ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಲ್ಲಿ ಅನಧಿಕೃತವಾಗಿ ಉಳಿದುಕೊಂಡಿರುವವರ ವಿರುದ್ಧ ಕ್ರಮ : ಸಚಿವ ಎಚ್.ಸಿ.ಮಹದೇವಪ್ಪ

ಎಚ್.ಸಿ.ಮಹದೇವಪ್ಪ
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಯಾವುದೇ ಕಾಲೇಜುಗಳಲ್ಲಿ ಶಿಕ್ಷಣ ಪಡೆಯದೇ ಅನಧಿಕೃತವಾಗಿ ವಾಸಿಸುತ್ತಿದ್ದವರನ್ನು ತೆರವುಗೊಳಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಕ್ರಮದಿಂದ ನಿಜವಾಗಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉಂಟಾಗುತ್ತಿದ್ದ ತೊಂದರೆ ನಿವಾರಣೆಯಾಗಿದೆ. ಇಲಾಖೆಯ ಉನ್ನತ ಅಧಿಕಾರಿಗಳು ಈ ಸಂಬಂಧ ತೋರಿದ ತ್ವರಿತ ಕ್ರಮ ಶ್ಲಾಘನೀಯ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಯಾವುದೇ ಕಾಲೇಜುಗಳಲ್ಲಿ ಶಿಕ್ಷಣ ಪಡೆಯದೇ ಅನಧಿಕೃತವಾಗಿ ವಾಸಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಹಾಸ್ಟೆಲ್ಗಳಲ್ಲಿ ಇಂತಹ ಅನಧಿಕೃತ ಪ್ರವೇಶ ಕಂಡುಬಂದಲ್ಲಿ ವಿದ್ಯಾರ್ಥಿಗಳು ತಕ್ಷಣ ಅಧಿಕಾರಿಗಳ ಗಮನಕ್ಕೆ ತರಬೇಕು ಅಥವಾ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ +91 94823 00400 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.
ಹಾಸ್ಟೆಲ್ ಗಳಲ್ಲಿ ಅನಧಿಕೃತ ವಾಸಕ್ಕೆ ತಡೆ : ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ಯಾವುದೇ ಕಾಲೇಜುಗಳಲ್ಲಿ ಶಿಕ್ಷಣವನ್ನು ಪಡೆಯದೇ ವಿದ್ಯಾರ್ಥಿ ನಿಲಯಗಳಲ್ಲಿ ಅನಧಿಕೃತವಾಗಿ ವಾಸ ಮಾಡುತ್ತಿರುವ ಜನರನ್ನು ತೆರವು ಮಾಡಲಾಗಿದೆ.ಈ ಮೂಲಕ ಶಿಕ್ಷಣ ಪಡೆಯುತ್ತಾ ವಿದ್ಯಾರ್ಥಿ ನಿಲಯಗಳಲ್ಲಿ ವಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ… pic.twitter.com/V4vobWPJ56
— Dr H C Mahadevappa(Buddha Basava Ambedkar Parivar) (@CMahadevappa) October 7, 2025







