Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿ-ಮಹಾದಾಯಿ-ಮೇಕೆದಾಟು ವಿಚಾರಕ್ಕಾಗಿ...

ಕಾವೇರಿ-ಮಹಾದಾಯಿ-ಮೇಕೆದಾಟು ವಿಚಾರಕ್ಕಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ: ಸಿಎಂ ಸಿದ್ದರಾಮಯ್ಯ

ʼʼ7 ಕೋಟಿ ಕನ್ನಡಿಗರ ಹಿತ ಕಾಪಾಡಲು ಒಟ್ಟಾಗಿ ಶ್ರಮಿಸೋಣʼʼ

ವಾರ್ತಾಭಾರತಿವಾರ್ತಾಭಾರತಿ23 Aug 2023 2:17 PM IST
share
ಕಾವೇರಿ-ಮಹಾದಾಯಿ-ಮೇಕೆದಾಟು ವಿಚಾರಕ್ಕಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ.23: ‘ಕಾವೇರಿ, ಮೇಕೆದಾಟು, ಮಹದಾಯಿ, ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಉಲ್ಬಣಗೊಂಡಿರುವ ಸಮಸ್ಯೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಬಳಿ ರಾಜ್ಯದಿಂದ ಸರ್ವಪಕ್ಷ ನಿಯೋಗ ಒಯ್ಯಲು ತೀರ್ಮಾನಿಸಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸರ್ವಪಕ್ಷ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಡಿ.ವಿ.ಸದಾನಂದಗೌಡ, ವೀರಪ್ಪ ಮೊಯ್ಲಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ, ಚಲುವರಾಯಸ್ವಾಮಿ, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ‘ನದಿ ನೀರು ಹಂಚಿಕೆ ಸಂಬಂಧ ಉಂಟಾಗಿರುವ ಸಮಸ್ಯೆಗಳ ಕುರಿತು ಪರಿಹಾರಕ್ಕಾಗಿ ಕೇಂದ್ರ ಸರಕಾರದ ಬಳಿ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಸಭೆಯಲ್ಲಿ ತಿಳಿಸಿದ್ದು, ಅದರಂತೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ. ಯಾವ ದಿನದಂದು ತೆರಳಬೇಕೇನ್ನುವುದು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು’ ಎಂದು ನುಡಿದರು.

ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟ ಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರಕಾರ ಎಲ್ಲ ಅಗತ್ಯ ಬೆಂಬಲ ನೀಡಲಿದೆ ಎಂದು ಹೇಳಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇ ಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮಥ್ರ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾವೇರಿ ವಿವಾದ ಹಳೆಯದು. ಸರ್ವೋಚ್ಛ ನ್ಯಾಯಾಲಯ ನಮಗೆ ತೀರ್ಪು ಕೊಟ್ಟ ನಂತರ 2018ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಅನೇಕ ಸಭೆಗಳನ್ನು ಮಾಡಿದ್ದಾರೆ. ಕಾವೇರಿ ಪ್ರಾಧಿಕಾರ 22 ಸಭೆ ಹಾಗೂ ನಿಯಂತ್ರಣ ಸಮಿತಿ 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ.ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ. ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವರ್ಷ ಮಳೆ ಕಡಿಮೆ ಆಗಿದ್ದು, ಜೂನ್ ಹಾಗೂ ಆಗಸ್ಟ್‍ನಲ್ಲಿ ಮಳೆ ಕೊರತೆಯಾಗಿದೆ. ಇಲ್ಲಿಯ ವರೆಗೆ ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ 20ನೆ ತಾರೀಖಿನ ವರೆಗೆ ನೀರು ಬಿಟ್ಟಿರುವುದು 24 ಟಿಎಂಸಿ. ಅಂದರೆ ನಾವು ವಿರೋಧ ಮಾಡಿದ್ದೇವೆ. ವಾಸ್ತವವನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದೂ ಉಲ್ಲೇಖಿಸಿದರು.

ನಾವು ವಾದ ಮಾಡಿದ್ದರಿಂದಲೇ 15,000 ಕ್ಯೂಸೆಕ್ಸ್ ನೀರಿನಿಂದ 10,000 ಕ್ಯೂಸೆಕ್ಸ್ ನೀರಿಗೆ ಇಳಿಕೆ ಮಾಡಲಾಯಿತು. ಅದನ್ನೂ ಮರು ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಿದೆವು. 15,000 ಕ್ಯುಸೆಕ್ಸ್ ನೀರು ಕೊಡಲಾಗದು ಎಂದು ರಾಜ್ಯದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿರುವಾಗಲೇ ತಮಿಳುನಾಡಿದ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಂತರ ಸುಪ್ರೀಂ ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದಾರೆ. ಆ.25ರಂದು ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ವಿಷಯದಲ್ಲಿ ವಕೀಲರು ಸಮರ್ಥವಾಗಿ ವಾದ ಮಾಡುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಸ್ತಾಪಿಸಿ, ‘ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್ ವೈಫಲ್ಯದಿಂದಾಗಿ 2023-24ರ ಜಲ ವರ್ಷವು ಸಂಕಷ್ಟದ ವರ್ಷವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್ 10 ರಂದು 1,5000 ಕ್ಯೂಸೆಕ್ ನೀರು ಬಿಡಲು ಸೂಚಿಸಿತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯೂಸೆಕ್‍ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಾಧೀಶರ ಪೀಠದ ಮುಂದೆ ವಿಚಾರಣೆಗೆ ಬರಲಿದೆ ಎಂದರು.

