Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 2024ರ ಜೂ.30 ರೊಳಗೆ ಬಸ್‍ಗಳಲ್ಲಿ ಆಡಿಯೋ...

2024ರ ಜೂ.30 ರೊಳಗೆ ಬಸ್‍ಗಳಲ್ಲಿ ಆಡಿಯೋ ಪ್ರಕಟಣಾ ವ್ಯವಸ್ಥೆಗೆ ಕ್ರಮ: ಹೈಕೋರ್ಟ್‍ಗೆ ತಿಳಿಸಿದ ರಾಜ್ಯ ಸರಕಾರ

ವಾರ್ತಾಭಾರತಿವಾರ್ತಾಭಾರತಿ21 Dec 2023 9:23 PM IST
share
2024ರ ಜೂ.30 ರೊಳಗೆ ಬಸ್‍ಗಳಲ್ಲಿ ಆಡಿಯೋ ಪ್ರಕಟಣಾ ವ್ಯವಸ್ಥೆಗೆ ಕ್ರಮ: ಹೈಕೋರ್ಟ್‍ಗೆ ತಿಳಿಸಿದ ರಾಜ್ಯ ಸರಕಾರ

ಬೆಂಗಳೂರು: ದೃಷ್ಟಿ ವಿಶೇಷಚೇತನರು ಕಲ್ಪಿಸುವ ದೃಷ್ಟಿಯಿಂದ ಖಾಸಗಿ ಮತ್ತು ಸಾರ್ವಜನಿಕ ಸಾರಿಗೆ ಬಸ್‍ಗಳಲ್ಲಿ ‘ಆಡಿಯೋ ಪ್ರಕಟಣಾ ವ್ಯವಸ್ಥೆ' ಅಳವಡಿಸಲು ಹಾಗೂ ವಿಶೇಷಚೇತನರಿಗೆ ಇಳಿಯಲು ಮತ್ತು ಹತ್ತಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು 2024ರ ಜೂನ್ 30ರ ಕಾಲಮಿತಿ ಹಾಕಿಕೊಳ್ಳಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‍ಗೆ ತಿಳಿಸಿದೆ.

ವಿಚಾರಣೆ ವೇಳೆ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಂ ಹುಯಿಲಗೋಳ ಅವರು, ಸಾರಿಗೆ ಆಯುಕ್ತರು ಡಿ.19ರಂದು ಹೊರಡಿಸಿರುವ ಸುತ್ತೋಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಹೈಕೋರ್ಟ್ 2023ರ ನವೆಂಬರ್ 9ರಂದು ನೀಡಿದ ಆದೇಶದಂತೆ ಸುತ್ತೋಲೆ ಹೊರಡಿಸಲಾಗಿದೆ.

ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಅಟೋಮೇಟಿವ್ ಇಂಡಸ್ಟ್ರಿ ಸ್ಟ್ಯಾಂಡಡ್ರ್ಸ್ ಎಐಎಸ್-153ರ ಬಸ್‍ಗಳ ನಿರ್ಮಾಣಕ್ಕೆ ಹೆಚ್ಚುವರಿ ಅಗತ್ಯತೆಗಳ ತಿದ್ದುಪಡಿ- 2019ರಲ್ಲಿ ಪ್ರಸ್ತಾಪ ಮಾಡಿರುವಂತೆ ಹಾಗೂ ಹೈಕೋರ್ಟ್ ಆದೇಶದಂತೆ ಕ್ರಮ ವಹಿಸಲು ರಾಜ್ಯದ ಎಲ್ಲ ಉಪ ಸಾರಿಗೆ ಆಯುಕ್ತರು, ಹಿರಿಯ ಪ್ರಾದೇಶಿಕ ಸಾರಿಗೆ ಆಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಪ್ರಮುಖವಾಗಿ, ರಾಜ್ಯದಲ್ಲಿ ಎಲ್ಲ ರೀತಿಯ ವಾಹನಗಳಲ್ಲಿ(ಸ್ಟೇಜ್ ಕ್ಯಾರೇಜ್) ವಿಶೇಷಚೇತನರಿಗೆ ಅನುಕೂಲವಾಗುವಂತೆ ಆಡಿಯೋ ಪ್ರಕಟಣಾ ವ್ಯವಸ್ಥೆ ಮತ್ತು ಬಸ್‍ಗಳಲ್ಲಿ ಇಳಿಯಲು, ಹತ್ತಲು ಅಗತ್ಯ ಸೌಲಭ್ಯವನ್ನು ಒದಗಿಸಲು 2024ರ ಜೂನ್ 30ರೊಳಗೆ ಕಡ್ಡಾಯವಾಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ನೋಂದಣಿ ಮತ್ತು ಅರ್ಹತಾ ಪತ್ರ ನವೀಕರಿಸುವ ಮೊದಲು ಈ ವ್ಯವಸ್ಥೆ ಅಳವಡಿಸಿಕೊಂಡಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಇದು ಸರಕಾರಿ ಮತ್ತು ಖಾಸಗಿ ಬಸ್‍ಗಳಿಗೂ ಅನ್ವಯವಾಗಲಿದೆ. ಇದಕ್ಕೆ ಸಂಬಂಧಿಸಿದ ಹೆಚ್ಚುವರಿ ಸುತ್ತೋಲೆ, ಸೂಚನೆಗಳನ್ನು ಸಹ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಬಿಎಂಟಿಸಿ ಪರ ವಕೀಲರು ವಾದ ಮಂಡಿಸಿ, ನಿಗಮದಲ್ಲಿ ಶೇ.59ರಷ್ಟು ವಾಹನಗಳಲ್ಲಿ ಆಡಿಯೋ ಪ್ರಕಟಣಾ ವ್ಯವಸ್ಥೆ ಜಾರಿಯಲ್ಲಿದೆ. ಒಟ್ಟು ಬಸ್‍ಗಳ ಪೈಕಿ 2,562 ಬಸ್‍ಗಳಲ್ಲಿ ಅಂತಹ ವ್ಯವಸ್ಥೆ ಇಲ್ಲ. ಆದರಲ್ಲಿ 1,145 ಬಸ್‍ಗಳನ್ನು ಹಂತ-ಹಂತವಾಗಿ ಗುಜರಿಗೆ ಹಾಕಿ ಬದಲಿ ಬಸ್‍ಗಳನ್ನು ಖರೀದಿಸಲಾಗುವುದು ಎಂದರು.

ಹೊಸದಾಗಿ 921 ಎಲೆಕ್ಟ್ರಿಕ್ ಬಸ್‍ಗಳ ಖರೀದಿಗೆ ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ 430 ಬಸ್‍ಗಳನ್ನು ಖರೀದಿಸಲಾಗುತ್ತದೆ. ಹೊಸ ಬಸ್‍ಗಳಲ್ಲಿ ವಿಶೇಷಚೇತನರಿಗೆ ಬೇಕಾದ ಸೌಲಭ್ಯಗಳು ಇರಲಿವೆ. ನಿಗಮದ ಉಳಿದ ಬಸ್‍ಗಳಲ್ಲಿ ಅಂತಹ ವ್ಯವಸ್ಥೆ ಅಳವಡಿಸಲು ಟೆಂಡರ್ ಕರೆದು, ಖರೀದಿ ಪ್ರಕ್ರಿಯೆ ಮತ್ತು ವ್ಯವಸ್ಥೆಯ ಅಳವಡಿಕೆಗೆ ಕಾಲಮಿತಿ ಹಾಕಿಕೊಳ್ಳಲಾಗಿದೆ ಎಂದರು.

ಸರಕಾರ ಮತ್ತು ಬಿಎಂಟಿಸಿ ವಕೀಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು 2024ರ ಎ.24ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X