Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪತ್ನಿ ರಾಧಿಕಾ, ಪುತ್ರಿ ಶರ್ಮಿಕಾ ಮಾಹಿತಿ...

ಪತ್ನಿ ರಾಧಿಕಾ, ಪುತ್ರಿ ಶರ್ಮಿಕಾ ಮಾಹಿತಿ ಮುಚ್ಚಿಟ್ಟ ಆರೋಪ: ಕುಮಾರಸ್ವಾಮಿ ವಿರುದ್ಧದ ಖಾಸಗಿ ದೂರು ವಜಾಗೊಳಿಸಿದ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ15 Nov 2023 6:52 PM IST
share
ಪತ್ನಿ ರಾಧಿಕಾ, ಪುತ್ರಿ ಶರ್ಮಿಕಾ ಮಾಹಿತಿ ಮುಚ್ಚಿಟ್ಟ ಆರೋಪ: ಕುಮಾರಸ್ವಾಮಿ ವಿರುದ್ಧದ ಖಾಸಗಿ ದೂರು ವಜಾಗೊಳಿಸಿದ ಕೋರ್ಟ್

ಬೆಂಗಳೂರು, ನ.15: ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಖಾಸಗಿ ದೂರು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ.

ಬೆಂಗಳೂರಿನ ಎಸ್.ಆನಂದ ಅವರು ಸಲ್ಲಿಸಿದ್ದ ದೂರನ್ನು ನಗರದ ವಿಶೇಷ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಜೆ.ಪ್ರೀತ್ ಅವರು ವಜಾ ಮಾಡಿದ್ದಾರೆ.

ಯಾವುದೇ ದಾಖಲೆ ಸಲ್ಲಿಸದೇ ರಾಧಿಕಾ ಅವರು ಕುಮಾರಸ್ವಾಮಿ ಅವರ ಎರಡನೇ ಪತ್ನಿ ಎಂದು ದೂರುದಾರರು ಹೇಳುವುದನ್ನು ಆಧರಿಸಿ ಈ ಹಂತದಲ್ಲಿ ನ್ಯಾಯಾಲಯವು ಕುಮಾರಸ್ವಾಮಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಲಾಗದು. ಅಲ್ಲದೆ, ಮೊದಲ ಪತ್ನಿ ಜೀವಂತವಾಗಿರಬೇಕಾದರೆ ಹಾಲಿ ಕಾನೂನಿನಲ್ಲಿ ಎರಡನೇ ಪತ್ನಿ ಪರಿಕಲ್ಪನೆಗೆ ಅವಕಾಶವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಕುಮಾರಸ್ವಾಮಿ ಅವರು ರಾಧಿಕಾ, ನಿಖಿಲ್ ಮತ್ತು ಶರ್ಮಿಕಾ ಅವರ ಬಗ್ಗೆ ಮಾಹಿತಿ ಬಚ್ಚಿಟ್ಟಿದ್ದಾರೆ ಎಂಬುದು ದೂರುದಾರರ ವಾದವಾಗಿದೆ. ಆದರೆ, ದೂರುದಾರರು ಅನಿತಾ ಅವರು ಕುಮಾರಸ್ವಾಮಿ ಅವರ ಪತ್ನಿ ಎಂಬುದಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಕುಮಾರಸ್ವಾಮಿ ಅವರು ಉಮೇದುವಾರಿಕೆ ಅಂದರೆ ಫಾರ್ಮ್ 26ರಲ್ಲಿ ಪತ್ನಿ ಕಾಲಂನಲ್ಲಿ ಅನಿತಾ ಅವರನ್ನು ಪತ್ನಿ ಎಂದು ಹೇಳಿದ್ದಾರೆ. ಆದರೆ, ರಾಧಿಕಾ ಅವರು ಕುಮಾರಸ್ವಾಮಿ ಅವರ ಪತ್ನಿ ಅಥವಾ ಎರಡನೇ ಪತ್ನಿ ಎಂದು ತೋರಿಸಲು ಯಾವುದೇ ದಾಖಲೆ ಸಲ್ಲಿಸಲಾಗಿಲ್ಲ ಎಂದು ನ್ಯಾಯಾಲಯ ವಿವರಿಸಿದೆ.

