವಿಧಾನ ಬೇಕು ಎಂದು ಚಿಂತಿಸಿ ಸಂವಿಧಾನ ನೀಡಿದ್ದಾರೆ ಎಂದು ಹೇಳಿದರು.

ಸಾಮಾಜಿಕ ನ್ಯಾಯದ ಹಕ್ಕು, ಅಸಮಾನತೆಯನ್ನು ತೊಡೆದುಹಾಕುವ ಅಂಶ ಜಗತ್ತಿನ ಯಾವ ಸಂವಿಧಾನದಲ್ಲಿಯೂ ನೋಡಲು ಸಾಧ್ಯವಿಲ್ಲ. ಎಲ್ಲ್ಲ ಜಾತಿ, ವರ್ಗ ಮತ್ತು ಬಡವರಿಗೆ ನ್ಯಾಯ ದೊರೆತಿದ್ದರೆ, ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದರೆ ಅದಕ್ಕೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸೇರಿಸಿದ ಅಂಶಗಳೇ ಕಾರಣ. ಕಟ್ಟ ಕಡೆಯ ಮನುಷ್ಯನಿಗೂ ಶ್ರೀಮಂತರಿಗೂ ಒಂದೇ ಕಾನೂನು. ಅದಕ್ಕೆ 14ನೆ ಪರಿಚ್ಛೇದದಲ್ಲಿ ಕಾನೂನಿನ ಮುಂದೆ ಎಲ್ಲರೂ ಸಮಾನರು, ಎಲ್ಲರಿಗೂ ಕಾನೂನಿನ ರಕ್ಷಣೆಯಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಸಿದ್ದರಾಮಯ್ಯ ಅವರು ಸ್ಮರಿಸಿದರು.

ಒಂದು ದೇಶದ ಆಸ್ತಿ ಸಮಾನವಾಗಿ ಹಂಚಿಕೆಯಾಗಬೇಕು. ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಪ್ರಜಾಪ್ರಭುತ್ವ ಉಳಿಯುವುದು ಕಷ್ಟ ಎಂದು ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎಂದು ಹೇಳಿದ್ದರು. ದೇಶಕ್ಕೆ ದೊರೆತ ಸ್ವಾತಂತ್ರ್ಯ ಯಶಸ್ವಿಯಾಗಲು ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿರಬೇಕು. ಇಲ್ಲವಾದರೆ ಅಸಮಾನತೆ ಯಿಂದ ನೊಂದ ಜನ ರಾಜಕೀಯ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದೂ ಹೇಳಿದ್ದರು. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರನ್ನು ಎಷ್ಟು ನೆನೆದರೂ, ಎಷ್ಟು ಗೌರವ ಸಲ್ಲಿಸಿದರೂ ಕಡಿಮೆಯೇ ಎಂದರು.

ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ: ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ಅವರನ್ನು ಪ್ರದರ್ಶನ ರಾಯಭಾರಿಯಾಗಿ ನೇಮಕ ಮಾಡಿದ್ದು, ಉಚಿತವಾಗಿ ಈ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಉದಯೋನ್ಮುಖ ನಟ ಹಾಗೂ ಸಾಮಾಜಿಕ ಕಳಕಳಿ ಉಳ್ಳವರು. ಅವರನ್ನು ರಾಯಭಾರಿಯಾಗಿ ಮಾಡಿರುವುದು ಅರ್ಥಪೂರ್ಣ ವಾಗಿದೆ. ಇದರಿಂದ ಲಿಡ್ಕರ್ ಉತ್ಪನ್ನಗಳು ಹೆಚ್ಚಾಗಿ ಮಾರಾಟವಾಗುವುದಲ್ಲದೆ ಚರ್ಮ ಉದ್ಯಮಕ್ಕೆ ಉತ್ತೇಜನ ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಅರ್ಜುನನಿಗೆ ಸ್ಮಾರಕ:ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವೀಗೀಡಾಗಿರುವುದು ದುರದೃಷ್ಟಕರ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ. ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕವಾಗಬೇಕೆಂದು ಸೂಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X