ʼಮತದಾನವಿಲ್ಲದೆ ಚುನಾವಣೆಗಳು ನಡೆಯುವ ಏಕೈಕ ಪ್ರಜಾಪ್ರಭುತ್ವʼ : 68 ಮಹಾಯುತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ ಬಗ್ಗೆ ನಟ ಕಿಶೋರ್ ಕುಮಾರ್ ಕಳವಳ

ಬೆಂಗಳೂರು : ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟವು ಪ್ರಾಬಲ್ಯ ಮೆರೆದಿದ್ದು, ಮತದಾನ ನಡೆಯುವ ಮೊದಲೇ 68 ಮಹಾಯುತಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ 44 ಮಂದಿ ಬಿಜೆಪಿಯವರಾಗಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ನಟ ಕಿಶೋರ್ ಕುಮಾರ್, "ಪ್ರಜಾಪ್ರಭುತ್ವದ ತಾಯಿ - ಮತದಾನವಿಲ್ಲದೆ ಚುನಾವಣೆಗಳು ನಡೆಯುವ ಏಕೈಕ ಪ್ರಜಾಪ್ರಭುತ್ವ" ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನೇತೃತ್ವದ ಮಹಾಯುತಿ ಕೂಟ ಸಜ್ಜಾಗಿದೆ. ಬೃಹನ್ಮುಂಬೈ ಮಹಾನಗರ ಪಾಲಿಕೆಯ 227 ಸ್ಥಾನಗಳ ಪೈಕಿ ಮಹಾಯುತಿ ಕೂಟ 118 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 89 ಸ್ಥಾನಗಳನ್ನು ಬಗಲಿಗೆ ಹಾಕಿಕೊಂಡಿದ್ದರೆ, ಮಿತ್ರಪಕ್ಷ ಶಿವಸೇನೆ (ಶಿಂಧೆ ಬಣ) 29 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
Next Story







