Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಆರ್ಚ್‌ ಬಿಷಪ್ ಡಾ.ಪೀಟರ್ ಮಚಾದೊ ನೇತೃತ್ವದ ನಿಯೋಗ

ಮತಾಂತರ ನಿಷೇಧ ಮಸೂದೆ ರದ್ದತಿ, ವಿಧಾನ ಪರಿಷತ್ತಿಗೆ ಪ್ರತಿನಿಧಿ ನೇಮಕ, ಕ್ರೈಸ್ತ ಸಮುದಾಯಕ್ಕೆ ಶೇ.1 ಮೀಸಲಾತಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ14 Sept 2026 9:13 PM IST
share
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಆರ್ಚ್‌ ಬಿಷಪ್ ಡಾ.ಪೀಟರ್ ಮಚಾದೊ ನೇತೃತ್ವದ ನಿಯೋಗ

ಬೆಂಗಳೂರು : ಕರ್ನಾಟಕದ ಕ್ರೈಸ್ತ ಸಮುದಾಯದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಲು ಬೆಂಗಳೂರಿನ ಆರ್ಚ್‌ ಬಿಷಪ್ ಡಾ.ಪೀಟರ್ ಮಚಾದೊ ನೇತೃತ್ವದ ನಿಯೋಗವು ಎಐಸಿಸಿ (AICC) ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಮವಾರ ಅವರ ನಿವಾಸದಲ್ಲಿ ಭೇಟಿ ಮಾಡಿತು. ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯದ ಕ್ರೈಸ್ತ ಸಮುದಾಯದ ಮೇಲೆ ಪರಿಣಾಮ ಬೀರುತ್ತಿರುವ ಹಲವು ಪ್ರಮುಖ ಹಾಗೂ ದೀರ್ಘಕಾಲದ ಸಮಸ್ಯೆಗಳನ್ನು ನಿಯೋಗವು ಖರ್ಗೆ ಅವರ ಗಮನಕ್ಕೆ ತಂದಿತು.

ಸಾಮಾನ್ಯವಾಗಿ ‘ಮತಾಂತರ ನಿಷೇಧ ಮಸೂದೆ’ ಎಂದು ಕರೆಯಲಾಗುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ, 2021’ ಅನ್ನು ರದ್ದುಗೊಳಿಸಬೇಕು ಎಂದು ನಿಯೋಗ ಒತ್ತಾಯಿಸಿತು. ಮಸೂದೆಯ ನಿಬಂಧನೆಗಳು ಕ್ರೈಸ್ತ ಸಮುದಾಯದ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ನಿಯೋಗ, ಸಾಂವಿಧಾನಿಕ ಸ್ವಾತಂತ್ರ್ಯಗಳ ಚಲಾವಣೆ ಹಾಗೂ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕಿನ ಬಗ್ಗೆಯೂ ಆತಂಕ ವ್ಯಕ್ತಪಡಿಸಿತು.

ಕರ್ನಾಟಕ ವಿಧಾನ ಪರಿಷತ್ತಿಗೆ (MLC) ಸೂಕ್ತ ಕ್ರೈಸ್ತ ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡುವಂತೆಯೂ ನಿಯೋಗ ಕೋರಿತು. ಇದರಿಂದ ಸಮುದಾಯದ ಸಮಸ್ಯೆಗಳನ್ನು ವ್ಯಕ್ತಪಡಿಸಲು ಮತ್ತು ಶಾಸನೀಯ ಪ್ರಕ್ರಿಯೆಯಲ್ಲಿ ರಚನಾತ್ಮಕವಾಗಿ ಕೊಡುಗೆ ನೀಡಲು ಸೂಕ್ತ ವೇದಿಕೆ ದೊರೆಯಲಿದೆ ಎಂದು ತಿಳಿಸಿತು.

