Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಂಜಾರ ಸಮುದಾಯದ ಬೇಡಿಕೆ ಈಡೇರಿಸಲು ಕ್ರಮ:...

ಬಂಜಾರ ಸಮುದಾಯದ ಬೇಡಿಕೆ ಈಡೇರಿಸಲು ಕ್ರಮ: ಸಿಎಂ ಭರವಸೆ

ವಾರ್ತಾಭಾರತಿವಾರ್ತಾಭಾರತಿ25 Aug 2023 9:50 PM IST
share
ಬಂಜಾರ ಸಮುದಾಯದ ಬೇಡಿಕೆ ಈಡೇರಿಸಲು ಕ್ರಮ: ಸಿಎಂ ಭರವಸೆ

ಬೆಂಗಳೂರು, ಆ.25: ಬಂಜಾರ ಸಮುದಾಯದ ಬೇಡಿಕೆಗಳನ್ನು ತಕ್ಷಣವೇ ಈಡೇರಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಬಂಜಾರ ಸಮುದಾಯ ಮುಖಂಡರು ಸಿಎಂ ಭೇಟಿ ಮಾಡಿ, ತಮ್ಮ ಸಮುದಾಯದ ಬೇಡಿಕೆಗಳನ್ನು ಸಲ್ಲಿಸಿದರು. ಬಿಜೆಪಿ ಸರಕಾರ ತಮ್ಮ ಅಸಂವಿಧಾನಿಕ ನಡೆಗಳ ಮೂಲಕ ಮೀಸಲಾತಿಯನ್ನು ದುರ್ಬಲಗೊಳಿಸಲು ಯತ್ನಿಸಿದ ಸಮಯದಲ್ಲಿ ಅವರ ಆ ನೀತಿಗಳನ್ನು ವಿರೋಧಿಸಿ ರಾಜ್ಯವ್ಯಾಪಿ ಬಂಜಾರ ಸಂಘಟನೆಗಳು ಪ್ರತಿಭಟಿಸಿದ ಸಮಯದಲ್ಲಿ ಸಮುದಾಯದ ಕಾರ್ಯಕರ್ತರ ಮೇಲೆ ರಾಜ್ಯವ್ಯಾಪಿ ವಿನಾಕಾರಣ ದಾಖಲಾದ ಪ್ರಕರಣಗಳನ್ನು ರಾಜ್ಯ ಸರಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

2019ರಲ್ಲಿ ಕಲಬುರಗಿಯ ವಿಮಾನನಿಲ್ದಾಣವನ್ನು ಸ್ಥಾಪಿಸುವ ಸಮಯದಲ್ಲಿ ಬಂಜಾರರ ಕುಲಗುರು ಶ್ರೀ ಸೇವಾಲಾರ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿತ್ತು. ಅದೇ ಪ್ರದೇಶದಲ್ಲಿ ಸೇವಾಲಾಲರ ದೇವಸ್ಥಾನ, ಗ್ರಂಥಾಲಯ, ಮ್ಯೂಸಿಯಂ ನಿರ್ಮಿಸಬೇಕು ಎಂದು ಮನವಿ ಮಾಡಿದರು.

ಸಾವಿರಾರು ವರ್ಷಗಳ ಇತಿಹಾಸವಿರುವ ಬಂಜಾರ ಭಾಷೆಯನ್ನು ಸಂವಿಧಾನದ 8ನೆ ಪರಿಚ್ಚೇದದಲ್ಲಿ ಸೇರಿಸಬೇಕು. ಇದರ ಕುರಿತಂತೆ ಅಧ್ಯಯನ ಮತ್ತು ಪ್ರಸ್ತಾವನೆಯನ್ನು ತಯಾರಿಸಲು ಅನುವಾಗುವಂತೆ ಭಾಷಾ ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಹೇಳಿದರು.

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಬೇಕು. ಆ ಮೂಲಕ ಬಂಜಾರ ಸಮುದಾಯದ ಅಭಿವೃದ್ಧಿ ಕಾರ್ಯಯೋಜನೆಗಳನ್ನು ರೂಪಿಸಬೇಕು. ಬಂಜಾರ ಸಮುದಾಯಕ್ಕೆ ಒಂದು ಮೆಡಿಕಲ್ ಕಾಲೇಜು/ವೃತ್ತಿಪರ ಕಾಲೇಜು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಬಂಜಾರ ಸಮುದಾಯದ ಜನರು ಕೂಲಿ ಅರಸಿ ದೂರದ ಸ್ಥಳಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟಲು ಸೂಕ್ತ ಯೋಜನೆಗಳನ್ನು ರೂಪಿಸಬೇಕು. ಅಲ್ಲಿಯವರೆಗೆ ವಲಸೆ ಹೋಗುವವರ ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಪ್ರತ್ಯೇಕ ವಸತಿ ಶಾಲೆಗಳನ್ನು ತೆರೆಯಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯ್ಕ್, ರಂಗತಜ್ಞ ಡಾ.ಎ.ಆರ್.ಗೋವಿಂದ ಸ್ವಾಮಿ, ವಕೀಲ ಅನಂತ ನಾಯ್ಕ್ ಸೇರಿ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X