Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾನೂನು ಬಾಹಿರ ಕೆಲಸ ಮಾಡಿದರೆ...

ಕಾನೂನು ಬಾಹಿರ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ6 Jan 2024 7:28 PM IST
share
ಕಾನೂನು ಬಾಹಿರ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ʼನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿದೆ. ಸಂಪೂರ್ಣವಾಗಿ ಅಪರಾಧ ನಿರ್ಮೂಲನೆ ಮಾಡಲಾಗದಿದ್ದರೂ, ಕಡಿಮೆಗೊಳಿಸಲು ಸಾಧ್ಯವಿದೆ. ತಡೆಯಲು ಸಾಧ್ಯವಿರುವ ಅಪರಾಧಗಳನ್ನು ತಡೆಗಟ್ಟಲು ಪೊಲೀಸರು ಹೆಚ್ಚಿನ ಆದ್ಯತೆ ನೀಡಬೇಕುʼ ಎಂದು ತಿಳಿಸಿದರು.

ನಗರದಲ್ಲಿ ಡ್ರಗ್ಸ್‌ ಹಾವಳಿ ತಡೆಗಟ್ಟುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸಮಾಜದ ಒಳಿತಿಗಾಗಿ ಡ್ರಗ್ಸ್‌ ಮಾಫಿಯಾವನ್ನು ಮಟ್ಟಹಾಕುವ ಬಗ್ಗೆ ಎಲ್ಲ ಹಂತದ ಪೊಲೀಸ್‌ ಅಧಿಕಾರಿಗಳು ತೀರ್ಮಾನ ಕೈಗೊಂಡು ಅನುಷ್ಠಾನಗೊಳಿಸಬೇಕು. ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ಜೀವನ ಮಾಡುವವರನ್ನು ಗುರುತಿಸಿ, ಅವರ ರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಪೊಲೀಸ್‌ ಬೀಟ್‌ ವ್ಯವಸ್ಥೆ ಬಲಪಡಿಸಬೇಕು ಎಂದು ಸೂಚಿಸಿದರು.

ನಗರದಲ್ಲಿರುವ 241 ಹೊಯ್ಸಳ ವಾಹನಗಳ ಗಸ್ತುಪಡೆಯನ್ನು ಬಲಪಡಿಸಿ, ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು. ಪೊಲೀಸ್‌ ಅಧಿಕಾರಿ, ಸಿಬ್ಬಂದಿ ರಿಯಲ್‌ ಎಸ್ಟೇಟ್‌ನವರ ಜೊತೆ ಶಾಮೀಗಿ ಅಪರಾದ ಪ್ರಕರಣಗಳಲ್ಲಿ ಭಾಗಿಯಾಗುವುದು ಸರಿಯಲ್ಲ. ಇದರಿಂದ ಜನರಿಗೆ ಪೊಲೀಸ್‌ ವ್ಯವಸ್ಥೇಯ ಮೇಲಿನ ವಿಶ್ವಾಸ ಹೊರಟುಹೋಗುತ್ತದೆ ಎಂದು ಎಚ್ಚರಿಸಿದರು.

ಸರ್ಕಾರ ಎಂದಿಗೂ ಕಾನೂನು ಬಾಹಿರವಾಗಿ ಕೆಲಸ ಮಾಡಿ ಎಂದು ನಿಮಗೆ ಹೇಳುವುದಿಲ್ಲ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದರೆ ಸರ್ಕಾರ ನಿಮ್ಮ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಎಂದು ಎಚ್ಚರಿಸಿದರು. ನಗರದಲ್ಲಿ ರೌಡಿಸಂ ಅನ್ನು ಮಟ್ಟ ಹಾಕಬೇಕು. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿ ಬಂದೋಬಸ್ತ್‌ ವ್ಯವಸ್ಥೆ ಉತ್ತಮವಾಗಿ ಮಾಡಿರುವುದಾಗಿ ಬೆಂಗಳೂರು ನಗರ ಪೊಲೀಸರಿಗೆ ಮುಖ್ಯಮಂತ್ರಿಗಳು ಅಭಿನಂದನೆ ತಿಳಿಸಿದರು.

ಮುಖ್ಯಮಂತ್ರಿಯವರ ಮಾರ್ಗದರ್ಶನದಲ್ಲಿ ನಗರದಲ್ಲಿ ಶಾಂತಿಯುತ ಹಾಗೂ ಸುರಕ್ಷಿತ ವಾತಾವರಣ ನಿರ್ಮಾಣಕ್ಕೆ ಶ್ರಮಿಸುವುದಾಗಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರು ತಿಳಿಸಿದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags

Siddaramaiahಸಿದ್ದರಾಮಯ್ಯ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X