Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಚ್.ಡಿ. ಕುಮಾರಸ್ವಾಮಿ ಅಧಿಕಾರ ದುರ್ಬಳಕೆ...

ಎಚ್.ಡಿ. ಕುಮಾರಸ್ವಾಮಿ ಅಧಿಕಾರ ದುರ್ಬಳಕೆ ಮಾಡಿ ಅಕ್ರಮವಾಗಿ ದಾಖಲೆಗಳನ್ನು ಪಡೆದಿದ್ದಾರೆಯೇ​ ?

ಕುಟುಂಬವನ್ನು ಎಳೆದು ತಂದ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಎಡಿಜಿಪಿ

ವಾರ್ತಾಭಾರತಿವಾರ್ತಾಭಾರತಿ12 Oct 2024 1:38 PM IST
share
ಎಚ್.ಡಿ. ಕುಮಾರಸ್ವಾಮಿ ಅಧಿಕಾರ ದುರ್ಬಳಕೆ ಮಾಡಿ ಅಕ್ರಮವಾಗಿ ದಾಖಲೆಗಳನ್ನು ಪಡೆದಿದ್ದಾರೆಯೇ​ ?

ತನ್ನ ಹಾಗೂ ತನ್ನ ಕುಟುಂಬದ ವಿರುದ್ಧ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ದೂರು ದಾಖಲಿಸಿದ್ದಾರೆ.

​ಕುಮಾರಸ್ವಾಮಿ ಅವರ ವಿರುದ್ಧವೇ ಪೊಲೀಸ್ ದೂರು ದಾಖಲಿಸಿರುವ ಎಡಿಜಿಪಿ ಚಂದ್ರಶೇಖರ್ ತಮ್ಮ ವಿವರವಾದ ದೂರಿನಲ್ಲಿ ಹೇಳಿದ್ದೇನು?

ತನಿಖಾಧಿಕಾರಿಗೇ ಬಹಿರಂಗ ಬೆದರಿಕೆ ಒಡ್ಡಿರುವ ಆರೋಪದಲ್ಲಿ ಕೇಂದ್ರ ಸಚಿವ ಮತ್ತು ​ಗಣಿ ಹಗರಣದ ಆರೋಪಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಸಂಜಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಂ ಚಂದ್ರಶೇಖರ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಹಾಗೂ ಆಪ್ತ ಸುರೇಶ್ ಬಾಬು ವಿರುದ್ಧ​ವೂ ದೂರು ದಾಖಲಾಗಿದೆ.

ಕುಮಾರಸ್ವಾಮಿಯವರು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ, ಮೌಖಿಕವಾಗಿ ಬೆದರಿಸಿದ್ದಾರೆ. ನನ್ನನ್ನು ಕರ್ನಾಟಕ ಕೇಡರ್‌ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಚಂದ್ರಶೇಖರ್ ದೂರಿದ್ದಾರೆ.

ಕುಮಾರಸ್ವಾಮಿ ವಿರುದ್ಧ ವಿವರವಾದ ದೂರನ್ನು ಎಡಿಜಿಪಿ ಸಲ್ಲಿಸಿದ್ದು, ಅದರ ಪ್ರಮುಖ ಅಂಶಗಳು ಇಲ್ಲಿವೆ...

1. ತನಿಖೆ ನಡೆಸಲಾಗುತ್ತಿರುವ ಕ್ರಿಮಿನಲ್ ಮೊಕದ್ದಮೆಯಲ್ಲಿ ಆರೋಪಿಯಾಗಿರುವ ಮತ್ತು ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ, ಎಸ್ಐಟಿ ಕಾನೂನುಬದ್ಧವಾಗಿ ಕೆಲಸ ಮಾಡುತ್ತಿರು​ವುದರಿಂದ ವಿಚಲಿತರಾಗಿದ್ದು, ಸರಣಿ ಸುದ್ದಿಗೋಷ್ಠಿಗಳ ಮೂಲಕ ನನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ.

