Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು ನಗರದಲ್ಲಿ ನಾಯಿಕೊಡೆಯಂತೆ...

ಬೆಂಗಳೂರು ನಗರದಲ್ಲಿ ನಾಯಿಕೊಡೆಯಂತೆ ಎದ್ದೇಳುತ್ತಿರುವ ಜಾಹೀರಾತು: ಹೈಕೋರ್ಟ್ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ20 Sept 2023 8:38 PM IST
share
ಬೆಂಗಳೂರು ನಗರದಲ್ಲಿ ನಾಯಿಕೊಡೆಯಂತೆ ಎದ್ದೇಳುತ್ತಿರುವ ಜಾಹೀರಾತು: ಹೈಕೋರ್ಟ್ ಅಸಮಾಧಾನ

ಬೆಂಗಳೂರು, ಸೆ. 20: ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿಕೊಡೆಗಳಂತೆ ಅನಧಿಕೃತ ಚುನಾವಣಾ ಹೋರ್ಡಿಂಗ್‌ ಗಳು ತಲೆ ಎತ್ತುತ್ತಿರುವುದರಿಂದ ಸಾರ್ವಜನಿಕರು, ಅದರಲ್ಲೂ ಮುಖ್ಯವಾಗಿ ನಗರದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ನಗರದಲ್ಲಿನ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಯಲು ರಾಜ್ಯ ಸರಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಮಾಯಿಗೇಗೌಡ ಮತ್ತಿತರರು ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ಮೆಮೋ ಸಲ್ಲಿಸಿ, 2023ರ ಆ.30ರಿಂದ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆಗಳ ಕುರಿತು 701 ಪ್ರಕರಣಗಳನ್ನು ದಾಖಲಿಸಲಾಗಿದೆ. 2022ರಲ್ಲಿ 76, 2021ರಲ್ಲಿ 19, 2020ರಲ್ಲಿ 120 ಪ್ರಕರಣಗಳು ದಾಖಲಾಗಿವೆ. ಒಟ್ಟಾರೆ ಪ್ರಕರಣಗಳ ಪೈಕಿ 164 ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ. 17 ಪ್ರಕರಣಗಳು ಇತ್ಯರ್ಥಗೊಂಡಿದ್ದು, 132 ಪ್ರಕರಣಗಳು ವಿಲೇವಾರಿಗೆ ಬಾಕಿಯಿವೆ. 2023ರ ಆಗಸ್ಟ್ ತಿಂಗಳ ಒಂದರಲ್ಲೇ 327 ಪ್ರಕರಣಗಳು ದಾಖಲಾಗಿವೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ರಾಜ್ಯ ಸರಕಾರ ವರದಿ ಸಲ್ಲಿಸಿ, ಕರ್ನಾಟಕ ಮುಕ್ತ ಪ್ರದೇಶದ ವಿರೂಪ ತಡೆ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿ, ನಗರದ ಎಲ್ಲ ವಲಯಗಳ ಉಪ ಪೆÇಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು, ಠಾಣೆಗಳ ಇನ್ಸ್ ಪೆಕ್ಟರ್ ಗಳಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು 2023ರ ಆ. 23ರಂದು ನಿರ್ದೇಶಿಸಿದ್ದಾರೆ.

ಗಸ್ತು ಮಾಡುವ ವೇಳೆ ಅನಧಿಕೃತ ಜಾಹೀರಾತು ಅಳವಡಿಸುತ್ತಿರುವುದು ಕಂಡುಬಂದಲ್ಲಿ, ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಎಲ್ಲ ಸ್ಥಳಗಳನ್ನು ಪರಿಶೀಲಿಸಿ, ಹೆಚ್ಚಿನ ಪ್ರಕರಣ ದಾಖಲಿಸಬೇಕು. ಅದಕ್ಕಾಗಿ ಬಿಬಿಎಂಪಿ ಅಧಿಕಾರಿಗಳ ನೆರವು ಪಡೆದು ಕ್ರಮ ಜರುಗಿಸಬೇಕು. ಆದಾಗ್ಯೂ ಮುಂದಿನ ದಿನಗಳಲ್ಲಿ ಅನಧಿಕೃತ ಜಾಹೀರಾತು ಫಲಕಗಳು ಅಳವಡಿಸಿರುವುದು ಕಂಡುಬಂದರೆ ಸಂಬಂಧಪಟ್ಟ ಪೆÇಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಿ, ಮುಂದಿನ ಇಲಾಖಾ ಶಿಸ್ತು ಕ್ರಮಕ್ಕೆ ನಗರ ಪೆÇಲೀಸ್ ಆಯುಕ್ತರ ಕಚೇರಿಗೆ ವರದಿ ಕಳುಹಿಸಿಕೊಡುವಂತೆ ಎಲ್ಲ ಸಹಾಯಕ ಪೆÇಲೀಸ್ ಆಯುಕ್ತರಿಗೆ ನಿರ್ದೇಶಿಸಲಾಗಿದೆ ಎಂದು ವಿವರಿಸಿದೆ.

