Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಬುದ್ಧಿವಂತರಾಗಿರಿ, ಅಂಧಭಕ್ತರಾಗಬೇಡಿ’:...

‘ಬುದ್ಧಿವಂತರಾಗಿರಿ, ಅಂಧಭಕ್ತರಾಗಬೇಡಿ’: ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ಹೇಳಿಕೆಗೆ ಪ್ರಕಾಶ್ ರಾಜ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ16 Aug 2026 8:31 PM IST
share
‘ಬುದ್ಧಿವಂತರಾಗಿರಿ, ಅಂಧಭಕ್ತರಾಗಬೇಡಿ’: ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ಹೇಳಿಕೆಗೆ ಪ್ರಕಾಶ್ ರಾಜ್ ಟೀಕೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಬಳಸಿದ ‘ದಿಮಾಗಿ ನಕ್ಸಲ್’ ಎಂಬ ಪದಕ್ಕೆ ನಟ ಪ್ರಕಾಶ್ ರಾಜ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರಕಾರವನ್ನು ಪ್ರಶ್ನಿಸುವವರು ಹಾಗೂ ಸರಕಾರದ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸುವವರನ್ನು ‘ದಿಮಾಗಿ ನಕ್ಸಲರು’ ಎಂದು ಕರೆಯಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ರವಿವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಸ್ವಾತಂತ್ರ್ಯ ದಿನದಂದು ದೇಶದಲ್ಲಿ ಎರಡು ವಿಭಿನ್ನ ರೀತಿಯ ಕೆಲಸಗಳನ್ನು ನೋಡಿದ್ದೇವೆ ಎಂದು ಹೇಳಿದರು.

ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಸರ್ವೋಚ್ಚ ನಾಯಕ’ ಎಂದು ಉಲ್ಲೇಖಿಸಿದ ಅವರು, ಮತ್ತೊಂದೆಡೆ ಸರಕಾರವನ್ನು ಪ್ರಶ್ನಿಸುವವರನ್ನು ‘ಜಿರಳೆಗಳು’ ಅಥವಾ ‘ದಿಮಾಗಿ ನಕ್ಸಲರು’ ಎಂದು ಕರೆಯಲಾಗುತ್ತಿದೆ ಎಂದು ವ್ಯಂಗ್ಯವಾಡಿದರು.

‘ಇಷ್ಟು ವರ್ಷ ನಗರ ನಕ್ಸಲರು, ದೇಶವಿರೋಧಿಗಳು, ಕೀಟಗಳು, ಜಿರಳೆಗಳು ಎಂಬ ಪದಗಳನ್ನು ಬಳಸಲಾಗುತ್ತಿತ್ತು. ಈಗ ನಮಗೆ ‘ದಿಮಾಗಿ ನಕ್ಸಲರು’ ಎಂದು ನಾಮಕರಣ ಮಾಡಿದ್ದಾರೆ’ ಎಂದು ಅವರು ಟೀಕಿಸಿದರು.

ಸರಕಾರಿ ಶಾಲೆಗಳ ಸ್ಥಿತಿಯ ಪ್ರಶ್ನೆ :

‘ಶಾಲಾ ಥಿಕ್ ಕರೋ’ ಎಂಬ ಅಭಿಯಾನದಲ್ಲಿ ಭಾಗವಹಿಸುತ್ತಿರುವ ಸ್ವಯಂಸೇವಕರ ಬಗ್ಗೆಯೂ ಪ್ರಕಾಶ್ ರಾಜ್ ಮಾತನಾಡಿದರು. ಈ ಸ್ವಯಂಸೇವಕರು ಹಳ್ಳಿಗಳ ಸರಕಾರಿ ಶಾಲೆಗಳಿಗೆ ತೆರಳಿ ಅಲ್ಲಿನ ಮೂಲಸೌಕರ್ಯದ ಸ್ಥಿತಿಯನ್ನು ಜನರಿಗೆ ತೋರಿಸುತ್ತಿದ್ದಾರೆ ಎಂದು ಹೇಳಿದರು.

‘ಇವರನ್ನು ದಿಮಾಗಿ ನಕ್ಸಲರು ಅಥವಾ ಜಿರಳೆಗಳು ಎಂದು ಕರೆಯಲಾಗುತ್ತಿದೆ. ಆದರೆ ಅವರು ಹಳ್ಳಿಗಳ ಸರಕಾರಿ ಶಾಲೆಗಳಿಗೆ ಹೋಗಿ ಅಲ್ಲಿನ ಶೌಚಾಲಯಗಳ ಸ್ಥಿತಿ, ತರಗತಿ ಕೊಠಡಿಗಳ ಕೊರತೆ, ಶಿಕ್ಷಕರ ಕೊರತೆ ಮತ್ತು ರಸ್ತೆಗಳ ಕೊರತೆಯನ್ನು ತೋರಿಸುತ್ತಿದ್ದಾರೆ. ಸರಕಾರಿ ಶಾಲೆಗಳಲ್ಲಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನೂ ಬಹಿರಂಗಪಡಿಸುತ್ತಿದ್ದಾರೆ’ ಎಂದು ನಟ ಪ್ರಕಾಶ್ ರಾಜ್ ಹೇಳಿದರು.

