Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಪಿಎಸ್ಸಿ ಮೂಲಕ 750 ಭೂ ಮಾಪಕರ...

ಕೆಪಿಎಸ್ಸಿ ಮೂಲಕ 750 ಭೂ ಮಾಪಕರ ನೇಮಕಾತಿಗೆ ಕ್ರಮ : ಸಚಿವ ಕೃಷ್ಣಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ15 July 2024 8:32 PM IST
share
ಕೆಪಿಎಸ್ಸಿ ಮೂಲಕ 750 ಭೂ ಮಾಪಕರ ನೇಮಕಾತಿಗೆ ಕ್ರಮ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ರಾಜ್ಯ ಸರಕಾರವು 35 ಭೂ ದಾಖಲೆಗಳ ಸಹಾಯಕ ನಿರ್ದೇಶಕರು (ಎಡಿಎಲ್‍ಆರ್) ಹಾಗೂ 750 ಭೂ ಮಾಪಕರನ್ನು ರಾಜ್ಯ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಂಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಬಾಬಾಸಾಹೇಬ್ ಪಾಟೀಲ್ ಹಾಗೂ ಐಹೊಳೆ ದುಯೋರ್ಧನ ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ʼಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳಿಂದಾಗಿ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಸರಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆʼ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನ ಸ್ಪಂದನಾ ಕಾರ್ಯಕ್ರಮದಲ್ಲೂ ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಆದುದರಿಂದ, ಸರ್ವೇಯರ್ ಇಲಾಖೆಯಲ್ಲಿ ಖಾಲಿಯಿರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲು ನಮಗೆ ಸೂಚನೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

35 ಎಡಿಎಲ್‍ಆರ್ ಭರ್ತಿಗೆ ಕ್ರಮ ಕೈಗೊಂಡಿದ್ದೇವೆ. 750 ಭೂ ಮಾಪಕರ ಭರ್ತಿಗೆ ನೋಟಿಫಿಕೇಷನ್ ಹೊರಡಿಸಿದ್ದು, ಕೆಪಿಎಸ್ಸಿ ಮುಖಾಂತರ ಸಂದರ್ಶನ ಇಲ್ಲದೆ ನೇರ ನೇಮಕಾತಿ ಮಾಡುತ್ತಿದ್ದೇವೆ. 750 ಹುದ್ದೆಗಳಿಗೆ 77,241 ಅರ್ಜಿಗಳು ಬಂದಿವೆ. 4-6 ತಿಂಗಳ ಒಳಗಡೆ ಈ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಒತ್ತಾಯ ಮಾಡಲಾಗುವುದು ಎಂದು ಅವರು ಹೇಳಿದರು.

ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಹೊಸ ಹುದ್ದೆಗಳನ್ನು ಮಂಜೂರು ಮಾಡುವ ಸಂಬಂಧ ಹಣಕಾಸು ಇಲಾಖೆ ಜೊತೆ ಚರ್ಚೆ ಮಾಡುತ್ತಿದ್ದೇವೆ. ಈಗಾಗಲೆ 1193 ಪರವಾನಗಿ ಹೊಂದಿರುವ ಖಾಸಗಿ ಸರ್ವೇಯರ್‌ ಗಳನ್ನು ನೇಮಕ ಮಾಡಿದ್ದೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ನಮ್ಮ ಸಿಬ್ಬಂದಿಗಳ ಕೆಲಸದ ವೇಗ ಹೆಚ್ಚಾಗಲು ಮೂರು ಪಟ್ಟು ಸರ್ವೇ ಕೆಲದ ವೇಗ ಪಡೆಯಲು ಆಧುನಿಕ ಉಪಕರಣವಾದ ರೋವರ್ ಬಳಸಿ ಸರ್ವೇ ನಡೆಸಲೂ ಸೂಚಿಸಲಾಗಿದೆ. ಈ ಮೂಲಕ ರೈತರ ಸಮಸ್ಯೆಗಳನ್ನು ಬಗೆಹರಿಸುವ ಹಾಗೂ ಸರ್ವೇ ಇಲಾಖೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಸರಕಾರ ಬದ್ಧವಾಗಿದೆ ಅವರು ಹೇಳಿದರು.

ಈ ವೇಳೆ ಮದ್ಯಪ್ರವೇಶಿಸಿದ ಬಿಜೆಪಿ ಸದಸ್ಯ ಅರಗ ಜ್ಞಾನೇಂದ್ರ, ಮಲೆನಾಡಿನ ರೈತರ ಸಮಸ್ಯೆ ಬೆಂಗಳೂರಿನಿಂದ ತೇರ್ಗಡೆಯಾಗಿ ಹೋದ ಸರ್ವೇಯರ್ ಗೆ ಗೊತ್ತಾಗೋದೆ ಇಲ್ಲ. ಇಷ್ಟಕ್ಕೂ ಅವರು ಬೆಂಗಳೂರಿನಿಂದ ಹೊರಟು ಮಲೆನಾಡಿಗೆ ಬಂದು ತಲುಪುವುದರ ಒಳಗಾಗಿ ಡೆಪ್ಯುಟೇಷನ್ ಮೇಲೆ ಮತ್ತೆ ಬೆಂಗಳೂರಿಗೆ ಹಿಂತಿರುಗುತ್ತಾರೆ ಎಂದು ಆರೋಪಿಸಿದರು.

ಈ ಆರೋಪಕ್ಕೆ ಉತ್ತರಿಸಿದ ಕೃಷ್ಣ ಬೈರೇಗೌಡ, ಕಳೆದ ಒಂದು ವರ್ಷದಲ್ಲಿ ನಾನು ವೈಯಕ್ತಿಕವಾಗಿ ಒಂದೇ ಒಂದು ಪ್ರಕರಣದಲ್ಲೂ ಡೆಪ್ಯುಟೇಶನ್ ಮಾಡಿಲ್ಲ. ಅಲ್ಲದೇ, ಡೆಪ್ಯುಟೇಶನ್ ಮೇಲೆ ಬೇರೆ ಕಡೆ ಹೋಗಿರುವ ಅಧಿಕಾರಿಗಳನ್ನೂ ಹಿಂದಕ್ಕೆ ಕರೆಸಲಾಗಿದೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X