ಅವರು ಆರೋಪಿಯಾಗಿರುವ ಪ್ರಕರಣದಲ್ಲಿ ನನ್ನನ್ನು ಮತ್ತು ಎಸ್ಐಟಿಯನ್ನು ತಡೆಯಲು ಹೀಗೆ ಮಾಡಲಾಗುತ್ತಿದೆ. ತಮ್ಮ ವಿರುದ್ಧ ಎಸ್ಐಟಿ ನಡೆಸುತ್ತಿರುವ ತನಿಖೆಗೆ ಅಡ್ಡಿಪಡಿಸುವ ಉದ್ದೇಶ ಅವರಿಗಿದೆ. ನನ್ನ ಮೇಲೆ ವಾಗ್ದಾಳಿ ನಡೆಸಿ, ನನ್ನನ್ನು ಕರ್ನಾಟಕ ಕೇಡರ್‌ನಿಂದ ಬೇರೆಡೆಗೆ ವರ್ಗಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನನಗೆ ಮತ್ತು ನನ್ನ ಕುಟುಂಬಕ್ಕೆ ಹಲ್ಲೆ ಬೆದರಿಕೆ ಹಾಕಿದ್ದು, ತನಿಖೆ ಮುಂದುವರಿಸದಂತೆ ತಡೆಯುವುದು ಸೆಕ್ಷನ್ 224 BNS 2023 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ.

2. ನಾನು ಬೌರಿಂಗ್ ಆಸ್ಪತ್ರೆಯಿಂದ ಸುಳ್ಳು ದಾಖಲೆಗಳನ್ನು ಪಡೆದು ಕರ್ನಾಟಕ ಕೇಡರ್ ನಲ್ಲಿರುವುದಾಗಿ ಅವರು ಆರೋಪಿಸಿದ್ದಾರೆ. ಈ ವಿಷಯವನ್ನು ಕೇಂದ್ರ ಗೃಹ ಸಚಿವಾಲದೊಡನೆ ಚರ್ಚಿಸುವುದಾಗಿಯೂ ಬೆದರಿಸಿದ್ದಾರೆ. ಗೃಹ ಸಚಿವಾಲಯದ ಆದೇಶದಂತೆ ನಾನು 2013ರಲ್ಲಿ ಕರ್ನಾಟಕ ಕೇಡರ್ ನ ಭಾಗವಾಗಿದ್ದೇನೆ. ನನ್ನ ಹಿನ್ನೆಲೆ ಪರಿಶೀಲಿಸುವ ಪ್ರಯತ್ನ ಮಾಡಿರುವುದಾಗಿಯೂ ಅವರು ಹೇಳಿದ್ದಾರೆ. ಇದಕ್ಕಾಗಿ ಅವರು ಕೇಂದ್ರ ಸಚಿವ ಸ್ಥಾನ ದುರ್ಬಳಕೆ ಮಾಡಿಕೊಂಡಿದ್ದರೆ ಅದರ ತನಿಖೆಯಾಗಬೇಕು. ಆ ಹುದ್ದೆಯಲ್ಲಿದ್ದು ಅವರು ನನ್ನ ವೃತ್ತಿಜೀವನಕ್ಕೆ ಅಡ್ಡಿಪಡಿಸುವ ಬೆದರಿಕೆ ಹಾಕುತ್ತಿದ್ದಾರೆ.

3. ಎಸ್ಐಟಿ 2023ರ ನವೆಂಬರ್ ನಲ್ಲಿ ಪ್ರಾಸಿಕ್ಯೂಷನ್ ಗೆ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿತ್ತೆಂದು ಸುದ್ದಿಗೋಷ್ಠಿಯಲ್ಲಿ ಉಲ್ಲೇಖಿಸಿದ್ದಾರೆ. ರಾಜ್ಯಪಾಲರು ಪ್ರಕರಣವನ್ನು ಮತ್ತೊಮ್ಮೆ ಪರಿಶೀಲಿಸಲು ಸೂಚಿಸಿದ್ದರೆಂಬುದನ್ನು ಹೇಳಿದ್ದಾರೆ. ರಾಜ್ಯಪಾಲರ ಕಚೇರಿ ಎಸ್ಐಟಿಯಿಂದ ಸ್ಪಷ್ಟೀಕರಣ ಕೇಳಿತ್ತೆಂಬ ವಿಷಯವೂ ನಿಖರವಾಗಿ ಆರೋಪಿಗೆ ತಿಳಿದಿದೆ. ಇದರಿಂದ ನಾನು ಗಾಬರಿಗೊಂಡಿದ್ದೇನೆ.

