11 ಮಂದಿ ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ

ಬೆಂಗಳೂರು, ಸೆ.2 : ರಾಜ್ಯ ಸರಕಾರವು 11 ಮಂದಿ ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಮಂಗಳವಾರ ಆದೇಶ ಹೊರಡಿಸಿದೆ.
ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೋಹನ್ ರಾಜ್ ಕೆ.ಪಿ. ಅವರಿಗೆ ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನ ಹಾಗೂ ಆರ್ ಅಂಡ್ ಆರ್‌ನ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಕೃಷಿ ಇಲಾಖೆಯ ಆಯುಕ್ತ ಪಾಟೀಲ್ ಯಲಗೌಡ ಶಿವನಗೌಡ ಅವರನ್ನು ರಾಷ್ಟ್ರೀಯ ತೋಟಗಾರಿಕೆ ಮಿಷನ್‍ನ ನಿರ್ದೇಶಕರಾಗಿ ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಗೋಪಾಲ ಕೃಷ್ಣ ಎಚ್.ಎನ್. ಅವರನ್ನು ಕಾರ್ಮಿಕ ಇಲಾಖೆಯ ಇಎಸ್‍ಐಎಸ್ ಆಯುಕ್ತರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತ ಡಾ.ರಾಜೇಂದ್ರ ಕೆ.ವಿ. ಅವರನ್ನು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಸ್ಟ್ಯಾಂಪ್ಸ್ ಆಯುಕ್ತ ಹಾಗೂ ನೋಂದಣಿ ಮಹಾ ನಿರೀಕ್ಷಕ ಮುಲೈ ಮುಹಿಲಾನ್ ಅವರನ್ನು ಕಂದಾಯ ಇಲಾಖೆಯ ಆಯುಕ್ತ, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಳಿನಿ ಅತುಲ್ ಅವರನ್ನು ಕಲಬುರಗಿ ಜಿಲ್ಲೆಯ ಸಾರ್ವಜನಿಕ ನಿರ್ದೇಶನಾಲಯದ ಹೆಚ್ಚುವರಿ ಆಯುಕ್ತ, ಬೆಂಗಳೂರು ಪೂರ್ವ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಭರತ್ ಎಸ್. ಅವರನ್ನು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ, ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ರಾಹುಲ್ ಶರಣಪ್ಪ ಸಂಕನೂರ್ ಅವರನ್ನು ರಾಜ್ಯ ಲೋಕಸೇವಾ ಆಯೋಗದ ಜಂಟಿ ಪರೀಕ್ಷಾ ನಿಯಂತ್ರಕ ಹಾಗೂ ಐಟಿಬಿಟಿ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ದಲ್ಜೀತ್ ಕುಮಾರ್ ಅವರನ್ನು ಐಟಿಬಿಟಿ ಇಲಾಖೆಯ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಸರಕಾರ ಆದೇಶ ಹೊರಡಿಸಿದೆ.