ಈ ಅಂಶಗಳನ್ನು ದಾಖಲಿಸಿಕೊಂಡ ನ್ಯಾಯಪೀಠ, ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆ ಹೆಚ್ಚುತ್ತಿದೆ. ಈ ಬೆಳವಣಿಗೆಯು ಪಾಲಿಕೆಯ ಅಧಿಕಾರಿಗಳು ತಮ್ಮ ಕರ್ತವ್ಯಗಳಲ್ಲಿ ಸೂಕ್ತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಹಾಗೂ ಸಂಪೂರ್ಣ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡುವಂತೆ ಮಾಡಿರುವುದಾಗಿ ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಅವರ ವಾದವು ನ್ಯಾಯ ಸಮ್ಮತವಾಗಿದ್ದು, ಜಾಹೀರಾತು ಹಾವಳಿಯಿಂದ ಸಾರ್ವಜನಿಕರು ಮತ್ತು ನಿರ್ದಿಷ್ಟವಾಗಿ ಬೆಂಗಳೂರು ನಗರದ ನಾಗರಿಕರು ಬಳಲುತ್ತಿದ್ದಾರೆ ಎಂದು ನ್ಯಾಯಪೀಠ ಬಿಬಿಎಂಪಿ ಅಧಿಕಾರಿಗಳ ಕಾರ್ಯವೈಖರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೆ, ನಗರದಲ್ಲಿ ಅನಧಿಕೃತ ಚುನಾವಣಾ ಹೋಡಿರ್ಂಗ್, ಫ್ಲೆಕ್ಸ್ ಮತ್ತು ಬ್ಯಾನರ್‍ಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿವೆ. ಇದು ಸುಗಮ ಸಂಚಾರಕ್ಕೆ ಗಂಭೀರ ಅಡಚಣೆ ಉಂಟುಮಾಡುವುದು ಮಾತ್ರವಲ್ಲದೆ, ಬಹಳಷ್ಟು ಅನಾನುಕೂಲತೆ ಸೃಷ್ಟಿಸುತ್ತಿವೆ.

ಈ ಪರಿಸ್ಥಿತಿ ತಡೆಯುವ ನಿಟ್ಟಿನಲ್ಲಿ ಬಿಬಿಎಂಪಿ ಕಾರ್ಯೋನ್ಮುಖವಾಗಬೇಕು. ಆ ಕುರಿತು ಬಿಬಿಎಂಪಿ ಸಮಗ್ರವಾದ ವರದಿಯನ್ನು ಮುಂದಿನ ಮೂರು ವಾರದಲ್ಲಿ ಸಲ್ಲಿಸಬೇಕು ಎಂದು ಸೂಚಿಸಿತು. ಅಲ್ಲದೆ, ನ್ಯಾಯಾಲಯವು ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಬಿಬಿಎಂಪಿ ಗಂಭೀರವಾಗಿ ಪರಿಗಣಿಸಲಿದೆ ಎಂಬುದಾಗಿ ನ್ಯಾಯಪೀಠ ಇದೇ ವೇಳೆ ನಂಬಿಕೆ ಹಾಗೂ ವಿಶ್ವಾಸ ವ್ಯಕ್ತಪಡಿಸಿ ವಿಚಾರಣೆಯನ್ನು ಅ.11ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X