Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಟಿ ರವಿ ಪ್ರಕರಣದಲ್ಲಿ ಒಗ್ಗಟ್ಟಾದ...

ಸಿಟಿ ರವಿ ಪ್ರಕರಣದಲ್ಲಿ ಒಗ್ಗಟ್ಟಾದ ಬಿಜೆಪಿಯ ಎಲ್ಲರೂ ಹಾಳು ಬುದ್ದಿಯವರು: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ21 Dec 2024 2:39 PM IST
share
ಸಿಟಿ ರವಿ ಪ್ರಕರಣದಲ್ಲಿ ಒಗ್ಗಟ್ಟಾದ ಬಿಜೆಪಿಯ ಎಲ್ಲರೂ ಹಾಳು ಬುದ್ದಿಯವರು: ಪ್ರಿಯಾಂಕ್ ಖರ್ಗೆ

ಕಲಬುರಗಿ: ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಹೈಕೋರ್ಟ್ ಬಿಡುಗಡೆಗೊಳಿಸಿರುವ ಬಗ್ಗೆ ಬಿಜೆಪಿಯವರು ಸತ್ಯಕ್ಕೆ ಜಯ, ಕಾಂಗ್ರೆಸ್ ಗೆ ಮುಖಭಂಗ ಅಂತೆಲ್ಲ ಹೇಳುತ್ತಿದ್ದಾರೆ. ಮುಖಭಂಗ ಯಾಕಾಗುತ್ತದೆ? ಎಫ್ ಎಸ್ ಎಲ್ ವರದಿ ಬರಲಿ ಆಮೇಲೆ ನೋಡೋಣ. ಕಾನೂನು ಕೇವಲ ಬಿಜೆಪಿಯವರಿಗೆ ಮಾತ್ರ ಗೊತ್ತಿರುವುದಲ್ಲ ನಮಗೂ ಗೊತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರಗಿ ಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು.

ಪರಿಷತ್ ನಲ್ಲಿ ಒಬ್ಬ ಮಹಿಳೆಗೆ ಅವಮಾನಕರವಾಗಿ ಮಾತನಾಡಿದ್ದಾರೆ. ಅವರ ಬೆನ್ನಿಗೆ ಹಲವಾರು ಶಾಸಕರು ನಿಂತಿದ್ದಾರೆ. ಹಾಗೆ ಮಾತನಾಡಿದ್ದು ತಪ್ಪು ಅಂತ ಕೂಡಾ ಹೇಳುತ್ತಿಲ್ಲ ಅಂದರೆ‌ ಎಷ್ಟು ದುರಹಂಕಾರ ಇರಬೇಕು. ಬಿಜೆಪಿಯ ಯಾರಾದರೂ ಒಬ್ಬರು ಖಂಡಿಸಿದ್ದಾರೆಯೇ? ಈ ಪ್ರಕರಣದಿಂದ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎನ್ನುತ್ತಾರೆ. ಅಂದರೆ ಎಲ್ಲರೂ ಹಾಳು ಬುದ್ದಿಯವರೇ, ಒಬ್ಬರೂ ಖಂಡಿಸಿಲ್ಲ ಎಂದರೆ ಎಲ್ಲರೂ ದುಶ್ಯಾಸನರು ಅಲ್ವಾ ? ಜನರ ಮನೆ ಬೆಳಗುವ ಒಂದಾದರೂ ಕೆಲಸ ಅವರು ಮಾಡಿದ್ದಾರೆಯೇ? ಬರೀ‌ ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿ‌ ಅಧ್ಯಕ್ಷ ವಿಜಯೇಂದ್ರ ಕೂಡಾ ಘಟನೆ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಒಂದು ವೇಳೆ ರವಿ ಹಾಗೇ ಹೇಳಿದ್ದರೇ, ಕ್ರಮ ಕೈಗೊಳ್ಳುತ್ತೇವೆ ಎನ್ನಲಿಲ್ಲ. ಬದಲಿಗೆ ಬಿಜೆಪಿಯವರು ಬಳೆ ತೊಟ್ಟಿಲ್ಲ ಎಂದಿದ್ದಾರೆ. ಬಳೆ ತೊಟ್ಟವರಿಗೆ ಬಿಜೆಪಿಯವರು ಅವಮಾನ ಮಾಡಿದ್ದಾರಲ್ಲ ? ಅದಕ್ಕೆ ವಿಜಯೇಂದ್ರ ಏನು ಹೇಳುತ್ತಾರೆ. ಪೂಜ್ಯ ಅಪ್ಪಾಜಿಯವರ ಮೇಲೆಯೇ ಪೋಕ್ಸೋ ಅಡಿಯಲ್ಲಿ ಕೇಸು ದಾಖಲಾಗಿರುವಾಗ ಅವರು ಏನು ಹೇಳುತ್ತಾರೆ? ಮುನಿರತ್ನ ವಿಚಾರದಲ್ಲಿ ಒಂದು‌ ನೋಟಿಸು ಕೂಡಾ ನೀಡಲಿಲ್ಲವಲ್ಲ ಎಂದು ವ್ಯಂಗ್ಯವಾಡಿದರು.

