ಆದಿತ್ಯ ಎಲ್-1 ಯಶಸ್ವಿ: ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ಸೂರ್ಯನ ಅಧ್ಯಯನ ನಡೆಸುವ ಮಹತ್ವಾಕಾಂಕ್ಷೆಯ ಆದಿತ್ಯ ಎಲ್-1 ಯಶಸ್ವಿಯಾಗಿ ತನ್ನ ಕಕ್ಷೆ ಸೇರಿದ್ದು, ಈ ಮೂಲಕ ಇಸ್ರೋ ವಿಜ್ಞಾನಿಗಳು ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಭಾರತದ ಹಿರಿಮೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದೀರ್ಘಕಾಲದ ಅಧ್ಯಯನ, ಪರಿಶ್ರಮ, ಸಂಕಲ್ಪದ ಮೂಲಕ ಅಸಾಧಾರಣವನ್ನು ಸಾಧಿಸಿದ ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದು ಇಸ್ರೋ ಸಾಧನೆಗೆ ಮಚ್ಚುಗೆ ವ್ಯಕ್ತಪಡಿಸಿದರು.
Next Story





