Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆರ್ ಡಿ ಪಾಟೀಲ್ ಬಂಧನಕ್ಕೆ ಕ್ರಮ...

ಆರ್ ಡಿ ಪಾಟೀಲ್ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ8 Nov 2023 11:10 AM IST
share
ಆರ್ ಡಿ ಪಾಟೀಲ್ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೆಇಎ ಪರೀಕ್ಷೆಯ ಪ್ರಕರಣದ ಪ್ರಮುಖ ಆರೋಪಿ ಆರ್ ಡಿ ಪಾಟೀಲ್ ಬಂಧನಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಒಂದು ಮೊಬೈಲ್ ಸಿಕ್ಕಿದೆ ಅದನ್ನು ವಿಧಿವಿಜ್ಞಾನ‌ ಸಂಸ್ಥೆಗೆ ಕಳಿಸಲಾಗಿದೆ ತನಿಖೆ ನಡೆಯುತ್ತಿದೆ, ವರದಿ ಬರಲಿ. ಈ ಹಂತದಲ್ಲಿ ಎಲ್ಲ ಮಾಹಿತಿಯನ್ನು ಬಹಿರಂಗಗೊಳಿಸಲಾಗದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಮಾಧ್ಯಮದವದೊಂದಿಗೆ ಮಾತನಾಡಿದ ಅವರು, ಕೆಲವೊಮ್ಮೆ ಮಾಹಿತಿ ಸಿಗಲ್ಲ. ಕೆಲವೊಮ್ಮೆ ಮಾಹಿತಿ ಕೊಟ್ಟರೂ ಕೂಡಾ ಕಾರಣಾಂತರಗಳಿಂದ ಮಾಡಲಾಗಿರುವುದಿಲ್ಲ. ಕೆಲವೊಮ್ಮೆ ನಮ್ಮವರೇ ಶಾಮೀಲಾಗಿರುತ್ತಾರೆ. ಆದರೆ, ನಮ್ಮವರು ಶಾಮೀಲಾಗಿರುವುದು ಕಂಡುಬಂದರೆ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಹಾಗಾಗಿ ಈಗ ತನಿಖೆ ನಡೆಯುತ್ತಿದೆ. ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ ಸರ್ಕಾರ ತನ್ನ ಜವಾಬ್ದಾರಿಯಿಂದ ಜಾರಿಕೊಳ್ಳುವುದಿಲ್ಲ ಎಂದರು.

ಸರ್ಕಾರದ ವತಿಯಿಂದ ಏನೇನು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಆದರೂ ಒಂದಿಬ್ಬರು ಕಾಪಿ ಮಾಡಿರಬಹುದು. ಕೆಲವು ಕಡೆ ಬ್ಲೂಟೂಥ್ ಬಳಕೆಯಾಗಿದೆ. ಕಲಬುರಗಿ ಮಾತ್ರ ಅಲ್ಲದೇ ಯಾದಗಿರಿ, ವಿಜಯಪುರದಲ್ಲಿ, ಹುಬ್ಬಳ್ಳಿಯಲ್ಲಿ ಹಾಗೂ ಬೆಂಗಳೂರಿನಲ್ಲಿಯೂ ಕೂಡಾ ಘಟನೆ ನಡೆದಿವೆ. ಇದರ ಲೋಪಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಯಾವುದೇ ಪ್ರಕರಣ ಆದರೂ ಅದರ ಗಾಂಭೀರ್ಯತೆ ತಿಳಿದುಕೊಂಡು ಸರ್ಕಾರ ಮುಂದಿನ‌ ಕ್ರಮ ಕೈಗೊಳ್ಳಲಿದೆ. ಓಎಂ ಆರ್ ನಮ್ಮ ಜಿಲ್ಲೆಯಲ್ಲಿ ನಡೆದಿಲ್ಲ ಬೇರೆ ಕಡೆ ನಡೆದಿದೆ. ಓಎಂ ಆರ್ ಹೊರಗಡೆ ಬಂದಿದೆ ಎಂದರೆ ಯಾರಾದರೂ ಮೊಬೈಲ್ ಬಳಸಿರಬಹುದು. ಇದು ರಾಜ್ಯದ ಬೇರೆ ಬೇರೆ ಕಡೆ ನಡೆದಿದೆ. ಹಾಗಾಗಿ ಈ ಪ್ರಕರಣದ ಕುರಿತು ಪ್ರಾಥಮಿಕ ತನಿಖೆ ನಡೆಯುತ್ತಿದೆ ಅದರ ವರದಿ ಆಧರಿಸಿ ಪ್ರಕರಣವನ್ನು ಸಿಓಡಿಗೆ ಅಥವಾ ಸಿಬಿಐ ಗೆ ಕೊಡುವ ಕುರಿತು ಗೃಹ ಸಚಿವರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಆ ಬಗ್ಗೆ ಹಿಂಜರಿಯುವ ಪ್ರಶ್ನೆಯೇ ಇಲ್ಲ ಎಂದರು.

