Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಗರಸಭೆ ಜೆಡಿಎಸ್​ ಸದಸ್ಯನ ಮೇಲೆ ಹಲ್ಲೆ‌...

ನಗರಸಭೆ ಜೆಡಿಎಸ್​ ಸದಸ್ಯನ ಮೇಲೆ ಹಲ್ಲೆ‌ ಆರೋಪ; ಪ್ರತಿಪಕ್ಷಗಳನ್ನು ಬೆದರಿಸುವ ದುಷ್ಟ ಹುನ್ನಾರ ಎಂದ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ14 Oct 2023 5:41 PM IST
share
ನಗರಸಭೆ ಜೆಡಿಎಸ್​ ಸದಸ್ಯನ ಮೇಲೆ ಹಲ್ಲೆ‌ ಆರೋಪ; ಪ್ರತಿಪಕ್ಷಗಳನ್ನು ಬೆದರಿಸುವ ದುಷ್ಟ ಹುನ್ನಾರ ಎಂದ ಕುಮಾರಸ್ವಾಮಿ

ಬೆಂಗಳೂರು, ಅ. 14: ‘ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಮುಖಂಡರು, ನಗರಸಭೆ ಸದಸ್ಯ ಅಗ್ರಹಾರ ಮುರಳಿ ಅವರ ಮೇಲೆ ದುಷ್ಕರ್ಮಿಗಳು ಮಚ್ಚು ಲಾಂಗ್‍ಗಳಿಂದ ಪೈಶಾಚಿಕ ದಾಳಿ ನಡೆಸಿರುವ ಘಟನೆ ಖಂಡನೀಯ. ಈ ಕೃತ್ಯ ಎಸಗಿದ ದುರುಳರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶನಿವಾರ ಎಕ್ಸ್‍ನಲ್ಲಿ ಸರಣಿ ಪೋಸ್ಟ್ ಹಾಕಿರುವ ಅವರು, ‘ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ವಿಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ದೌರ್ಜನ್ಯ ಮೇರೆ ಮೀರಿದೆ. ಗೃಹ ಇಲಾಖೆ, ಪೊಲೀಸ್ ವ್ಯವಸ್ಥೆ ಆಡಳಿತ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಅಧಿಕಾರಿಗಳು ಆಡಳಿತ ಪಕ್ಷ ನಾಯಕರ ಕೈಗೊಂಬೆಗಳು ಆಗಿರುವ ಪರಿಣಾಮವೇ ಇಂಥ ಘಟನೆಗಳಿಗೆ ದಾರಿ ಆಗುತ್ತಿದೆ. ರಾಜ್ಯದಲ್ಲಿ ಮೂರು ನಾಲ್ಕು ತಿಂಗಳಿನಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಪೂರ್ಣವಾಗಿ ಕುಸಿದು ಬಿದ್ದಿದೆ. ಮೊದಲು ಇಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಕೆಲ ದಿನಗಳ ಹಿಂದೆ ಹಾಸನದಲ್ಲಿ ಜೆಡಿಎಸ್ ಮುಖಂಡ ಕೃಷ್ಣೇ ಗೌಡರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಹೊಳೆನರಸೀಪುರದಲ್ಲಿ ನಮ್ಮ ಪಕ್ಷದ ಮುಖಂಡ ಅಶ್ವತ್ಥ್ ಅವರ ಮೇಲೆ ದಾಳಿ ನಡೆಡಿತ್ತು. ಈಗ ಚಿಂತಾಮಣಿಯಲ್ಲಿ ಅಂತಹದ್ದೇ ಘಟನೆ ನಡೆದಿರುವುದು ಪ್ರತಿಪಕ್ಷಗಳನ್ನು ಹೆದರಿಸಿ ಬೆದರಿಸುವ ದುಷ್ಟ ಹುನ್ನಾರವಲ್ಲದೆ ಮತ್ತೇನಲ್ಲ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅದರಲ್ಲೂ ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗುತ್ತಿದೆ. ಇದು ಸರಿ ಅಲ್ಲ, ಸಹಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಸದಾ ಶಾಂತಿ ನೆಲೆಸಿರಬೇಕು ಎನ್ನುವುದು ನಮ್ಮ ಪಕ್ಷದ ಆಶಯ. ಸರಕಾರ ಮತ್ತು ಗೃಹ ಸಚಿವರು ಕೂಡಲೇ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಪಕ್ಷದ ವತಿಯಿಂದ ಉಗ್ರವಾದ ಹೋರಾಟಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X