ಕುಮಾರಸ್ವಾಮಿ ಅವರು ತಮ್ಮ ಅಫಿಡವಿಟ್‌ನಲ್ಲಿ ಯಾವುದೇ ಸುಳ್ಳು ಮಾಹಿತಿ ನೀಡಿಲ್ಲ. ದೂರಿನ ಪ್ರಕಾರ ನೋಡಿದರೆ ಕುಮಾರಸ್ವಾಮಿ ಅವರು ಪತ್ನಿ ರಾಧಿಕಾ ಮತ್ತು ಮಕ್ಕಳ ಮಾಹಿತಿ ನೀಡಿಲ್ಲ. ತಪ್ಪು ಹೇಳಿ ಅಥವಾ ಮಾಹಿತಿ ಬಹಿರಂಗಪಡಿಸದಿರುವುದು ಬೇರೆಬೇರೆ ವಿಚಾರಗಳಾಗಿವೆ. ಹೀಗಾಗಿ, ಕುಮಾರಸ್ವಾಮಿ ಅವರು ಐಪಿಸಿ ಸೆಕ್ಷನ್ 181ರ ಅಡಿ ಯಾವುದೇ ಅಪರಾಧ ಎಸಗಿಲ ಎಂದು ನ್ಯಾಯಾಲಯ ವಿವರಿಸಿದೆ.

ಫಾರ್ಮ್ 26ರಲ್ಲಿ ಅಭ್ಯರ್ಥಿಯ ಮಕ್ಕಳ ಕುರಿತಾದ ಮಾಹಿತಿಗೆ ಸಂಬಂಧಿಸಿದ ಅಂಶ ಇಲ್ಲ. ಪತ್ನಿ, ಆಕೆಯ ಆಸ್ತಿ ಮತ್ತು ಇತರ ಅಂಶಗಳನ್ನು ಹೊರತುಪಡಿಸಿ ಮಕ್ಕಳ ಮಾಹಿತಿ ಕೋರಲಾಗಿಲ್ಲ. ಫಾರ್ಮ್ 26ರಲ್ಲಿ ಏನು ಮಾಹಿತಿ ಕೋರಲಾಗಿದೆಯೋ ಆ ಮಾಹಿತಿಯನ್ನಷ್ಟೇ ಅಭ್ಯರ್ಥಿ ನೀಡಬೇಕು. ಕುಮಾರಸ್ವಾಮಿ ಅವರು 2018ರ ಎಪ್ರಿಲ್ 19ರಂದು ಫಾರ್ಮ್ 26 ಅನ್ನು ಸಲ್ಲಿಸಿದ್ದು, ಇದನ್ನೇ ದೂರುದಾರರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆದರೆ, ಇದರ ಪ್ರಕಾರ ಆರೋಪಿ ಕುಮಾರಸ್ವಾಮಿ ಅವರು ಮಗ/ಮಗಳು/ಮಕ್ಕಳ ಬಗ್ಗೆ ಮಾಹಿತಿ ನೀಡಬೇಕಿಲ್ಲ. ಹೀಗಾಗಿ, ಇದು ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 125ಎ ಅಡಿ ಅಪರಾಧವಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣವೇನು?: 2018ರ ಮೇನಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ಚುನಾವಣಾಧಿಕಾರಿಗೆ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಉಮೇದುವಾರಿಕೆ ಮತ್ತು ಅಫಿಡವಿಟ್ ದೋಷಪೂರಿತವಾಗಿವೆ. ಇದರಲ್ಲಿ ಕುಮಾರಸ್ವಾಮಿ ಅವರು ಎರಡನೇ ಪತ್ನಿ ರಾಧಿಕಾ, ಪುತ್ರ ನಿಖಿಲ್ ಮತ್ತು ಪುತ್ರಿ ಶರ್ಮಿಕಾ ಅವರ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದಾರೆ. ಹೀಗಾಗಿ, ಅವರ ವಿರುದ್ಧ ಐಪಿಸಿ ಸೆಕ್ಷನ್ 181 ಮತ್ತು ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 125ಎ ಅಡಿ ಕ್ರಮಕೈಗೊಳ್ಳಬೇಕು ಎಂದು ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X