ಆರ್ ಡಿ ಪಾಟೀಲ್ ಗೆ ಪ್ರಿಯಾಂಕ್ ಖರ್ಗೆ ಅವರ ಶ್ರೀ ರಕ್ಷೆ ಇದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಟಾಂಗ್ ನೀಡಿದ ಅವರು ಈ ಹಿಂದೆ ಪಿಎಸ್ ಐ ಪರೀಕ್ಷೆ ನಡೆದಾಗ ಯಾವ ಸಂಸದರು ಶಾಲೆಯೊಂದರಲ್ಲೇ ಪರೀಕ್ಷೆ ನಡೆಯಬೇಕು ಪತ್ರ ಬರೆದಿದ್ದರು. ಯಾವ ಶಾಸಕರು ಶಾಸಕರ ಭವನದಲ್ಲೇ ಡೀಲ್ ಮಾಡಿದ್ದರು. ಅಂದಿನ ಗೃಹ ಸಚಿವರ ಆರೋಪಿತರ ಮನೆಗೆ ಹೋಗಿ ಗೋಡಂಬಿ ಚಹಾ ಸೇವನೆ ಮಾಡಿದ್ದರು. ಮಾಜಿ ಸಚಿವರೊಬ್ಬರು ಆರೋಪಿಗಳ ಬಂಧನವಾದಾಗ ಬಿಡುಗಡೆ ಮಾಡಲು ಕೋರಿದ್ದರು. ಈಗ ನಮ್ಮ ಬಗ್ಗೆ ನನ್ನ ಶಾಸಕರ ಬಗ್ಗೆ ಅನುಮಾನಗಳಿದ್ದರೆ ಬಿಜೆಪಿ ದಾಖಲೆ ನೀಡಲಿ. ನನಗೆ ಆರ್ ಡಿ ಪಾಟೀಲ್ ಆತ್ಮೀಯನಿದ್ದರೆ ಬಿಜೆಪಿಯವರು ಯಾವ ಅವನನ್ನು ಬಂಧಿಸಲಿಲ್ಲ. ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ ಜೊತೆಗೆ ಆಳವಾಗಿ ಅಧ್ಯಯನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಸರ್ಕಾರಕ್ಕೆ ಯುವಕರ ಭವಿಷ್ಯದ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದೆ. ಈ ಹಿಂದೆ ಅಂತಿಮ ಪಟ್ಟಿ ಪ್ರಕಟಣೆ ಆದ 7 ತಿಂಗಳ ಮೇಲೆ ಸರ್ಕಾರ ಎಚ್ಚೆತ್ತುಕೊಂಡಿತ್ತು. ಆದರೆ ಈಗ ಇಲ್ಲಿ ಹಾಗಾಗಿಲ್ಲ‌. ಯುವಕರ ಭವಿಷ್ಯಕ್ಕಾಗಿ Prevention of Corruption in Government Recruitment ಬಿಲ್ ತಯಾರಿಸುತ್ತಿದ್ದೇವೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ಖಾಸಗಿ ಬಿಲ್ ಮೂವ್ ಮಾಡಿದ್ದೆ‌. ಈ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸಲಾಗಿದೆ. ಅದು ಈಗಾಗಲೇ ಕಾನೂನು ಸಚಿವರ ಒಪ್ಪಿಗೆ ನಂತರ ಡಿಪಿಆರ್ ಗೆ ಕಳಿಸಿದ್ದಾರೆ. ಸಿಎಂ ಅವರು ಡಿಪಿಆರ್ ತರಿಸಿಕೊಂಡು ಮಂಜೂರು ಮಾಡಿದರೆ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