ರಾತ್ರಿ‌ಯಿಡೀ ರವಿ ಅವರನ್ನು ಸುತ್ತಿಸಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆರೋಪಿ ಅರೆಸ್ಟ್ ಆಗಿದ್ದಾನೆ. ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ನಾಯಕರಿಗೇನು ಕೆಲಸ? ಅವರು ಅಲ್ಲೇಕೆ ಹೋಗಿದ್ದಾರೆ? ಆರೋಪಿ ಅರೆಸ್ಟ್ ಆದ ಕೂಡಲೇ ಅವರ ಬಾಡಿ ಸರ್ಚ್ ಮಾಡುವುದು ಒಂದು ಪ್ರಕ್ರಿಯೆ ಅದರ ಪ್ರಕಾರ ಪೊಲೀಸರು ಮಾಡಿದ್ದಾರೆ ಎಂದರು.

ಲಕ್ಷ್ಮೀ ಹೆಬ್ಬಾಳಕರ್ ಕ್ಷೇತ್ರದಲ್ಲಿ ಅವಮಾನ ಮಾಡಿದ್ದಕ್ಕೆ ರವಿಯನ್ನು ಹಾಗೆ ಬಿಟ್ಟಿದ್ದಾರಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಹೇಳಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ಡಿಸಿಎಂ ಹಾಗೇ ಹೇಳೇ ಇಲ್ಲ. ಕಾನೂನು ಕೈಗೆತ್ತಿಕೊಳ್ಳಲು ಡಿಸಿಎಂ ಹೇಳುತ್ತಾರೆಯೇ? ಸಿ.ಟಿ. ರವಿ ಹರಕಲು ಬಾಯಿಯವರು. ಇಂತವರಿಗೆ ಸದನದಲ್ಲಿ ಅವಕಾಶ ಕೊಡಬಾರದು ಎಂದಿದ್ದಾರೆ ಅಷ್ಟೇ ಎಂದರು.

ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎನ್ನುವ ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ ಸಚಿವರು,' ನಾವು ಅಧಿಕಾರಕ್ಕೆ ಬಂದ ಮೇಲೆ ಯಾರ ಆಸ್ತಿ ಪಾಸ್ತಿಗೆ ಏನಾದರೂ ಮಾಡಿ ತೊಂದರೆ ಕೊಟ್ಟಿದ್ದೇವಾ? ಸುಳ್ಳನ್ನು ಸತ್ಯ ಹೇಗೆ ಮಾಡಬೇಕು ಎನ್ನುವುದು ಅವರಿಗೆ ತಿಳಿದಿದೆ. ಅದು ಅವರ ರಾಜಕಾರಣ. ನಮ್ಮದು ಪ್ರಗತಿಪರ ರಾಜಕಾರಣ' ಎಂದರು.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಗೃಹ‌ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ದೇವರ ಹೆಸರು ಸಾವಿರ ಬಾರಿ ಜಪಿಸಿದರೆ ಏಳು ಜನ್ಮದಲ್ಲಿಯೂ ಸ್ವರ್ಗ ಪ್ರಾಪ್ತಿಯಾಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಅಂಬೇಡ್ಕರ್ ಅವರ ಹೆಸರು‌ ಹೇಳಿದರೆ ಈ ಜನ್ಮದಲ್ಲಿಯೇ ಸ್ವಾಭಿಮಾನದ ಬದುಕು ಸಿಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X