ರಾಜಭವನದಿಂದ 24/7/2024ರಂದು ಕಳಿಸಿದ ಸ್ಪಷ್ಟೀಕರಣವನ್ನು ಎಸ್ಐಟಿ ಕಚೇರಿ ಸ್ವೀಕರಿಸಿರುವುದು 8/8/2024ರಂದು ಎಂಬ ವಿವರವೂ ಅವರ ಬಳಿ ಇತ್ತು. ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್​ ಗೆ ಸಂಬಂಧಿಸಿದ ಪ್ರಕರಣದ ದಾಖಲೆ ಮತ್ತು ಕಡತಗಳನ್ನೂ​ ಆರೋಪಿ ಹೊಂದಿದ್ದಾರೆ. ತನಿಖಾಧಿಕಾರಿಗಳು ಆರೋಪಿಗಳ ವಿರುದ್ಧ ಸಾಕ್ಷ್ಯವಾಗಿ ಸಂಗ್ರಹಿಸಿದ ದಾಖಲೆಗಳ ಪ್ರತಿಗಳನ್ನೂ ಸುದ್ದಿಗೋಷ್ಠಿಯಲ್ಲಿ ಅವರು ತೋರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಆರೋಪಿ ಅಕ್ರಮವಾಗಿ ಪಡೆದಿರುವುದು ಮತ್ತು ತನಿಖೆ ಹಾಳುಗೆಡಿಸುವ ಉದ್ದೇಶದಿಂದ ರಾಜ್ಯಪಾಲರು ಮತ್ತು ಎಸ್ಐಟಿ ನಡುವಿನ ಸಂವಹನವನ್ನು ಅಕ್ರಮವಾಗಿ ಪಡೆದಿರುವುದು ಗೊತ್ತಾಗುತ್ತದೆ.

4. ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳು ತಾವು ಅಧಿಕಾರದಲ್ಲಿರುವ ಸಾರ್ವಜನಿಕ ಕಚೇರಿಯನ್ನು ದುರುಪಯೋಗ ಮಾಡಿಕೊಂಡು ಅಕ್ರಮವಾಗಿ ತನಿಖಾ ಸಾಮಗ್ರಿಗಳನ್ನು ಪಡೆದು, ತನಿಖಾಧಿಕಾರಿಗಳಿಗೇ ಬೆದರಿಸಲು ಅವಕಾಶವಾದರೆ ಕಾನೂನಿಗೆ ಹಾನಿಯಾಗುತ್ತದೆ.

5. ನೀವು ತುಂಬಾ ಎತ್ತರದಲ್ಲಿದ್ದೀರಿ ಎಂದು ಭಾವಿಸಿದರೆ ಕಾನೂನು ನಿಮಗಿಂತಲೂ ಮೇಲಿದೆ

6. ಸುದ್ದಿಗೋಷ್ಠಿಯಲ್ಲಿ ಅವರು ಪ್ರಸ್ತಾಪಿಸುವ ಪ್ರತಿಯೊಂದು ಸಂಗತಿಯೂ ತನಿಖಾ ದಾಖಲೆಗಳಲ್ಲಿದೆ. ಆರೋಪಿ ಕೇಂದ್ರ ಸಚಿವರಾಗಿ ಹುದ್ದೆ ದುರುಪಯೋಗಪಡಿಸಿಕೊಂಡು ತನಿಖಾಧಿಕಾರಿಗಳಿಂದ ದಾಖಲೆಗಳನ್ನು ಅಕ್ರಮವಾಗಿ ಪಡೆದಿದ್ದರೆ ಆ ಬಗ್ಗೆ ತನಿಖೆ ಮಾಡಬೇಕು.

