Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಾಣಿಗಳಿಗೆ ಅರಣ್ಯದಲ್ಲಿಯೇ ಮೇವು,...

ಪ್ರಾಣಿಗಳಿಗೆ ಅರಣ್ಯದಲ್ಲಿಯೇ ಮೇವು, ಕುಡಿಯುವ ನೀರು ಲಭಿಸುವಂತೆ ಕ್ರಮ: ಸಿಎಂ ಸಿದ್ದರಾಮಯ್ಯ

‘ಅರಣ್ಯ ಇಲಾಖೆಯ 50 ಅಧಿಕಾರಿಗಳು-ಸಿಬ್ಬಂದಿಗೆ ಸಿಎಂ ಪದಕ ಪ್ರದಾನ’

ವಾರ್ತಾಭಾರತಿವಾರ್ತಾಭಾರತಿ29 Sept 2023 11:21 PM IST
share
ಪ್ರಾಣಿಗಳಿಗೆ ಅರಣ್ಯದಲ್ಲಿಯೇ ಮೇವು, ಕುಡಿಯುವ ನೀರು ಲಭಿಸುವಂತೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.29: ಕಾಡು ಪ್ರಾಣಿಗಳಿಗೆ ಮೇವು, ಕುಡಿಯುವ ನೀರನ್ನು ಅರಣ್ಯ ಪ್ರದೇಶದೊಳಗೆ ಲಭ್ಯವಾಗಿಸುವುದು ಅರಣ್ಯ ಇಲಾಖೆಯ ಜವಾಬ್ದಾರಿಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಅರಣ್ಯ ಇಲಾಖೆಯಲ್ಲಿ ಶೌರ್ಯ ಮತ್ತು ಧೈರ್ಯದಿಂದ ಸೇವೆ ಸಲ್ಲಿಸಿ, ಅರಣ್ಯ, ವನ್ಯಜೀವಿ ಸಂರಕ್ಷಣೆ ಮಾಡಿದ 50 ಅಧಿಕಾರಿ ಮತ್ತು ಸಿಬ್ಬಂದಿಗೆ ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಮಾಡಿ ಅವರು ಮಾತನಾಡಿದರು.

ಮಾನವ-ವನ್ಯಮೃಗಗಳ ಸಂಘರ್ಷಗಳನ್ನು ತಡೆಯುವ ಕೆಲಸವಾಗಬೇಕು. ಅರಣ್ಯ ಪ್ರದೇಶಗಳಿಂದ ಪ್ರಾಣಿಗಳು ಬಾರದಂತೆ ಬ್ಯಾರಿಕೇಡ್ ನಿರ್ಮಿಸಲು ಹೆಚ್ಚಿನ ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಹೆಚ್ಚಿನ ಸಸಿಗಳನ್ನು ನೆಡುವ ಮೂಲಕ ಕಾಡು ಬೆಳೆಸುವ ಕೆಲಸವಾಗಬೇಕು. ಅರಣ್ಯ ಪ್ರದೇಶ ವಿಸ್ತೀರ್ಣಗೊಂಡರೆ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

ಕಾಡುಗಳಲ್ಲಿ ಹುಲಿ, ಆನೆಗಳ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿರುವುದು ಸಂತೋಷದ ವಿಷಯ. ಆದರೆ ಕಾಡುಪ್ರಾಣಿಗಳು ಜನರಿರುವ ಪ್ರದೇಶಕ್ಕೆ ಬರುತ್ತಿದ್ದು, ಅರಣ್ಯ ಇಲಾಖೆಯವರು ಹಾಗೂ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಹವಾಮಾನ ವೈಪರೀತ್ಯಗಳನ್ನು ತಡೆಯಬಹುದು: ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳನ್ನು ಪೆÇ್ರೀತ್ಸಾಹಿಸುವುದು ಸರಕಾರದ ಜವಾಬ್ದಾರಿ. ಅರಣ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ರಾಜ್ಯದ ಭೂ ಪ್ರದೇಶದಲ್ಲಿ ಶೇ.20ರಷ್ಟು ಮಾತ್ರ ಅರಣ್ಯ ಪ್ರದೇಶವಿದ್ದು, ಕನಿಷ್ಠ ಶೇ.33ಕ್ಕೆ ಅರಣ್ಯ ಪ್ರದೇಶದ ವಿಸ್ತರಣೆಯಾಗಬೇಕಿದೆ ಎಂದು ಅವರು ಹೇಳಿದರು.

ಆಗ ಮಾತ್ರ ಹವಾಮಾನ ವೈಪರೀತ್ಯಗಳನ್ನು ತಡೆಯಲು ಸಾಧ್ಯ. ಈ ವರ್ಷ ಮಳೆಯಿಲ್ಲದೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಕಾವೇರಿ ನೀರು, ಬರಗಾಲ, ಆಹಾರ ಉತ್ಪತ್ತಿ ಕೊರತೆಗಳು ತಲೆದೋರುತ್ತದೆ. ಈ ಪರಿಸ್ಥಿತಿ ರಾಜ್ಯದ ಜಿಡಿಪಿ, ತಲಾವಾರು ಆದಾಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ತಿಳಿಸಿದರು.

