Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಧಾರ್‌ ಕಾರ್ಡ್‌ ಗುರುತಿನ ದಾಖಲೆಯೇ...

ಆಧಾರ್‌ ಕಾರ್ಡ್‌ ಗುರುತಿನ ದಾಖಲೆಯೇ ಹೊರತು ವಯಸ್ಸು ದೃಢೀಕರಿಸುವ ಪುರಾವೆಯಲ್ಲ : ಹೈಕೋರ್ಟ್‌ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ21 Nov 2026 7:02 PM IST
share
ಆಧಾರ್‌ ಕಾರ್ಡ್‌ ಗುರುತಿನ ದಾಖಲೆಯೇ ಹೊರತು ವಯಸ್ಸು ದೃಢೀಕರಿಸುವ ಪುರಾವೆಯಲ್ಲ : ಹೈಕೋರ್ಟ್‌ ಸ್ಪಷ್ಟನೆ

ಬೆಂಗಳೂರು: ಆಧಾರ್‌ ಕಾರ್ಡ್‌ ಅನ್ನು ಕೇವಲ ಗುರುತಿನ ದಾಖಲೆಯಾಗಿ ಪರಿಗಣಿಸಬಹುದೇ ಹೊರತು, ಅದು ವಯಸ್ಸು ಅಥವಾ ಜನ್ಮದಿನಾಂಕವನ್ನು ದೃಢಪಡಿಸುವ ಅಧಿಕೃತ ಪುರಾವೆಯಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ವಯಸ್ಸು ದೃಢಪಡಿಸುವ ಇತರ ಅಧಿಕೃತ ದಾಖಲೆಗಳು ಲಭ್ಯವಿಲ್ಲದ ಸಂದರ್ಭದಲ್ಲಿ, ಮರಣೋತ್ತರ ಪರೀಕ್ಷಾ ವರದಿಯಲ್ಲಿ ನಮೂದಾಗಿರುವ ವಯಸ್ಸನ್ನೇ ಆಧಾರವಾಗಿಟ್ಟುಕೊಂಡು ಅಪಘಾತ ಪರಿಹಾರದ ಮೊತ್ತವನ್ನು ಲೆಕ್ಕಾಚಾರ ಹಾಕಬಹುದು ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೇಸ್ತ್ರಿಯೊಬ್ಬರ ಕುಟುಂಬಕ್ಕೆ ವಿಚಾರಣಾ ನ್ಯಾಯಾಲಯ ನಿಗದಿಪಡಿಸಿದ್ದ ಮೊತ್ತದ ಜತೆಗೆ ಹೆಚ್ಚುವರಿಯಾಗಿ 1.95 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಷರೀಫ್‌ ಅಲಿಯಾಸ್‌ ಶರೀಫ್‌ ಎಂಬುವರ ಪತ್ನಿ ಸಕೀನಾ, ಅಪ್ರಾಪ್ತ ಪುತ್ರಿ ಸನಾ ಫಾತಿಮಾ ಹಾಗೂ ತಾಯಿ ಸಫಿಯಾ ಸಲ್ಲಿಸಿದ್ದ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಮೂರ್ತಿ ಕೆ.ಎಸ್‌. ಭರತ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳೂರಿನ ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ (ಎಂಎಸಿಟಿ) ನೀಡಿದ್ದ ತೀರ್ಪನ್ನು ಮಾರ್ಪಡಿಸಿದೆ.

ಹೆಚ್ಚುವರಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ದಿನದಿಂದ ಹಣ ಪಾವತಿಯಾಗುವವರೆಗೆ ವಾರ್ಷಿಕ ಶೇ.6 ಬಡ್ಡಿ ನೀಡಬೇಕು ತೀರ್ಪಿನ ದಿನದಿಂದ ಆರು ವಾರಗಳೊಳಗೆ ಮೊತ್ತ ಠೇವಣಿ ಇಡಬೇಕು ಎಂದು ವಿಮಾ ಕಂಪನಿ ಯುನೈಟೆಡ್‌ ಇಂಡಿಯಾ ಇನ್ಶೂರೆನ್ಸ್‌‌ಗೆ ನ್ಯಾಯಪೀಠ ನಿರ್ದೇಶಿಸಿದೆ.