7. ಅಮಾನತುಗೊಂಡಿರುವ ಪೊಲೀಸ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಅವರಿಂದ ನಾನು ಹಣ ವಸೂಲಿಗೆ ಯತ್ನಿಸಿದ್ದೇನೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಆದರೆ ಅಮಾನತಾದ ಆತ ಸಲ್ಲಿಸಿದ್ದ ದೂರನ್ನು ಕೋರ್ಟ್ ವಜಾಗೊಳಿಸಿದೆ ಎಂಬ ಸತ್ಯವನ್ನು ಉದ್ದೇಶಪೂರ್ವಕವಾಗಿ ಮತ್ತು ಅಪ್ರಾಮಾಣಿಕತೆಯಿಂದ ಮುಚ್ಚಿಟ್ಟಿದ್ದಾರೆ. ಕಿಶೋರ್ ಕುಮಾರ್ ವಿರುದ್ದ ದಾಖಲಾಗಿರುವ ಪ್ರಕರಣದಲ್ಲಿ ವರ್ತೂರಿನ ಪಿಎಸಿಎಲ್ ಜಮೀನುಗಳನ್ನು ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಅಕ್ರಮವಾಗಿ ಮಾರಾಟ ಮಾಡಿದ್ದರ ಬಗ್ಗೆ ಮತ್ತು ಹಲವಾರು ಭೂಕಬಳಿಕೆಗಳ ಬಗ್ಗೆ ಆರೋಪಗಳಿವೆ.

8. ರೌಡಿಶೀಟರ್ ನ್ಯಾಯಾಲಯದಲ್ಲಿ ನೀಡಿದ ದೂರಿನ ಆಧಾರದ ಮೇಲೆ ನನ್ನ ವಿರುದ್ಧ ಕುಮಾರಸ್ವಾಮಿ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ರೌಡಿಶೀಟರ್ ನೀಡಿದ ದೂರು ಕಾನೂನು ಪ್ರಕ್ರಿಯೆಯ ದುರುಪಯೋಗ ಎಂದು ಕೆಳಹಂತದ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದ್ದ ಮಾಹಿತಿಯನ್ನು ಆರೋಪಿ ಮರೆಮಾಚಿದ್ದಾರೆ. ಇದು ನನ್ನ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದ್ದಾಗಿದೆ.

9. ನನ್ನ ಪತ್ನಿಯ ಹೆಸರಿನಲ್ಲಿ ಬಹುಮಹಡಿ ಕಟ್ಟಡ ಕಟ್ಟುತ್ತಿದ್ದೇನೆ ಎಂದೂ ಆರೋಪಿಸಿದ್ದಾರೆ. ಅತ್ಯಂತ ಕೆಟ್ಟ ಕ್ರಿಮಿನಲ್ ಗಳು ಮತ್ತು ಪಾಪಿಗಳು ಕೂಡ ಮಹಿಳೆಯರು ಮತ್ತು ಮಕ್ಕಳನ್ನು ತಮ್ಮ ಹಗೆತನದಿಂದ ದೂರವಿಡುತ್ತಾರೆ. ಆದರೆ ಈ ಆರೋಪಿ ನನ್ನ ಪತ್ನಿಯ ಮೇಲೆ ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪ ಮಾಡಿದ್ದಾರೆ. ಇದು ಅವರ ಹತಾಶೆಯನ್ನು ತೋರಿಸುತ್ತದೆ. ನನ್ನ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಈ ಆರೋಪ ಮಾಡಲಾಗಿದೆ.

10. ಅವರು ಆರೋಪಿಯಾಗಿರುವ ಪ್ರಕರಣಗಳ ತನಿಖೆಯಲ್ಲಿ ನನ್ನನ್ನು ತಡೆಯಲು ಸುಳ್ಳು ಮತ್ತು ಹಿಟ್ ಅಂಡ್ ರನ್ ಆರೋಪಗಳನ್ನು ಮಾಡಿದ್ದಾರೆ ಮತ್ತು ಬೆದರಿಕೆ ಹಾಕಿದ್ದಾರೆ.

