Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಸಿಗಾಗಿ ಪೋಸ್ಟಿಂಗ್‌ ಆರೋಪ:...

ಕಾಸಿಗಾಗಿ ಪೋಸ್ಟಿಂಗ್‌ ಆರೋಪ: ಡಾ.ಯತೀಂದ್ರ ಅವರ ವೀಡಿಯೊ ಹಂಚಿಕೊಂಡ ಕುಮಾರಸ್ವಾಮಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ16 Nov 2023 10:00 AM IST
share
ಕಾಸಿಗಾಗಿ ಪೋಸ್ಟಿಂಗ್‌ ಆರೋಪ: ಡಾ.ಯತೀಂದ್ರ ಅವರ ವೀಡಿಯೊ ಹಂಚಿಕೊಂಡ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು ಫೋನ್‌ ನಲ್ಲಿ ಮಾತನಾಡುತ್ತಿರುವ ವೀಡಿಯೊ ಒಂದನ್ನು ತಮ್ಮ X ಖಾತೆಯಲ್ಲಿ ಹಂಚಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ''ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, "ನಾನು ಹೇಳಿದವರಷ್ಟನ್ನೇ ಮಾಡಿ" ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ?? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೋಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ 'ಒಳ ವಸೂಲಿ ಸಚಿವಾಲಯ'ದ ಸಚಿವರಾ?'' ಎಂದು ಪ್ರಶ್ನೆ ಮಾಡಿದ್ದಾರೆ.

''ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ? '' ಎಂದು ಪ್ರಶ್ನೆ ಮಾಡಿದ್ದಾರೆ.

''ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು?'' ಎಂದು ಕುಮಾರಸ್ವಾಮಿ ಯತೀಂದ್ರ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ್ದಾರೆ.

''ಆ ಮಹದೇವ ಎನ್ನುವ ವ್ಯಕ್ತಿ ಯಾರು?''

''ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ?'' ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

''ರಾಜ್ಯದ ಜನರಿಗೆ ಉತ್ತರ ಕೊಡಬೇಕು''

'ಈಗ ಹೇಳಿ ಸಿದ್ದರಾಮಯ್ಯನವರೇ, ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್ ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸಂಟೇಜ್ ಪಟಾಲಂಗೆ ಎಷ್ಟು?ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವಿಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ. ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ 'ಸುಲಿಗೆಪುತ್ರ' ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ!! ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು' ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

''ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ''

''ನಿಮ್ಮಿಂದ ಉತ್ತರವಷ್ಟೇ ಅಲ್ಲ, ನಿಮಗೆ ಮಾನ ಮರ್ಯಾದೆ ಬಹಳ ಜಾಸ್ತಿ ಅಲ್ಲವೇ?ನೈತಿಕ ಮೌಲ್ಯಗಳಂತೂ ದುಪಟ್ಟು ಜಾಸ್ತಿ, ಹೌದಲ್ಲವೇ? ಅದಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಿ. ನಿಮಗೆ ಉಳಿದಿರುವುದು ಸಿಎಂ ಕಚೇರಿ ಖಾಲಿ ಮಾಡುವುದಷ್ಟೇ. ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ. ಇದು ನನ್ನ ಆಗ್ರಹ'' ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X