ಸ್ವಾತಂತ್ರ್ಯ ದಿನದಂದು ದೇಶದಲ್ಲಿ ನಡೆಯುತ್ತಿರುವ ಈ ಎರಡು ರೀತಿಯ ಕೆಲಸಗಳನ್ನು ನೋಡಿದ ಬಳಿಕ ಜನರು ಯಾರನ್ನು ಬೆಂಬಲಿಸಬೇಕು ಎಂಬುದನ್ನು ತಾವೇ ನಿರ್ಧರಿಸಬೇಕು ಎಂದು ಅವರು ಹೇಳಿದರು.

‘ಬುದ್ಧಿವಂತರಾಗಿರಿ, ಪ್ರಶ್ನೆ ಕೇಳಿ’ :

‘ದಿಮಾಗಿ ಬನೋ, ಬೇವಕೂಫ್ ನಹಿ, ಅಂಧಭಕ್ತ್ ನಹಿ. ಸವಾಲ್ ಕರೋ, ಗುಲಾಮಿ ನಹಿ’ ಎಂದು ಪ್ರಕಾಶ್ ರಾಜ್ ಹೇಳಿದರು.

ಅಂದರೆ, ‘ಬುದ್ಧಿವಂತರಾಗಿರಿ; ಮೂರ್ಖರಾಗಬೇಡಿ; ಅಂಧಭಕ್ತರಾಗಬೇಡಿ. ಪ್ರಶ್ನೆಗಳನ್ನು ಕೇಳಿ; ಅಧೀನರಾಗಬೇಡಿ’ ಎಂಬುದು ಅವರ ಸಂದೇಶವಾಗಿತ್ತು.

ವೀಡಿಯೊದ ಕೊನೆಯಲ್ಲಿ ಪ್ರಧಾನಿಯನ್ನು ‘ಪ್ರಿಯ ಸ್ನೇಹಿತ’ ಎಂದು ಉಲ್ಲೇಖಿಸಿದ ರಾಜ್, ದೇಶದ ನೈಜ ಸಮಸ್ಯೆಗಳತ್ತ ಗಮನಹರಿಸುವಂತೆ ಮನವಿ ಮಾಡಿದರು.

‘ನಾಮಕರಣ ಸಮಾರಂಭಗಳಿಗೆ ಕೆಂಪುಕೋಟೆಯನ್ನು ಬಳಸುವುದನ್ನು ನಿಲ್ಲಿಸಿ, ದೇಶ ಎದುರಿಸುತ್ತಿರುವ ನೈಜ ಸಮಸ್ಯೆಗಳ ಬಗ್ಗೆ ಗಮನಹರಿಸಿ ಕೆಲಸ ಮಾಡುತ್ತೀರಾ?’ ಎಂದು ಅವರು ಪ್ರಧಾನಿಯನ್ನು ಪ್ರಶ್ನಿಸಿದರು.

‘ಸರಕಾರಿ ಶಾಲೆಗಳನ್ನು ಮುಚ್ಚುವುದನ್ನು ನಿಲ್ಲಿಸುವ ಮೂಲಕ ನೀವು ಆರಂಭಿಸುತ್ತೀರಾ? ಶಾಲೆಗಳಲ್ಲಿ ಸ್ವಚ್ಛ ಶೌಚಾಲಯಗಳು, ಸಾಕಷ್ಟು ಶಿಕ್ಷಕರು, ಅಗತ್ಯ ಸಂಖ್ಯೆಯ ತರಗತಿ ಕೊಠಡಿಗಳು ಮತ್ತು ಮಕ್ಕಳ ಭವಿಷ್ಯಕ್ಕೆ ಉತ್ತಮ ವಾತಾವರಣ ಕಲ್ಪಿಸುವತ್ತ ಗಮನಹರಿಸುತ್ತೀರಾ?’ ಎಂದು ಅವರು ಕೇಳಿದರು.

ಪ್ರಧಾನಿ ಮೋದಿ ಅವರ ಅಧಿಕಾರಾವಧಿಯಲ್ಲಿ ಇನ್ನೂ ಕೆಲವು ವರ್ಷಗಳು ಬಾಕಿ ಇರುವುದರಿಂದ, ಸರಕಾರಿ ಶಾಲೆಗಳನ್ನು ಕಾಡುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಪ್ರಧಾನಿ ‘ಏನಾದರೂ’ ಕ್ರಮ ಕೈಗೊಳ್ಳುತ್ತಾರೆ ಎಂದು ಆಶಿಸುವುದಾಗಿ ಪ್ರಕಾಶ್ ರಾಜ್ ಹೇಳಿದರು.

Dear fraaands Dimagi bano ..Bewakoof nahi . Sawaal karo .. Gulami nahi. #justasking pic.twitter.com/oiQ2rG3MY0

— Prakash Raj (@prakashraaj) August 16, 2026

Tags

Actor Prakash RajPrime Minister Modi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X