ಪರೀಕ್ಷೆಗಳಲ್ಲಿ ನಡೆದ ಅಕ್ರಮ ಸರ್ಕಾರಕ್ಕೆ ಮುಜುಗರ ಎದುರಾದರೂ ಕೂಡಾ ಪರೀಕ್ಷೆಗೆ ಮುನ್ಮ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಪರೀಕ್ಷೆ ಕೇಂದ್ರ ಬಳಿಯ ಲಾಡ್ಜ್ ಗಳ ತಪಾಸಣೆ ನಡೆಸಲಾಗಿದೆ. 200 ಅಡಿ ಒಳಗೆ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶ ನೀಡಿಲ್ಲ. ಡಿಟೆಕ್ಟರ್ ಕೂಡಾ ಅಳವಡಿಸಲಾಗಿತ್ತು. ಈ ಹಿಂದೆ ಈ ರೀತಿ ಕ್ರಮ ಕೈಗೊಳ್ಳಲಾಗಿತ್ತಾ? ಎಂದು ಪ್ರಶ್ನಿಸಿದ ಖರ್ಗೆ, ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ 50% ಅಭ್ಯರ್ಥಿಗಳು ಪರೀಕ್ಷೆಗೆ ಗೈರು ಹಾಜಿರಾಗಿದ್ದರು ಎಂದರು.

ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಮಫ್ತಿಯಲ್ಲಿ ಪರಿಶೀಲನೆಗೆ ಹೋಗಿದ್ದರು. ಆಗ ಆರ್ ಡಿ ಪಾಟೀಲ್ ಹಿಂದಿನಿಂದ ಹೋಗಿದ್ದಾನೆ ಎಂದರು. ಪೊಲೀಸರ ಮಧ್ಯೆ ಕ್ರೆಡಿಟ್ ವಿಚಾರದಲ್ಲಿ ಭಿನ್ನಾಭಿಪ್ರಾಯ ಇದೆ ಎನ್ನುವುದನ್ನು ತಳ್ಳಿ ಹಾಕಿದ ಸಚಿವರು ಅಧಿಕಾರಿಗಳು ಇನ್ನೂ ಬಿಜೆಪಿಯ ಅಮಲಿನಲ್ಲಿ ಇದ್ದಾರೆ. ನಮಗೆ ಗ್ಯಾರಂಟಿ‌ ಜಾರಿಗೆ ತರುವುದರಲ್ಲಿ ಸ್ವಲ್ಪ ಆ ಕಡೆ ಬಿಜಿ ಆಗಿದ್ದೆವು. ಅವರಿಗೆ ಟೈಟ್ ಮಾಡಲು ಕಾಲಾವಕಾಶ ಬೇಕು. ನಾವು ಅಧಿಕಾರಕ್ಕೆ ಬಂದ ಮೇಲೆ ಸುಧಾರಣೆ ಕಂಡಿದೆ ಎಂದು ಒತ್ತಿ ಹೇಳಿದರು.

ಕಿಯೋನಿಕ್ಸ್ ನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಬಿಜೆಪಿಯವರಿಗೆ ಮಾಡಲು‌ ಕೆಲಸ ಇಲ್ಲ. ಅವರು ಯಾರೋ ಹೇಳಿದ್ದನ್ನು ಕೇಳುತ್ತಾರೆ. ಸುಳ್ಳಿನ‌ ಕಾರ್ಖಾನೆ ತೆಗೆದಿದ್ದಾರೆ. ಐಟಿ ಸೆಲ್ ನವರಹ ವಾಟ್ಸಪ್ ನಲ್ಲಿ ಏನು ಹಾಕುತ್ತಾರೋ ಅದನ್ನೇ ನಂಬುತ್ತಾರೆ. ಯಾವುದೇ ಪ್ರಕರಣದ ಕುರಿತಂತೆ ಆಳವಾದ ಅಧ್ಯಯನ ಮಾಡುವುದನ್ನು ಬಿಜೆಪಿ ಕಲಿಯಲಿ. ನಾಳೆ ಬೆಂಗಳೂರಿನಲ್ಲಿ ಈ ಬಗ್ಗೆ ಪ್ರೆಸ್ ಮೀಟ್ ಮಾಡಲಿದ್ದೇನೆ. ಆಗ ಯಾರು ರಾಜೀನಾಮೆ ನೀಡಬೇಕಾಗಬಹುದು ಎನ್ನುವ ಸಂಗತಿ‌ ಹೊರಬಲಿದೆ ಎಂದರು.

