ನಟ ಧನ್ವೀರ್ರನ್ನು ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು; ಕಾರಣವೇನು?

ಧನ್ವೀರ್ | PC : instagram
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ರಾಜಾತಿಥ್ಯದ ವಿಡಿಯೋ ಬಿಡುಗಡೆಯಾದ ಬೆನ್ನಲ್ಲೇ ದರ್ಶನ್ ಆಪ್ತ ನಟ ಧನ್ವೀರ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ವಿಡಿಯೋಗಳನ್ನು ನಟ ಧನ್ವೀರ್ ಬಿಡುಗಡೆ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ.9ರ ರವಿವಾರದಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಸದ್ಯ, ಧನ್ವೀರ್ ಅವರ ಮೊಬೈಲ್ ಅನ್ನು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
Next Story





