ಅಜಿತ್ ರೈ ಲೋಕಾಯುಕ್ತ ಕಸ್ಟಡಿ ಅವಧಿ ಮುಕ್ತಾಯ: ಹೆಚ್ಚಿನ ತನಿಖೆಗಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ವಿಶೇಷ ನ್ಯಾಯಾಲಯ

ಅಜಿತ್ ರೈ
ಬೆಂಗಳೂರು: ಲೋಕಾಯುಕ್ತ ಕಸ್ಟಡಿ ಅವಧಿ ಗುರುವಾರ ಮುಕ್ತಾಯವಾದ ಹಿನ್ನೆಲೆ ಹೆಚ್ಚಿನ ತನಿಖೆಗಾಗಿ ಕೆಆರ್ ಪುರ ತಹಶಿಲ್ದಾರ್ ಅಜಿತ್ ರೈ ರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಆದಾಯಕ್ಕೂ ಮೀರಿದ ಆಸ್ತಿಗಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 6ರವರೆಗೂ ಅಜಿತ್ ರೈ ರನ್ನು ಲೋಕಾಯುಕ್ತದ ವಶಕ್ಕೆ ನೀಡುವುದಾಗಿ ನಗರದ 78 ನೇ ಸಿಸಿಎಚ್ ನ್ಯಾಯಾಲಯ ಜೂನ್ 30 ರಂದು ಆದೇಶಿಸಿತ್ತು. ಈ 7 ದಿನಗಳ ಕಾಲ ನೀಡಿದ ಕಸ್ಟಡಿ ಅವಧಿ ಮುಕ್ತಾಯಗೊಂಡಿರುವುದರಿಂದ ಅಜಿತ್ ರನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಲೋಕಾಯುಕ್ತ ಅಧಿಕಾರಿಗಳು ಪುನಃ ಕಸಡಿಗೆ ನೀಡುವಂತೆ ಮನವಿ ಮಾಡಿದರು. ಈ ವೇಳೆ ಅಜಿತ್ ರೈ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ವಾದ ಗಳನ್ನು ಆಲಿಸಿದ ವಿಶೇಷ ನ್ಯಾಯಾಲಯ ಅಜಿತ್ ರೈ ರನ್ನು ನ್ಯಾಯಾಂಗ ಬಂಧನದಲ್ಲಿರಿಸಲು ಅದೇಶಿಸಿ ಜುಲೈ 11ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.
Next Story