ಬಿಜೆಪಿಯವರು ಮೂರನೆಯ ಪಾರ್ಟಿ‌ ಪರಿಶೀಲನೆ ಮಾಡದೆ ದುಡ್ಡು ಬಿಡುಗಡೆ ಮಾಡಿ ಎನ್ನುತ್ತಾರಲ್ಲ. ಇದೇನು 40% ಸರ್ಕಾರವಲ್ಲ. ಜನರ ತೆರಿಗೆಯ ದುಡ್ಡು. ಯಾರು ಸರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೋ ಅವರಿಗೆ ದುಡ್ಡು ಸಿಗಲಿದೆ.‌ ಯಾರು ಉಪ್ಪು ತಿಂದಿದ್ದಾರೋ ಅವರು ನೀರು ಕುಡಿಯಲೇಬೇಕು. ನಾನು ಯಾವ ಕಾಮಗಾರಿಯಲ್ಲಿ ದುಡ್ಡು ತೆಗೆದುಕೊಂಡಿದ್ದೀನಿ ಎಂದು ಹೇಳಲಿ ಎಂದು ಸವಾಲ್ ಹಾಕಿದರು.

ಕರ್ನಾಟಕ‌ ಸರ್ಕಾರದ ಕಾರ್ಯವೈಖರಿ‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ‌ ಮಧ್ಯಪ್ರದೇಶದಲ್ಲಿ ಟೀಕೆ‌ ಮಾಡಿರುವ ಕುರಿತು ಪತ್ರಕರ್ತರು ಕೇಳಿದಾಗ ಉತ್ತರಿಸಿದ ಸಚಿವರು, ಮೋದಿ ಅವರಿಗೆ ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸ‌ ಗೊತ್ತಿಲ್ಲ. ಬಿಜೆಪಿ ಅಧಿಕಾರಕಕ್ಕೆ‌ ಬಂದಾಗ ಐವರು ಸಿಎಂ ಅವರನ್ನು ಬದಲಿಸಿದ್ದಾರೆ. ಮಾಜಿ‌ ಸಿಎಂ ದಿಲ್ಲಿಯಲ್ಲಿ ಅವರ ಮನೆ ಕಾಯ್ದರೂ ಕ್ಯಾರೆ ಅಂದಿಲ್ಲ. ಕೆಳಮನೆ ಹಾಗೂ ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರು ಯಾರು ? ನಮ್ಮಲ್ಲಿ ಸಮರ್ಥ ಎಐಸಿಸಿ ಅಧ್ಯಕ್ಷರು, ಸಮರ್ಥ‌ಸಿಎಂ ಹಾಗೂ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರು‌ ಇದ್ದಾರೆ. ಅವರ ಬಳಿ ಯಾರಿದ್ದಾರೆ? ಮೋದಿ ಅವರು ಮೊದಲು ತಮ್ಮ ಮನೆಯನ್ನು ಸ್ವಚ್ಛಗೊಳಿಸಿಕೊಳ್ಳಲಿ. ಮೋದಿಯವರ ಕೃಪಾಕಟಾಕ್ಷದಿಂದ 40% ಸರ್ಕಾರ ಎಂದು ಹೆಸರು ಬಂದಿದೆ ಎಂದು ಟಾಂಗ್ ನೀಡಿದರು.

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಇದ್ದರು.

Tags

ಪ್ರಿಯಾಂಕ್ ಖರ್ಗೆಆರ್ ಡಿ ಪಾಟೀಲ್
share
ವಾರ್ತಾಭಾರತಿ
ವಾರ್ತಾಭಾರತಿ
Next Story
X