Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲಿ ಭೂಮಿ...

ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲಿ ಭೂಮಿ ಇದೆ: ಎಂ ಬಿ ಪಾಟೀಲ

ಆಂಧ್ರದ ಆಮಿಷಕ್ಕೆ ಸಚಿವರ ಪ್ರತ್ಯುತ್ತರ

ವಾರ್ತಾಭಾರತಿವಾರ್ತಾಭಾರತಿ17 July 2025 11:46 AM IST
share
ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲಿ ಭೂಮಿ ಇದೆ: ಎಂ ಬಿ ಪಾಟೀಲ

ಬೆಂಗಳೂರು: ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ ಯಾವ ಉದ್ಯಮಿಯೂ ಇಲ್ಲಿಂದ ಅಲ್ಲಿಗೆ ಹೋಗಿಬಿಡುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ರಾಜ್ಯವು ವೈಮಾಂತರಿಕ್ಷ ವಲಯದಲ್ಲಿ ದೇಶದ ಶೇ.65ರಷ್ಟು ಪಾಲು ಹೊಂದಿದೆ. ಜಾಗತಿಕ ಮಟ್ಟದಲ್ಲಿ ನಮ್ಮದು ಮೂರನೇ ಅತ್ಯುತ್ತಮ ಕಾರ್ಯ ಪರಿಸರವಾಗಿದೆ. ಉದ್ಯಮಗಳಿಗೆ ಭೂಮಿ ಕೊಟ್ಟಮಾತ್ರಕ್ಕೆ ಅವರು ಅಲ್ಲಿಗೆ ಹೋಗುವುದಿಲ್ಲ. ಕಾರ್ಯ ಪರಿಸರ ಕೂಡ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅವರು ತಿರುಗೇಟು ಕೊಟ್ಟಿದ್ದಾರೆ.

ನಾರಾ ಲೋಕೇಶ್ ಅವರ ಟ್ವೀಟ್ ಅನ್ನು ನಾನೂ ನೋಡಿದ್ದೇನೆ. ನಾನೂ ಅಲ್ಲೇ ಉತ್ತರ ಕೊಟ್ಟಿದ್ದೇನೆ. ಎಂ ಬಿ ಪಾಟೀಲನಿಗೂ ಸಾಮರ್ಥ್ಯವಿದೆ, ಕರ್ನಾಟಕ ರಾಜ್ಯವೂ ಸಮರ್ಥವಾಗಿದೆ . ರಾಜ್ಯದ ಅನೇಕ ಕಡೆಗಳಲ್ಲಿ ಏರೋಸ್ಪೇಸ್ ಮಾತ್ರವಲ್ಲ, ಎಐ, ಡೀಪ್-ಟೆಕ್, ಐಟಿ ಹೀಗೆ ಎಲ್ಲಾ ತರಹದ ಉದ್ಯಮಗಳಿಗೂ ಭೂಮಿ ಇದೆ. ಒಬ್ಬನೇ ಒಬ್ಬ ಉದ್ಯಮಿಯೂ ಕರ್ನಾಟಕದಿಂದ ಹೊರಹೋಗಲು ನಾನು ಬಿಡುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಏರೋಸ್ಪೇಸ್ ಉದ್ಯಮಿಗಳಿಗೆ ಬರೀ ಭೂಮಿಯಲ್ಲ, ಅದರ ಜತೆಗೆ ನೀರು, ವಿದ್ಯುತ್ ಎಲ್ಲವನ್ನೂ ಕೊಡುತ್ತೇವೆ. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳಿಗೆ ನಮ್ಮ‌ ಪಾಲಿನ ನೀರು ಬಳಸಿಕೊಳ್ಳಲು 3,600 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಯೋಜನೆಯನ್ನೇ ರೂಪಿಸಲಾಗಿದೆ ಎಂದು ಪಾಟೀಲ ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಈಗ ಉದ್ಯಮಿಗಳ ಪರವಾಗಿ ಮಾತನಾಡುತ್ತಿದ್ದಾರೆ. ಸರಕಾರವೇನಾದರೂ ದೇವನಹಳ್ಳಿ ತಾಲ್ಲೂಕಿನಲ್ಲಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದರೆ, ಆಗ ಅವರು ರೈತರ ಪರವಾಗಿ ಮಾತನಾಡುತ್ತಿದ್ದರು. ವಿರೋಧ ಪಕ್ಷಗಳು ಏನಾದರೂ ಮಾಡಿಕೊಳ್ಳಲಿ, ನನಗೆ ರಾಜ್ಯದ ಹಿತಾಸಕ್ತಿ ಮಾತ್ರ ಮುಖ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ಕೈಗಾರಿಕಾ ಇಲಾಖೆಯಲ್ಲಿ ಸಾಧಿಸಿರುವ ಪ್ರಗತಿ ಮತ್ತು ದೇವನಹಳ್ಳಿ ವಿದ್ಯಮಾನವನ್ನೆಲ್ಲ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರಿಗೆ ಹೇಳಿದ್ದೇನೆ. ಇಲಾಖೆಯ ಪ್ರಗತಿ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X