ಸರ್ವಪಕ್ಷಗಳಿಂದ ಸಂಪೂರ್ಣ ಸಹಕಾರ: ‘ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ವೀರಪ್ಪ ಮೊಯ್ಲಿ, ಜಗದೀಶ ಶೆಟ್ಟರ, ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಸಂಸದರಾದ ಸುಮಲತಾ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು. ರೈತರ ಹಿತ ರಕ್ಷಣೆಗೆ ಸರಕಾರದೊಂದಿಗೆ ಇರುವುದಾಗಿ ಬೆಂಬಲ ವ್ಯಕ್ತಪಡಿಸಿದರು. ಹಾಗೂ ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು...

ರಾಜಕೀಯ ಇಲ್ಲ: ಸಿದ್ದರಾಮಯ್ಯ

ಕರ್ನಾಟಕದ ನೆಲ, ಜಲ, ಗಡಿ, ಭಾಷೆಗಳ ಬಗ್ಗೆ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳೂ ಒಕ್ಕೊರಲಿನಿಂದ ಮಾತನಾಡಿವೆ. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಪ್ರಯತ್ನವನ್ನು ಯಾರೂ ಮಾಡಿಲ್ಲ,ಮಾಡಲೂ ಬಾರದು. ಯಾಕೆಂದರೆ ನಾವೆಲ್ಲರೂ ರಾಜ್ಯದ ಏಳು ಕೋಟಿ ಜನರ ಹಿತ ಕಾಪಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ರಾಜ್ಯದ ಹಿತ ಕಾಪಾಡಿ: ಬಸವರಾಜ ಬೊಮ್ಮಾಯಿ

ರಾಜ್ಯ ಸರಕಾರ ಸಿಡಬ್ಲ್ಯೂ ಆದೇಶದ ಬಗ್ಗೆ ಸಮರ್ಥ ವಾದ ಮಂಡಿಸಿದ್ದೇವೆ ಎಂದಿದೆ. ಆದರೆ ನೀವು ಸಮರ್ಥವಾಗಿ ವಾದ ಮಂಡಿಸಿಲ್ಲ ಎಂದು ನಾವು ಹೇಳಿದ್ದೇವೆ. ಯಾಕೆಂದರೆ ಇಂತಹ ಮಳೆ ಕೊರತೆಯ ಸಂಕಷ್ಟದ ಕಾಲದಲ್ಲಿ ಪ್ರತಿದಿನ 10 ಸಾವಿರ ಕ್ಯೂಸೆಕ್ ನೀರು ಬಿಡುತ್ತಿರುವುದು ನಮ್ಮ ರಾಜ್ಯಕ್ಕೆ ಮಾರಕವಾಗಿದೆ. ತಮಿಳುನಾಡಿನ ಹಿತ ಕಾಪಾಡುವುದಕ್ಕಿಂತ ನಮ್ಮ ರಾಜ್ಯದ ಹಿತ ಕಾಪಾಡುವುದು ಸರಕಾರದ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು...

ನಮ್ಮ ಜನರಿಗೆ ಪ್ರಾಮುಖ್ಯತೆ ನೀಡಿ: ಡಿ.ವಿ.ಸದಾನಂದಗೌಡ

ಕರ್ನಾಟಕದಲ್ಲಿ ನೀರಿನ ಸಮಸ್ಯೆ ಬಹಳಷ್ಟು ಇದೆ. ನ್ಯಾಯಾಲಯದ ಆದೇಶದಲ್ಲಿ ಹೇಳಿರುವಂತೆ ನೀರು ಬೀಡಬೇಕಾದದ್ದು ನಮ್ಮ ಕರ್ತವ್ಯ. ಆದರೆ ನಮ್ಮ ರಾಜ್ಯದ ಜನರಿಗೆ ಪ್ರಾಮುಖ್ಯತೆ ಕೊಡಬೇಕು. ನಾನು ಸಭೆಯಲ್ಲಿ ಎರಡು ವಿಚಾರ ಬಗ್ಗೆ ಸಲಹೆ ಕೊಟ್ಟಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X