ಆದೇಶದಲ್ಲಿ ಸುಪ್ರೀಂಕೋರ್ಟ್‌ ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ, ಆಧಾರ್‌ ಕಾರ್ಡ್‌ ಗುರುತಿನ ಪುರಾವೆಯಾಗಿ ಬಳಸಬಹುದಾದರೂ, ಅದೇ ಸ್ವತಃ ಜನ್ಮದಿನಾಂಕ ಅಥವಾ ವಯಸ್ಸಿನ ಪುರಾವೆಯಾಗುವುದಿಲ್ಲ. ವಯಸ್ಸು ನಿರ್ಧರಿಸುವಾಗ ಅದನ್ನು ದೃಢಪಡಿಸುವ ಇತರ ದಾಖಲೆಗಳಿಗೆ ಆದ್ಯತೆ ನೀಡಬೇಕು. ಆ ಹಿನ್ನೆಲೆಯಲ್ಲಿ ಶರೀಫ್‌ ಅವರ ವಯಸ್ಸು ನಿರ್ಧರಿಸಲು ಆಧಾರ್‌ ಕಾರ್ಡ್‌ನ ವಿವರವನ್ನು ಅವಲಂಬಿಸಲಾಗದು ಎಂದು ಹೇಳಿದೆ.

ಪ್ರಕರಣವೇನು? :

2021ರ ಡಿ.18ರಂದು ಶರೀಫ್‌ ಇತರರೊಂದಿಗೆ ಕಾರಿನಲ್ಲಿ ಮೈಸೂರಿನಿಂದ ಗುರುವಾಯನಕೆರೆ ಕಡೆಗೆ ಪ್ರಯಾಣಿಸುತ್ತಿದ್ದರು. ರಾತ್ರಿ ವೇಳೆ ಬೇಲೂರು-ಮೂಡಿಗೆರೆ ರಸ್ತೆಯ ನವಿಲಹಳ್ಳಿ ಗ್ರಾಮದ ಸಮೀಪ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶರೀಫ್ ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದರು.

ಮೃತ ಶರೀಫ್‌ ಮೇಸ್ತ್ರಿ ಕೆಲಸ ಮಾಡಿ ದಿನಕ್ಕೆ 1 ಸಾವಿರ ರೂ. ಸಂಪಾದಿಸುತ್ತಿದ್ದರು ಹಾಗೂ ಇಡೀ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದರು ಎಂದು ತಿಳಿಸಿ, ಅವರ ಪತ್ನಿ, ಅಪ್ರಾಪ್ತ ಪುತ್ರಿ ಹಾಗೂ ತಾಯಿ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಮಂಗಳೂರಿನ ಎಂಎಸಿಟಿ 2024ರ ಏಪ್ರಿಲ್ 4ರಂದು ಕುಟುಂಬಕ್ಕೆ 26,73,100 ರೂ. ಪರಿಹಾರ ಘೋಷಿಸಿತ್ತು. ಆದರೆ, ಈ ಪರಿಹಾರ ಮೊತ್ತ ಕಡಿಮೆಯಾಗಿದೆ ಎಂದು ಆಕ್ಷೇಪಿಸಿ ಕುಟುಂಬಸ್ಥರು ಮೋಟಾರು ವಾಹನ ಕಾಯ್ದೆಯ ಸೆಕ್ಷನ್‌ 173(1)ರ ಅಡಿಯಲ್ಲಿ ಹೈಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಮೃತರ ವಯಸ್ಸನ್ನು ನಿರ್ಧರಿಸುವುದು ಮತ್ತು ಅದರ ಆಧಾರದಲ್ಲಿ ಪರಿಹಾರ ಲೆಕ್ಕಾಚಾರ ಹಾಕಿರುವುದು ಮೇಲ್ಮನವಿಯ ಪ್ರಮುಖ ಪ್ರಶ್ನೆಯಾಗಿತ್ತು. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಶರೀಫ್‌ ಅವರ ವಯಸ್ಸನ್ನು 32 ವರ್ಷ ಎಂದು ನಮೂದಿಸಲಾಗಿತ್ತು. ಆದರೆ, ಆಧಾರ್‌ ಕಾರ್ಡ್‌ನ ವಿವರಗಳ ಪ್ರಕಾರ ಅಪಘಾತ ಸಂಭವಿಸಿದ ದಿನ ಅವರ ವಯಸ್ಸು 35 ವರ್ಷ, 7 ತಿಂಗಳು, 25 ದಿನ ಆಗಿತ್ತು. ನ್ಯಾಯಮಂಡಳಿ ಮೃತರ ವಯಸ್ಸನ್ನು 36 ವರ್ಷ ಎಂದು ಪರಿಗಣಿಸಿ ಪರಿಹಾರ ನಿಗದಿ ಮಾಡಿತ್ತು, ಅದನ್ನು ಪ್ರಶ್ನಿಸಿದ ಕುಟುಂಬದವರು ಮೃತರು 36 ವರ್ಷ ಪೂರ್ಣಗೊಳಿಸಿರಲಿಲ್ಲ. ಆದ್ದರಿಂದ 35 ವರ್ಷ ಎಂದು ಪರಿಗಣಿಸಬೇಕಿತ್ತು ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

Tags

Aadhaar CardDocumentHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X