ಹಿಂದುಳಿದ ವರ್ಗಗಳ ವರ್ಗೀಕರಣದ ಅಡಿಯಲ್ಲಿ ಕ್ರೈಸ್ತ ಸಮುದಾಯಕ್ಕೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡಬೇಕು ಎಂಬ ಬೇಡಿಕೆಯನ್ನೂ ನಿಯೋಗ ಮುಂದಿಟ್ಟಿತು. ಸಮುದಾಯದ ಕೆಲವು ವರ್ಗಗಳು ಎದುರಿಸುತ್ತಿರುವ ಸಾಮಾಜಿಕ–ಆರ್ಥಿಕ ಸವಾಲುಗಳನ್ನು ವಿವರಿಸಿದ ನಿಯೋಗ, ಶಿಕ್ಷಣ, ಉದ್ಯೋಗ ಹಾಗೂ ಅಭಿವೃದ್ಧಿಯ ಇತರ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶಗಳನ್ನು ಖಚಿತಪಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತು.

ವಿವಿಧ ಸರ್ಕಾರಿ ಮಂಡಳಿಗಳು, ನಿಗಮಗಳು ಹಾಗೂ ಇತರ ಶಾಸನಬದ್ಧ ಮತ್ತು ನಾಮನಿರ್ದೇಶಿತ ಸಂಸ್ಥೆಗಳಲ್ಲಿ ಕ್ರೈಸ್ತ ಸಮುದಾಯದ ಸದಸ್ಯರಿಗೆ ಸಮರ್ಪಕ ಮತ್ತು ಅರ್ಥಪೂರ್ಣ ಪ್ರಾತಿನಿಧ್ಯ ನೀಡಬೇಕು ಎಂದೂ ನಿಯೋಗ ಮನವಿ ಮಾಡಿತು. ಇಂತಹ ಸಂಸ್ಥೆಗಳಲ್ಲಿ ನ್ಯಾಯಯುತ ಪ್ರಾತಿನಿಧ್ಯ ದೊರೆತರೆ ಸಾರ್ವಜನಿಕ ಆಡಳಿತದಲ್ಲಿ ಸಮುದಾಯದ ಸದಸ್ಯರು ಪರಿಣಾಮಕಾರಿಯಾಗಿ ಭಾಗವಹಿಸಲು ಮತ್ತು ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಧ್ಯವಾಗಲಿದೆ ಎಂದು ಹೇಳಿತು.

ನಿಯೋಗದ ಮನವಿಗಳನ್ನು ಖರ್ಗೆ ಅವರು ಆಲಿಸಿದರು. ನಿಯೋಗದ ಪ್ರತಿನಿಧಿಗಳೊಂದಿಗೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು. ಕ್ರೈಸ್ತ ಸಮುದಾಯದ ಸಮಸ್ಯೆಗಳನ್ನು ಪರಿಹರಿಸುವುದಾಗಿ ಅವರು ಭರವಸೆ ನೀಡಿದರು.

ಚರ್ಚಿಸಿದ ವಿಷಯಗಳನ್ನು ರಾಜ್ಯ ಸರ್ಕಾರದ ಸಂಬಂಧಪಟ್ಟ ನಾಯಕರ ಗಮನಕ್ಕೆ ತರುವುದಾಗಿ ಖರ್ಗೆ ಅವರು ನಿಯೋಗಕ್ಕೆ ಭರವಸೆ ನೀಡಿದರು. ಈ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸುವುದಾಗಿಯೂ ಅವರು ತಿಳಿಸಿದರು.

ನಿಯೋಗದಲ್ಲಿ ಬೆಂಗಳೂರಿನ ಆರ್ಚ್‌ ಬಿಷಪ್ ಡಾ.ಪೀಟರ್ ಮಚಾದೊ, ಮಂಗಳೂರಿನ ಬಿಷಪ್ ಡಾ.ಪೀಟರ್ ಪಾಲ್, ಮೈಸೂರಿನ ಬಿಷಪ್ ಡಾ.ಫ್ರಾನ್ಸಿಸ್ ಸೆರಾವೊ, ‘ಆಶೀರ್ವಾದ್’ನ ನಿರ್ದೇಶಕ ಫಾ. ಅರುಣ್ ಲೂಯಿಸ್ ಎಸ್.ಜೆ., ಪ್ರವೀಣ್ ಪೀಟರ್, ಆಂಥೋನಿ ವಿಕ್ರಮ್ ಹಾಗೂ ಬೆಂಗಳೂರು ಆರ್ಚ್‌ಡಯಸೀಸ್‌ ನ PRO ಮತ್ತು ವಕ್ತಾರ ಜೆ. ಎ. ಕಾಂತ್‌ರಾಜ್ ಇದ್ದರು.








Tags

Mallikarjun Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X