Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್...

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ಆರೋಪಿಗಳನ್ನು ಕರೆದೊಯ್ದು ಹಲವೆಡೆ ಸ್ಥಳ ಮಹಜರು

́ʼತಪ್ಪೊಪ್ಪಿಕೊಂಡು ಶರಣಾಗುವಂತೆ ನಾಲ್ವರಿಗೆ ಹಣದ ಆಮಿಷʼ

ವಾರ್ತಾಭಾರತಿವಾರ್ತಾಭಾರತಿ12 Jun 2024 9:14 PM IST
share
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ಆರೋಪಿಗಳನ್ನು ಕರೆದೊಯ್ದು ಹಲವೆಡೆ ಸ್ಥಳ ಮಹಜರು

ಬೆಂಗಳೂರು: ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 13 ಜನರನ್ನು ಕಸ್ಟಡಿಗೆ ಪಡೆದುಕೊಂಡುರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬುಧವಾರ ಆರೋಪಿಗಳನ್ನು ಕೃತ್ಯಕ್ಕೆ ಸಂಬಂಧಪಟ್ಟಂತಹ ಸ್ಥಳಗಳಿಗೆ ಕರೆದೊಯ್ದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಬುಧವಾರ ಮಧ್ಯಾಹ್ನದ ವೇಳೆಗೆ ನಗರದ ಸುಮ್ಮನಹಳ್ಳಿಯ ಬ್ರಿಡ್ಜ್ ಬಳಿ ರೇಣುಕಾಸ್ವಾಮಿ ಮೃತದೇಹವನ್ನು ಬಿಸಾಡಿದ್ದ ಸ್ಥಳಕ್ಕೆ ಆರೋಪಿಗಳಾದ ಕಾರ್ತಿಕ್, ನಿಖಿಲ್ ಹಾಗೂ ರಾಘವೇಂದ್ರ ಅವರನ್ನು ಪೊಲೀಸರು ಕರೆದೊಯ್ದರು. ಈ ವೇಳೆ, ಮೃತದೇಹ ಬಿಸಾಕಿರುವ ಸ್ಥಳವನ್ನು ಆರೋಪಿಗಳು ಪೊಲೀಸರಿಗೆ ತೋರಿಸಿದ್ದಾರೆ.

ಮೃತದೇಹ ಬಿಸಾಕಿದ್ದ ಸ್ಥಳದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿಕೊಂಡ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಸಂಗ್ರಹಿಸಿ ಮತ್ತೆ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕರೆತಂದರು.

ನಂತರ ಹಲ್ಲೆ ಬಳಿಕ ಹತ್ಯೆ ಮಾಡಲಾಗಿದ್ದ ಆರ್.ಆರ್.ನಗರದ ಪಟ್ಟಣಗೆರೆಯ ಶೆಡ್‍ಗೆ ಸಂಜೆಯ ವೇಳೆಗೆ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಕೊಲೆಯಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಕರೆತಂದ ಪೊಲೀಸರು ಸ್ಥಳ ಮಹಜರು ನಡೆಸಿದರು. ಈ ಶೆಡ್ ಆರೋಪಿಗಳ ಪೈಕಿ ಓರ್ವನಾದ ವಿನಯ್ ಸೋದರ ಮಾವನ ಒಡೆತನದಲ್ಲಿದೆ. ಇಲ್ಲಿಗೆ ದರ್ಶನ್ ಹೋಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಮಹಜರು ನಡೆಸಲಾಗಿದೆ.

ಶೆಡ್‍ನಲ್ಲಿ ಎಷ್ಟು ಮಂದಿಯಿದ್ದರು. ಹಲ್ಲೆ ಮಾಡುವಾಗ ಹಾಗೂ ಹತ್ಯೆ ಬಳಿಕ ಯಾರೆಲ್ಲಾ ಸ್ಥಳದಲ್ಲಿದ್ದರು ಹಾಗೂ ಹಲ್ಲೆ ಮಾಡಲು ಬಳಸಿದ ವಸ್ತುಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸದ್ಯ ಕೃತ್ಯ ನಡೆದಿದ್ದ ಪಟ್ಟಣಗೆರೆಯ ಶೆಡ್ ಬಳಿ ಜೂ.9ರ ಮುಂಜಾನೆ ನಟ ದರ್ಶನ್ ಸಹವರ್ತಿಗಳು ಕಾರಿನಲ್ಲಿ ಓಡಾಡಿರುವ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿರುವುದಾಗಿ ಗೊತ್ತಾಗಿದೆ.

