Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1...

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Dec 2023 3:15 PM IST
share
ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಸೂಚಿಸಿದರು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸೂಚಿಸಿದರು.

ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ವಸತಿ ಇಲಾಖೆ

ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹಾಕಿಕೊಂಡಿದ್ದು. ಈವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಬಗ್ಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಎಂಜಿನಿಯರ್ ಗಳ ಸಭೆ ನಡೆಸಿ, ಲಿಂಟೆಲ್‌ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲು ಸೂಚಿಸಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ

ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ. ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರುವರಿ ಅಂತ್ಯದ ವೇಳೆ ಪೂರ್ಣಗೊಳಿಸುವಂತೆ ಸೂಚಿಸಿದರು.

ರಾಜೀವ್‌ ಗಾಂಧಿ ವಸತಿ ನಿಗಮದ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಸೂಚಿಸಿದರು.

ನಿಗಮದ ವ್ಯಾಪ್ತಿಯಲ್ಲಿ 2133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಸೂಚಿಸಿದರು.

ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್‌ ಸಚಿವ ಬಿ.ಝಡ್‌. ಜಮೀರ್‌ ಅಹ್ಮದ್‌ ಖಾನ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್‌ ಅಹ್ಮದ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ..ಸಿ. ಜಾಫರ್‌, ವಸತಿ ಇಲಾಖೆ ಕಾರ್ಯದರ್ಶಿ ನವೀನ್‌ ರಾಜ್‌ ಸಿಂಗ್‌, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X