11. ಕುಮಾರಸ್ವಾಮಿ ಕೇಂದ್ರ ಗೃಹ ಸಚಿವರಿಗೆ ಬರೆದ ಪತ್ರದ ಪ್ರತಿಯನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಕೊಂಡಿದ್ದೇನೆ. ಈ ಪತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗಿದೆ. ಅವರು ನನ್ನ ವಿರುದ್ಧ ಕ್ರಮಕ್ಕೆ ಕೋರಿದ್ದಾರೆ. ಆದರೆ ಎಸ್ಐಟಿ ತನಿಖೆಯಲ್ಲಿರುವ ಪ್ರಕರಣಗಳಲ್ಲಿ ತಾವು ಆರೋಪಿಯಾಗಿರುವ ಅಂಶ ಮುಚ್ಚಿದ್ದಾರೆ. ಒಬ್ಬ ಕೇಂದ್ರ ಸಚಿವ ಕೇಂದ್ರದ ಮತ್ತೊಬ್ಬ ಸಚಿವರಿಗೆ ಬರೆದ ಈ ಪತ್ರವನ್ನು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಲಾಗಿದೆ. ಈ ಮೂಲಕ ನನ್ನನ್ನು ಬೆದರಿಸುವುದು ಮತ್ತು ಈ ಪ್ರಕರಣದ ತನಿಖೆಯನ್ನು ಮುಂದುವರಿಸದಂತೆ ತಡೆಯುವುದು ಅದರ ಉದ್ದೇಶ.

12. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಂದೆಯ ಆದೇಶದಂತೆ ನನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ.

13. ಕುಮಾರಸ್ವಾಮಿ ಆಪ್ತ ಸುರೇಶ್ ಬಾಬು ನನ್ನ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತಪ್ಪು ಮಾಹಿತಿ ನೀಡಿದ್ದಲ್ಲದೆ, ನನ್ನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಬೆದರಿಸುವ ಉದ್ದೇಶದಿಂದ ತಕ್ಷಣ ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದಾರೆ. ಕುಮಾರಸ್ವಾಮಿ ಬೆಂಬಲಿಗರು ನನ್ನ ಅಮಾನತಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

14. ಕುಮಾರಸ್ವಾಮಿಯವರು ತಮ್ಮ ರೂಢಿಯಂತೆ ಕೆಟ್ಟದಾಗಿ ಬೆದರಿಸುವಂಥ ಆರೋಪಗಳನ್ನು ಮಾಡಿದಾಗ, ನಮ್ಮ ತಂಡಕ್ಕೆ ಎರಡೇ ಆಯ್ಕೆಗಳಿದ್ದವು. ಒಂದು, ಶರಣಾಗುವುದು. ಇಲ್ಲವೆ ನಮ್ಮನ್ನು, ನಮ್ಮ ಕುಟುಂಬಗಳನ್ನು ಅವಮಾನಿಸದೆ ಶಾಂತಿಯಿಂದ ಬದುಕಲು ಬಿಡಿ ಎಂದು ಕೇಳುವುದು. ಯಾಕೆಂದರೆ ಆರೋಪಿ ​ಪ್ರಭಾವೀ ರಾಜಕಾರಣಿ, ಕೇಂದ್ರ ಸಚಿವ. ಆದರೆ ನಾವು ಎದುರಿಸಿ ನಿಲ್ಲುವ ದಾರಿಯನ್ನೇ ಆಯ್ಕೆ ಮಾಡಿಕೊಂಡೆವು. ​ಯತೋ ಧರ್ಮಸ್ತತೋ ಜಯಃ, ಧರ್ಮ ಇದ್ದಲ್ಲಿ ಜಯ ಇರುತ್ತದೆ.