ತಪ್ಪೊಪ್ಪಿಕೊಂಡು ಶರಣಾಗುವಂತೆ ನಾಲ್ವರಿಗೆ ಹಣದ ಆಮಿಷ: ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರ ವಿಚಾರಣೆಯಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿದ್ದು, ರೇಣುಕಾಸ್ವಾಮಿ ಹತ್ಯೆಗೈದ ಬಳಿಕ ಶರಣಾಗತಿಯಾಗಿದ್ದ ಕಾರ್ತಿಕ್, ರಾಘವೇಂದ್ರ, ಕೇಶವಮೂರ್ತಿ ಹಾಗೂ ನಿಖಿಲ್ ನಾಯಕ್ ಎಂಬುವರಿಗೆ ತಲಾ 5ಲಕ್ಷ ರೂ.ಹಣ ನೀಡಿ ಪೊಲೀಸರ ಮುಂದೆ ತಪ್ಪೊಪ್ಪಿಕೊಳ್ಳಲು ಆರೋಪಿ ದರ್ಶನ್ ಆಪ್ತ ದೀಪಕ್ ಎಂಬಾತ ಹೇಳಿರುವುದಾಗಿ ತನಿಖೆಯಿಂದ ಗೊತ್ತಾಗಿರುವ ಬಗ್ಗೆ ಪೊಲೀಸ್ ಮೂಲಗಳು ತಿಳಿಸಿವೆ.

ಅಲ್ಲದೆ, ನ್ಯಾಯಾಲಯಕ್ಕೆ ಸಲ್ಲಿಸಿದ ರಿಮಾಂಡ್ ಅಪ್ಲಿಕೇಶನ್‍ನಲ್ಲಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಬರಕೂಡದು. ಬಂಧನವಾದ ಬಳಿಕ ವಕೀಲರ ಫೀಸ್ ಸೇರಿದಂತೆ ಮನೆಯವರಿಗೆ ಹಣ ನೀಡುವುದಾಗಿ ದರ್ಶನ್ ಆಪ್ತ ಹಾಗೂ ಪ್ರಕರಣದಲ್ಲಿ ಬಂಧಿತನಾಗಿರುವ ದೀಪಕ್, ಶರಣಾಗತಿಯಾದ ನಾಲ್ವರಿಗೂ ಭರವಸೆ ನೀಡಿದ್ದ. ಅದರಂತೆ ನಿಖಿಲ್ ಹಾಗೂ ಕೇಶವಮೂರ್ತಿಗೆ ತಲಾ 5ಲಕ್ಷ ರೂ.ಹಣ ನೀಡಿದ್ದ. ಬಂಧನವಾದ ಬಳಿಕ ಮನೆಯವರಿಗೆ ಹಣ ನೀಡುವುದಾಗಿ ಕಾರ್ತಿಕ್ ಮತ್ತು ರಾಘವೇಂದ್ರಗೆ ಹೇಳಿದ್ದ. ಇದರಂತೆ ಜೂ.10ರಂದು ರಾತ್ರಿ 7 ಗಂಟೆ ವೇಳೆಗೆ ನಾಲ್ವರು ಆರೋಪಿಗಳು ಪೊಲೀಸರ ಮುಂದೆ ಶರಣಾಗತಿ ಆಗಿರುವುದಾಗಿ ರಿಮಾಂಡ್ ಅರ್ಜಿಯಲ್ಲಿ ಪೊಲೀಸರು ನಮೂದಿಸಿವುದು ವರದಿಯಾಗಿದೆ.