ಈ ಬಾರಿ 40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇ.50 ರಷ್ಟು ಬೆಳೆ ಹಾನಿಯಾಗಿದೆ. ಪ್ರತಿ ನಾಲ್ಕೈದು ವರ್ಷಕ್ಕೊಮ್ಮೆ ಇಂತಹ ಬರಗಾಲ ಪರಿಸ್ಥಿತಿ ಎದುರಾಗುತ್ತಿದ್ದು, ಅರಣ್ಯ ಪ್ರದೇಶ ಹೆಚ್ಚಿದರೆ ಹವಾಮಾನ ವೈಪರೀತ್ಯಗಳನ್ನು ತಡೆಗಟ್ಟಲು ಸಾಧ್ಯವಿದೆ ಎಂದು ಮುಖ್ಯಮಂತ್ರಿ ತಿಳಿಸಿದರು

ಪ್ರತಿ ವರ್ಷವೂ ಪದಕ ಪ್ರದಾನ: ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರು ಅತ್ಯಂತ ಕ್ಲಿಷ್ಟ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಾ ಅರಣ್ಯ ಸಂರಕ್ಷಣೆ ಮಾಡುತ್ತಾರೆ. ವನ್ಯಜೀವಿಗಳನ್ನು ರಕ್ಷಣೆ ಮಾಡುವುದಲ್ಲದೆ ಕಾಡು ಬೆಳೆಸುವ ಕೆಲಸವನ್ನೂ ಮಾಡುತ್ತಾರೆ. ಅಸಾಧಾರಣ ಸೇವೆ ಮಾಡಿದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ನೀಡಿ ಉತ್ತೇಜಿಸುವ ಕೆಲಸವನ್ನು 2017 ರಿಂದ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಎರಡು ವರ್ಷಗಳಿಂದ ಪದಕ ವಿತರಣಾ ಸಮಾರಂಭ ನಡೆದಿರಲಿಲ್ಲ. 2020 ಹಾಗೂ 2021 ನೆ ಸಾಲಿನ ಪದಕ ವಿತರಣೆಯನ್ನು ಅರಣ್ಯ ಇಲಾಖೆ ವತಿಯಿಂದ 50 ಪದಕಗಳನ್ನು ವಿತರಣೆ ಮಾಡಿದೆ. 2-3 ವರ್ಷಗಳ ಪದಕಗಳನ್ನು ಒಟ್ಟಿಗೆ ನೀಡುವ ಪರಿಪಾಠ ಇರಬಾರದು. ಪ್ರಶಸ್ತಿ ಪುರಸ್ಕøತರ ಆಯ್ಕೆಯ ನಂತರ ಎರಡು, ಮೂರು ವರ್ಷ ಕಾಯುವ ಅಗತ್ಯವಿಲ್ಲ. ಪ್ರತಿ ವರ್ಷವೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಬೇಕೆಂದು ಅರಣ್ಯ ಸಚಿವರಿಗೆ ಮುಖ್ಯಮಂತ್ರಿ ಸಲಹೆ ನೀಡಿದರು.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ನಮ್ಮ ರಾಜ್ಯದಲ್ಲಿ 6,395 ಆನೆಗಳು, 560 ಹುಲಿಗಳಿವೆ. ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೆ 2ನೇ ಸ್ಥಾನದಲ್ಲಿದೆ. ಈ ಹಿಂದೆ ಹುಲಿಗಳ ಚರ್ಮಕ್ಕಾಗಿ, ಉಗುರಿಗಾಗಿ ಕಳ್ಳಬೇಟೆ ನಡೆಯುತ್ತಿತ್ತು. ಇದನ್ನು ತಡೆಯಲು ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ 200ಕ್ಕೂ ಹೆಚ್ಚು ಕಳ್ಳಬೇಟೆ ತಡೆ ಶಿಬಿರಗಳನ್ನು ತೆರೆಯಲಾಗಿದೆ ಎಂದರು.

ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಈವರೆಗೆ 57 ಅರಣ್ಯ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ರಾಜ್ಯದಲ್ಲಿ ಸುಮಾರು 43 ಸಾವಿರ ಚದರ ಕಿಲೋ ಮೀಟರ್ ಅರಣ್ಯ ಪ್ರದೇಶ ಇದೆ. ಇದರಲ್ಲಿ ಸಾಕಷ್ಟು ಪ್ರಮಾಣದ ಅರಣ್ಯ ಒತ್ತುವರಿ ಆಗಿದೆ. ಅರಣ್ಯ ಪ್ರದೇಶ ಹೆಚ್ಚಿಸುವುದು ಮತ್ತು ಅರಣ್ಯ ಒತ್ತುವರಿ ತೆರವು ಮಾಡುವುದು ಅರಣ್ಯ ಇಲಾಖೆಯ ಸಿಬ್ಬಂದಿಯ ಆದ್ಯತೆ ಆಗಬೇಕು ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಈಶ್ವರ ಖಂಡ್ರೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಸಚಿವರಾದ ತರುವಾಯ 100 ದಿನಗಳಲ್ಲಿ ಮಾಡಿರುವ ಸಾಧನೆಯ ಕಿರುಹೊತ್ತಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X