15. ಆರೋಪಿ ಪ್ರಭಾವಿ ರಾಜಕಾರಣಿ ಮತ್ತು ಕೇಂದ್ರ ಸಚಿವರಾಗಿರುವ ಕಾರಣ ತನಿಖಾಧಿಕಾರಿಗಳನ್ನು ಬೆದರಿಸಲು, ತನಿಖೆಯನ್ನು ಹಾಳುಮಾಡಲು ಬಿಡಬೇಕೆ?. ನಾನು ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್ ಅವರ ಮಾತನ್ನು ಉಲ್ಲೇಖಿಸುತ್ತೇನೆ. ಅನ್ಯಾಯ ಎಲ್ಲೇ ಇದ್ದರೂ ಅದು ನ್ಯಾಯಕ್ಕೆ ಎಲ್ಲೆಡೆಯೂ ಬೆದರಿಕೆ. ಅದನ್ನು ತಡೆಯದೇ ಇದ್ದರೆ ಈ ಲಜ್ಜೆಗೆಟ್ಟ ವರ್ತನೆ ಮತ್ತು ತಂತ್ರಗಳನ್ನು ಬೇರೆ ಆರೋಪಿಗಳೂ ಅನುಸರಿಸಬಹುದಾದ ಅಪಾಯವಿದೆ. ಹಾಗಾಗಿ ತನಿಖೆಗೆ ಅಡ್ಡಿಪಡಿಸುವ ಆರೋಪಿಗಳ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು.

ಸಂಡೂರು ಗಣಿ ಹಗರಣದಲ್ಲಿ ಲೋಕಾಯುಕ್ತದೆದುರು ಹಾಜರಾಗಿ ವಿಚಾರಣೆ ಎದುರಿಸಿದ ಬೆನ್ನಿಗೇ ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ಮಾಡಿ ಲೋಕಾಯುಕ್ತ ಎಸ್ ಐ ಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಅವರು ಭ್ರಷ್ಟ, ಬ್ಲ್ಯಾಕ್ ಮೇಲರ್ ಎಂದೆಲ್ಲ ಆರೋಪಿಸಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಚಂದ್ರಶೇಖರ್ ನಾವು ಇದರಿಂದ ವಿಚಲಿತರಾಗುವುದಿಲ್ಲ, ಆರೋಪಿ ಯಾವುದೇ ಸ್ಥಾನದಲ್ಲಿದ್ದರೂ ಆತ ಆರೋಪಿಯೇ ಎಂದು ಹೇಳಿದ್ದರು. ​ಈ ಹೇಳಿಕೆ ಕೊಡುವಾಗ ಚಂದ್ರಶೇಖರ್ ಅವರು ಬರ್ನಾಡ್ ಶಾ ರ ಹಂದಿಯ ಜೊತೆ ಕಚ್ಚಾಡಬೇಡಿ ಎಂಬ ಮಾತನ್ನೂ ಉಲ್ಲೇಖಿಸಿದ್ದರು. ಅದಕ್ಕೆ ಮತ್ತೆ ತಿರುಗೇಟು ನೀಡಿದ್ದ ​ಕುಮಾರಸ್ವಾಮಿ ಆತ ಕ್ರಿಮಿನಲ್​, ಬ್ಲ್ಯಾಕ್ ಮೇಲರ್ ಎಂದೇ ಚಂದ್ರಶೇಖರ್ ವಿರುದ್ಧ ಹರಿಹಾಯ್ದಿದ್ದರು. ಈಗ ಎಡಿಜಿಪಿ ಚಂದ್ರಶೇಖರ್ ಅವರು ಕುಮಾರಸ್ವಾಮಿ ವಿರುದ್ಧವೇ ಪೊಲೀಸ್ ದೂರು ದಾಖಲಿಸಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಕೇಂದ್ರ ಸಚಿವರ ವಿರುದ್ಧವೇ ಹಿರಿಯ ಪೊಲೀಸ್ ಅಧಿಕಾರಿ ಕಾನೂನು ಸಮರಕ್ಕೆ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಲಿದೆ.

ಬೀದಿಯಲ್ಲಿ ನಿಂತು ಜಗಳಕ್ಕೆ ಕರೆಯುವ ರೀತಿಯಲ್ಲಿ ಈ ರಾಜ್ಯದ ​ಹಿರಿಯ ನಾಯಕನೊಬ್ಬ ನಡೆದುಕೊಳ್ಳುತ್ತಿರುವ ರೀತಿ ನಿಜಕ್ಕೂ ಕಳವಳಕಾರಿಯಾಗಿದೆ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X