Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗ...

ಬರ ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗ ಕರೆದೊಯ್ಯುವುದು ರಾಜ್ಯದ ಹಿತದೃಷ್ಟಿಯಿಂದ ಅಗತ್ಯ: ಡಾ.ಪರಮೇಶ್ವರ

► ರಾಜ್ಯದ ಹಿತಾಸಕ್ತಿಗಿಂತ ರಾಜಕೀಯ ಮುಖ್ಯವಾಗಬಾರದು : ಡಿಸಿಎಂ ►ರಾಜ್ಯದಲ್ಲಿ ಬರದಿಂದ ಸುಮಾರು 62 ಸಾವಿರ ಕೋಟಿ ರೂ ನಷ್ಟ

ವಾರ್ತಾಭಾರತಿವಾರ್ತಾಭಾರತಿ22 Oct 2026 1:25 PM IST
share
ಬರ ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗ ಕರೆದೊಯ್ಯುವುದು ರಾಜ್ಯದ ಹಿತದೃಷ್ಟಿಯಿಂದ ಅಗತ್ಯ: ಡಾ.ಪರಮೇಶ್ವರ

ಬೆಂಗಳೂರು, ಅ. 22 : ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಕೇಂದ್ರದಿಂದ ಪರಿಹಾರ ದೊರಕಿಸಿಕೊಡುವುದು ನಮ್ಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ವಪಕ್ಷ ನಿಯೋಗವನ್ನು ದಿಲ್ಲಿಗೆ ಕರೆದೊಯ್ಯಲು ನಿರ್ಧರಿಸಿದ್ದೇವೆ. ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರದಲ್ಲಿ ಸಣ್ಣಪುಟ್ಟ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವಿಪಕ್ಷಗಳು ನಮ್ಮೊಂದಿಗೆ ಸಹಕರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು, ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಕೃಷಿ ಸಚಿವರ ಭೇಟಿಗೆ ಮೊದಲು ಸಮಯಾವಕಾಶ ಪಡೆಯಬೇಕಾಗುತ್ತದೆ. ಅವರ ಭೇಟಿಗೆ ಅವಕಾಶ ದೊರೆತ ನಂತರವೇ ಸರ್ವಪಕ್ಷ ನಿಯೋಗವನ್ನು ಕರೆದೊಯ್ಯಲು ದಿನಾಂಕ ನಿಗದಿಪಡಿಸಬಹುದು. ಏಕಾಏಕಿ ದಿನಾಂಕ ನಿಗದಿಪಡಿಸಿ ನಿಯೋಗವನ್ನು ದೆಹಲಿಗೆ ಕರೆದೊಯ್ಯುವುದು ಸಾಧ್ಯವಿಲ್ಲ. ಈ ಹಿಂದೆ ಸರ್ಕಾರ ನಡೆಸಿರುವ ಬಿಜೆಪಿಯವರಿಗೆ ಈ ಆಡಳಿತಾತ್ಮಕ ಪ್ರಕ್ರಿಯೆಗಳು ತಿಳಿದಿಲ್ಲವೇ ಎಂದು ಪ್ರಶ್ನಿಸಿದರು.

ಈ ಹಿಂದೆ ನಾನು ರೇಷ್ಮೆ ಸಚಿವನಾಗಿದ್ದ ಸಂದರ್ಭದಲ್ಲಿ ರೇಷ್ಮೆ ಉದ್ಯಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ನಿಯೋಗವನ್ನು ದೆಹಲಿಗೆ ಕರೆದೊಯ್ದಿದ್ದೆ. ಆಗ ಪ್ರಧಾನಮಂತ್ರಿಗಳ ಭೇಟಿಗೆ ಮೊದಲೇ ಸಮಯಾವಕಾಶ ಕೋರಿದ್ದರೂ ಅವಕಾಶ ದೊರೆತಿರಲಿಲ್ಲ. ನಿಯೋಗ ದೆಹಲಿಗೆ ತೆರಳಿದ ನಂತರ, ಭೇಟಿಗೆ ಸಮಯ ನಿಗದಿಯಾಗದೆ ನಮ್ಮನ್ನು ಏಕೆ ಕರೆದುಕೊಂಡು ಬಂದಿದ್ದೀರಿ ಎಂದು ನಿಯೋಗದ ಸದಸ್ಯರು ಪ್ರಶ್ನಿಸಿದ್ದರು.

ಆ ಸಂದರ್ಭದಲ್ಲಿ ಪಿ.ವಿ. ನರಸಿಂಹರಾವ್ ಅವರು ಪ್ರಧಾನಮಂತ್ರಿಯಾಗಿದ್ದರು. ವಿರೋಧ ಪಕ್ಷದವರು ಈ ವಿಚಾರವನ್ನು ಸಮಸ್ಯೆಯನ್ನಾಗಿ ಮಾಡುತ್ತಿದ್ದಾರೆ ಎಂದು ಮನವರಿಕೆ ಮಾಡಿ, ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದೆವು. ಬಳಿಕ ಪ್ರಧಾನಮಂತ್ರಿಗಳು ತಕ್ಷಣವೇ ಭೇಟಿಗೆ ಅವಕಾಶ ನೀಡಿದರು. ಅದರಂತೆ ನಿಯೋಗವನ್ನು ಕರೆದೊಯ್ದು ಅವರನ್ನು ಭೇಟಿ ಮಾಡಿದ್ದೆವು ಎಂದರು.

ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳಲ್ಲಿ ಸಣ್ಣಪುಟ್ಟ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಡಬೇಕು. ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಪರಿಹಾರ ದೊರಕಿಸಿಕೊಡುವುದು ನಮ್ಮೆಲ್ಲರ ಆದ್ಯತೆಯಾಗಬೇಕು. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಪಡೆಯುವುದೇ ಈ ಸರ್ವಪಕ್ಷ ನಿಯೋಗದ ಪ್ರಮುಖ ಉದ್ದೇಶ. ಅದನ್ನು ಬಿಟ್ಟು ಸಣ್ಣಪುಟ್ಟ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿಯನ್ನು ಎಲ್ಲಕ್ಕಿಂತ ಮುಖ್ಯವಾಗಿ ಪರಿಗಣಿಸಬೇಕು. ಬರ ಪರಿಹಾರದಂತಹ ಗಂಭೀರ ವಿಚಾರದಲ್ಲಿ ರಾಜಕೀಯಕ್ಕಿಂತ ಜನರ ಸಂಕಷ್ಟಕ್ಕೆ ಸ್ಪಂದಿಸುವುದು ಮುಖ್ಯ ಎಂದು ತಿಳಿಸಿದರು.

ರಾಜ್ಯದಲ್ಲಿ ಬರದಿಂದ ಸುಮಾರು 62 ಸಾವಿರ ಕೋಟಿ ರೂ. ನಷ್ಟ

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ ಸುಮಾರು 62 ಸಾವಿರ ಕೋಟಿ ರೂ. ನಷ್ಟವಾಗಿದೆ. ಈ ನಷ್ಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಎಷ್ಟು ಪರಿಹಾರವನ್ನು ಕೋರಬೇಕು ಎಂಬ ಲೆಕ್ಕಾಚಾರವನ್ನು ಅಧಿಕಾರಿಗಳು ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ (NDRF) ಮಾರ್ಗಸೂಚಿಗಳ ಅನ್ವಯವೇ ಪರಿಹಾರದ ಮೊತ್ತವನ್ನು ನಿರ್ಧರಿಸಬೇಕಾಗುತ್ತದೆ. ರಾಜ್ಯದಲ್ಲಿ 62 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂಬ ಕಾರಣಕ್ಕೆ ಅಷ್ಟು ಮೊತ್ತವನ್ನೇ ಪರಿಹಾರವಾಗಿ ಕೇಳಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳ ಪ್ರಕಾರ ಅರ್ಹ ಪರಿಹಾರದ ಮೊತ್ತವನ್ನು ಲೆಕ್ಕಹಾಕಿ ಮನವಿ ಸಲ್ಲಿಸಲಾಗುವುದು ಎಂದು ವಿವರಿಸಿದರು.

ದಸರಾ ಉತ್ಸವ ಮುಕ್ತಾಯಗೊಂಡಿರುವುದರಿಂದ ಮುಂದಿನ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುವುದು. ಸರ್ವಪಕ್ಷ ಸಭೆಯನ್ನು ಕರೆದು ಎಲ್ಲ ಪಕ್ಷಗಳ ನಾಯಕರೊಂದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು. ಬಳಿಕ ಕೇಂದ್ರದ ನಾಯಕರ ಭೇಟಿಗೆ ಸಮಯ ನಿಗದಿಪಡಿಸಿಕೊಂಡು ನಿಯೋಗವನ್ನು ಕರೆದೊಯ್ಯಲಾಗುವುದು ಎಂದರು.

ಬಿಜೆಪಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರನ್ನು ನಿಯೋಗದಲ್ಲಿ ಭಾಗವಹಿಸುವಂತೆ ಮತ್ತೊಮ್ಮೆ ಮನವಿ ಮಾಡಿಕೊಳ್ಳಲಾಗುವುದು. ಅವರು ಬಂದರೆ ಸಂತೋಷ. ಬರದಿದ್ದರೆ ಏನು ಮಾಡಲು ಸಾಧ್ಯ? ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ನಾವು ಜನರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದ ಬಳಿಗೆ ತೆರಳಿ ಪರಿಹಾರವನ್ನು ಕೇಳಲೇಬೇಕು. ಅದು ನಮ್ಮ ಜವಾಬ್ದಾರಿಯಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿಗಳ ದೆಹಲಿ ಭೇಟಿ

ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ದೆಹಲಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ಕುರಿತು ಚರ್ಚೆ ನಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ತಿಳಿದಿರುವ ಮಟ್ಟಿಗೆ ಮುಖ್ಯಮಂತ್ರಿಗಳು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಕೆಲವು ವಿಚಾರಗಳ ಕುರಿತು ಕೇಂದ್ರದ ಸಚಿವರ ಭೇಟಿಗೆ ಸಮಯ ನಿಗದಿಪಡಿಸಿಕೊಂಡಿದ್ದಾರೆ ಎಂದರು.

ದೆಹಲಿಗೆ ತೆರಳಿದ ಸಂದರ್ಭದಲ್ಲಿ ಸಹಜವಾಗಿಯೇ ಎಐಸಿಸಿ ನಾಯಕರು ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಬಹುದು. ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ತಿಳಿಸಿದರು.

ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ನಿನ್ನೆಯಷ್ಟೇ ಹೇಳಿಕೆ ನೀಡಿದ್ದಾರೆ. ಅದರಂತೆ ಪ್ರಕ್ರಿಯೆ ನಡೆಯಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X