ಈ ಪ್ರಕರಣದಲ್ಲಿ ಒಟ್ಟು 17 ಮಂದಿ ಭಾಗಿಯಾಗಿರುವುದು ದೃಢಪಟ್ಟಿದೆ. 13 ಮಂದಿಯನ್ನು ಮಾತ್ರ ಪೊಲೀಸರು ಬಂಧಿಸಿದ್ದು, ಇನ್ನುಳಿದ ನಾಲ್ವರು ತಲೆಮರೆಸಿಕೊಂಡಿದ್ದಾರೆ. ರಾಘವೇಂದ್ರ ಮುಖಾಂತರ ರೇಣುಕಾಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್‍ವೊಂದಕ್ಕೆ ಕರೆತಂದು ಹಗ್ಗ, ರಿಪೀಸ್ ಪಟ್ಟಿ, ಕೋಲಿನಿಂದ ಹೊಡೆದು ಹತ್ಯೆ ಮಾಡಿ ಬಳಿಕ ಸುಮ್ಮನಹಳ್ಳಿಯ ಬ್ರಿಡ್ಜ್ ಬಳಿಯ ಮೋರಿ ಬಳಿ ಶವ ಎಸೆದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೃತ್ಯಕ್ಕೆ ಬಳಸಿದ್ದ ವಾಹನಗಳು ವಶಕ್ಕೆ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ವಿನಯ್ ಮತ್ತು ಪ್ರದೋಶ್ ಹೆಸರಿನಲ್ಲಿ ನೋಂದಣಿಯಾಗಿರುವ ಕೆಂಪು ಬಣ್ಣದ ಒಂದು ಜೀಪ್, ಕಪ್ಪು ಬಣ್ಣದ ಸ್ಕಾರ್ಪಿಯೋ ಗಾಡಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವುಗಳು ರೇಣುಕಾಸ್ವಾಮಿ ಹತ್ಯೆಯಾದ ಜೂ.8ರ ರಾತ್ರಿ ಘಟನಾ ಸ್ಥಳಕ್ಕೆ ಬರಲು ನಟ ದರ್ಶನ್ ಹಾಗೂ ಸಹಚರರು ಬಳಸಿದ್ದ ಜೀಪ್ ಹಾಗೂ ಸ್ಕಾರ್ಪಿಯೋ ಕಾರುಗಳಾಗಿವೆ. ಅಲ್ಲದೆ ಕಾರಿನಲ್ಲಿ ಮದ್ಯದ ಬಾಟಲಿ ಸಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿ ಪಡೆದುಕೊಂಡ ಬಿ.ದಯಾನಂದ್: ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಬುಧವಾರ ಬೆಳಗ್ಗೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ತನಿಖೆ ಯಾವ ರೀತಿ ನಡೆಯುತ್ತಿದೆ, ಏನೆಲ್ಲಾ ಮಾಹಿತಿಗಳನ್ನು ಆರೋಪಿಗಳಿಂದ ಪಡೆದುಕೊಳ್ಳಲಾಗಿದೆ, ಈ ಪ್ರಕರಣದಲ್ಲಿ ಇನ್ನು ಯಾರ್ಯಾರು ಭಾಗಿಯಾಗಿದ್ದಾರೆ. ಅಲ್ಲದೆ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾದಂತಹ ಸಾಕ್ಷ್ಯಾಧಾರಗಳನ್ನು ಬೇಗ ಸಂಗ್ರಹಿಸಬೇಕು ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.

ಶಿಕ್ಷೆಗೆ ವೀರಶೈವ ಮಹಾಸಭಾ ಒತ್ತಾಯ: ‘ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೃತ್ಯವೆಸಗಿರುವವರೂ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ ಎಲ್ಲ ವ್ಯಕ್ತಿಗಳಿಗೂ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೇ ಆರೋಪಿ ಸ್ಥಾನದಲ್ಲಿರುವವರನ್ನು ರಕ್ಷಿಸದೇ ಸರಕಾರವು ಶ್ರೀಸಾಮಾನ್ಯನ ಜತೆಗೆ ನಿಲ್ಲುತ್ತದೆ ಎಂಬುದನ್ನು ಈ ಘಟನೆಯಲ್ಲಿ ತೋರಿಸಬೇಕಾಗಿದೆ. ಈ ವಿಷಯದಲ್ಲಿ ಸರಕಾರ ನಿರ್ಲಕ್ಷ್ಯ ತೋರಿದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ಎಚ್.ಎಂ.ರೇಣುಕಾ ಪ್ರಸನ್ನ ಹೇಳಿದ್ದಾರೆ.

‘ಮದಕ್ಕೆ ಕಾರುಣ್ಯದ ಅರಿವಿಲ್ಲಾ’ ಎಂದು ಚಿತ್ರನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್, ತಮ್ಮದೆ ದಾಟಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬುಧವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಜಗ್ಗೇಶ್, ‘ಸರ್ವಆತ್ಮಾನೇನಬ್ರಹ್ಮ, ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ, ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ, ಕಲಿಯುಗದಲ್ಲಿ ದೇವರು ಕಲ್ಲಲ್ಲಾ, ಎಲ್ಲಾ ಕರ್ಮಕ್ಕು ತತಕ್ಷಣ ಫಲಿತಾಂಶ ಉಂಟು!, ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’ ಎಂದು ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X