Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರತಿಭಟನೆ ಹೆಸರಲ್ಲಿ ಕಾನೂನು...

ಪ್ರತಿಭಟನೆ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವುದನ್ನು ಸಹಿಸಲಾಗದು: ಗೃಹ ಸಚಿವ ಡಾ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ28 Dec 2023 2:35 PM IST
share
ಪ್ರತಿಭಟನೆ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವುದನ್ನು ಸಹಿಸಲಾಗದು: ಗೃಹ ಸಚಿವ ಡಾ.ಪರಮೇಶ್ವರ್

ಬೆಂಗಳೂರು, ಡಿ. 28: ನಮ್ಮ ಸರಕಾರವು ಕನ್ನಡದ ಪರವಾಗಿ ಎಲ್ಲ ರೀತಿಯ ತೀರ್ಮಾನಗಳನ್ನು ತೆಗೆದುಕೊಳ್ಳುವ ಕೆಲಸವನ್ನು ಹಿಂದೆಯೂ ಮಾಡಿದೆ, ಅದಕ್ಕೆ ಈಗಲೂ ಬದ್ಧವಾಗಿದೆ. ಪ್ರತಿಭಟನೆ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವುದನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಸದಾಶಿವ ನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಯಾವುದೇ ರೀತಿಯ ಸಮಸ್ಯೆಗಳಿದ್ದರೆ ಸರಕಾರಕ್ಕೆ ಒತ್ತಾಯಿಸಲಿ. ಇದಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿದೆ. ಪ್ರತಿಭಟನೆ ಹೆಸರಲ್ಲಿ ಅಂಗಡಿ, ಶಾಪಿಂಗ್ ಮಾಲ್ ಗಳ ಮೇಲೆ ದಾಳಿ ಮಾಡಿ, ಸಾರ್ವಜನಿಕರ ಆಸ್ತಿ ಹಾನಿ ಮಾಡುವುದು ಸರಿಯಲ್ಲ ಎಂದರು.

ಪ್ರೊ.ಬರಗೂರು ರಾಮಚಂದ್ರಪ್ಪ ಸಹ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿದ್ದಾರೆ. ನಾವು ಸಹ ಕೆಲವು ಸಮಯದ ಹಿಂದೆ ಬಿಬಿಎಂಪಿ ಮೂಲಕ ಸೂಚನೆ ನೀಡಿದೆ. ಕರವೇ ಅನ್ನು ಪೊಲೀಸರು ಸರಿಯಾಗಿ ನಡೆಸಿಕೊಂಡಿಲ್ಲ ಎಂದಿದ್ದಾರೆ. ಹೇಗೆ ನಡೆಸಿಕೊಳ್ಳಬೇಕು.? ಪ್ರತಿಭಟನೆ ಮಾಡುತ್ತಿದ್ದರೆ, ಅರ್ಧಗಂಟೆ ಸಮಯ ಕೊಡುತ್ತಾರೆ. ಅದಾದ ನಂತರ ಏನು ಮಾಡಬೇಕು. ಅದನ್ನು ಪೊಲೀಸರು ಮಾಡಿದ್ದಾರೆ. ನಾಮಫಲಕ ವಿಚಾರಕ್ಕೆ ಒತ್ತಾಯ ಪೂರ್ವಕವಾಗಿ ಅಂಗಡಿ, ಶಾಪಿಂಗ್ ಮಾಲ್ಗಳ ಮೇಲೆ ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ. ಈ ಬಗ್ಗೆ ಸರ್ಕಾರ ಅಥವಾ ಬಿಬಿಎಂಪಿಯವರಿಗೆ ಒತ್ತಾಯಿಸಬೇಕಿತ್ತು. ಕಾನೂನು ಕೈಗೆತ್ತಿಕೊಳ್ಳಬೇಕಿರಲಿಲ್ಲ ಎಂದು ಹೇಳಿದರು.

ಪ್ರತಿಭಟನೆಯ ಸಂದರ್ಭದಲ್ಲಿ ವ್ಯಾಪರಸ್ಥರು ಪೊಲೀಸರ ರಕ್ಷಣೆ ಕೋರಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಪೊಲೀಸರು ಕಣ್ಣಾರೆ ನೋಡಿಕೊಂಡು, ಸುಮ್ಮನಿರಬೇಕು ಎಂದು ಬಯಸುವುದು ತಪ್ಪು. ಕಾನೂನು ಸುವಸ್ಥೆಯನ್ನು ಕಾಪಾಡುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು ಎಂದರು.

ಬೆಂಗಳೂರು ಮಹಾನಗರ ವಿಶ್ವದಲ್ಲೇ ಉತ್ತಮ ನಗರ ಎಂದು ಖ್ಯಾತಿಯಾಗಿದೆ. ಈ ಬಗ್ಗೆ ನಮಗೆ ಹೆಮ್ಮೆ ಇರಬೇಕು. ದಾಂಧಲೆ ನಡೆಸಿದರೆ ಹೇಗೆ? ಹೊರರಾಜ್ಯ, ಹೊರದೇಶದಿಂದ ನಗರಕ್ಕೆ ಬರುವ ಜನರಿಗೆ ಯಾವ ಸಂದೇಶ ನೀಡಬೇಕು. ಇದಕ್ಕಾಗಿ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ ಎಂದು ಗೃಹಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X