ಎಡಿಜಿಪಿ ಅಲೋಕ್ ಕುಮಾರ್ ವರ್ಗಾವಣೆ

ಬೆಂಗಳೂರು, ಸೆ.29: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯನ್ನಾಗಿ ಅ.1ರಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಎಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಡಿಜಿಪಿ ಹುದ್ದೆಗೆ ಭಡ್ತಿ ನೀಡಿ ಪೊಲೀಸ್ ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Next Story





