Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪತ್ರಕರ್ತರ ಕ್ಷಮೆ ಕೋರಿದ ನಟ ದರ್ಶನ್

ಪತ್ರಕರ್ತರ ಕ್ಷಮೆ ಕೋರಿದ ನಟ ದರ್ಶನ್

ವಾರ್ತಾಭಾರತಿವಾರ್ತಾಭಾರತಿ25 Aug 2023 6:29 PM IST
share
ಪತ್ರಕರ್ತರ ಕ್ಷಮೆ ಕೋರಿದ ನಟ ದರ್ಶನ್

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್ ತೂಗುದೀಪ ಅವರು ಕರ್ನಾಟಕ ಮಾಧ್ಯಮ ಮತ್ತು ಪತ್ರಕರ್ತರ ಕ್ಷಮೆ ಕೋರಿದ್ದಾರೆ.

ಶುಕ್ರವಾರ ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʼʼಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣʼʼ ಎಂದು ಹೇಳಿಕೊಂಡಿದ್ದಾರೆ.

ದರ್ಶನ್ ಅವರ ಟ್ವೀಟ್‌ ಹೀಗಿದೆ...

ʼʼಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ, ಮಿತ್ರ ರಾಕ್ ಲೈನ್ ವೆಂಕಟಕೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆʼʼ ಎಂದು ತಿಳಿಸಿದ್ದಾರೆ.

ʼʼಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈರೀತಿಯ ದುರುದ್ದೇಶವನ್ನು ಮರುಕಳಿಸದಿರಲಿʼʼ ಎಂದು ಅವರು ಹೇಳಿದ್ದಾರೆ.

ʼʼಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ. ಪ್ರೀತಿಯಿರಲಿ, ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆʼʼ ಎಂದು ದರ್ಶನ್ ಟ್ವೀಟ್‌ ನಲ್ಲಿ ಬರೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X