Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮತ ತಿರುಚಿದ ಆರೋಪ; ಪ್ರಕರಣ ರದ್ದು ಕೋರಿ...

ಮತ ತಿರುಚಿದ ಆರೋಪ; ಪ್ರಕರಣ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶೃಂಗೇರಿ ಶಾಸಕ ಡಿ.ಎನ್.ಜೀವರಾಜ್‌

ವಾರ್ತಾಭಾರತಿವಾರ್ತಾಭಾರತಿ4 May 2026 8:07 PM IST
share
ಮತ ತಿರುಚಿದ ಆರೋಪ; ಪ್ರಕರಣ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶೃಂಗೇರಿ ಶಾಸಕ ಡಿ.ಎನ್.ಜೀವರಾಜ್‌


ಬೆಂಗಳೂರು: ಅಂಚೆ ಮತಗಳ ಮರು ಎಣಿಕೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಮತಗಳನ್ನು ತಿರುಚಿದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದು ಕೋರಿ ಶೃಂಗೇರಿಯ ಬಿಜೆಪಿ ಶಾಸಕ ಡಿ.ಎನ್‌. ಜೀವರಾಜ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಜೀವರಾಜ್ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ.

ಪ್ರಕರಣವೇನು?

2023ರ ಮೇ 13ರಂದು ಮತ ಎಣಿಕೆ ಮುಗಿದ ಬಳಿಕ ಜೀವರಾಜ್‌, ಹಿಂದಿನ ಚುನಾವಣಾಧಿಕಾರಿ ವೇದಮೂರ್ತಿ ಮತ್ತು ಚಿಕ್ಕಮಗಳೂರಿನ ಅಂದಿನ ಜಿಲ್ಲಾಧಿಕಾರಿ ರಮೇಶ್‌ ಅವರು ಸಂಚು ರೂಪಿಸಿ ಮತ ಪೆಟ್ಟಿಗೆಗಳ ಸೀಲು ತೆಗೆದು ರಾಜೇಗೌಡರಿಗೆ ಬಿದ್ದಿದ್ದ ಒಂದು ಕಟ್ಟಿನ 170 ಮತಗಳನ್ನು ತಿದ್ದುಪಡಿ ಮಾಡಿದ್ದಾರೆ. ಈ ವಿಚಾರವನ್ನು 2026ರ ಮೇ 2ರಂದು ಮತ ಮರು ಎಣಿಕೆ ಆರಂಭಿಸುವುದಕ್ಕೂ ಮುನ್ನವೇ ಪ್ರಸ್ತಾಪಿಸಿ 2026ರ ಮೇ 3ರಂದು ಕಾಂಗ್ರೆಸ್‌ನ ಮತ ಎಣಿಕೆಯಲ್ಲಿ ಭಾಗಿಯಾಗಿದ್ದ ಏಜೆಂಟ್‌ ಸುಧೀರ್‌ ಕುಮಾರ್‌ ಮುರೋಳ್ಳಿ ಚಿಕ್ಕಮಗಳೂರು ನಗರ ಠಾಣೆಗೆ ದೂರು ನೀಡಿದ್ದಾರೆ.

ಇದರ ಅನ್ವಯ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 143 (ಅಕ್ರಮ ಕೂಟ), 465 (ಸುಳ್ಳು ದಾಖಲೆ ಸೃಷ್ಟಿ), 468 (ವಂಚಿಸಲು ಸುಳ್ಳು ದಾಖಲೆ ಸೃಷ್ಟಿ), 471 (ಸುಳ್ಳು ದಾಖಲೆಗಳನ್ನು ಅಸಲಿ ಎಂದು ಬಿಂಬಿಸುವುದು), 120B (ಪಿತೂರಿ) ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್‌ 136ರ (ಚುನಾವಣಾ ಅಕ್ರಮ) ಅಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನು ಜೀವರಾಜ್‌ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡರ ಆಯ್ಕೆ ಪ್ರಶ್ನಿಸಿ ಜೀವರಾಜ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ 2026ರ ಏಪ್ರಿಲ್‌ 6ರಂದು ತಿರಸ್ಕೃತವಾಗಿರುವ 279 ಅಂಚೆ ಮತಗಳನ್ನು ಪರಿಶೀಲಿಸಿ ವಿಜೇತರನ್ನು ಘೋಷಿಸುವಂತೆ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ 2026ರ ಮೇ 3ರಂದು ಚುನಾವಣಾಧಿಕಾರಿಯು ನ್ಯಾಯಾಲಯದ ನಿರ್ದೇಶನದ ಅನುಸಾರ ಅಂಚೆ ಮತಗಳನ್ನು ಮರು ಎಣಿಕೆ ಮಾಡಿ ಕಾಂಗ್ರೆಸ್‌ ಟಿ.ಡಿ. ರಾಜೇಗೌಡ ವಿರುದ್ಧ ಜೀವರಾಜ್‌ ವಿಜೇತರು ಎಂದು ಫಾರ್ಮ್‌ 21ಸಿ ಪತ್ರ ನೀಡಿದ್ದರು. ಇದಕ್ಕೂ ಮುನ್ನ, ಮೂರು ವರ್ಷಗಳ ಕಾಲ ರಾಜೇಗೌಡ ಶಾಸಕರಾಗಿದ್ದರು. 201 ಮತಗಳ ಕೂದಲೆಳೆ ಅಂತರದಲ್ಲಿ ರಾಜೇಗೌಡ ಜಯಭೇರಿ ಬಾರಿಸಿದ್ದರು.

ಹೊಸದಾಗಿ ಮತ ಎಣಿಕೆ ನಡೆದು ನನ್ನನ್ನು ವಿಜೇತ ಎಂದು ಘೋಷಣೆಯಾದ ಬಳಿಕ ಪ್ರಕರಣ ದಾಖಲಿಸಲಾಗಿದ್ದು, ಇದು ನ್ಯಾಯಾಲಯದ ಆದೇಶವನ್ನು ವಿಫಲಗೊಳಿಸುವ ಪ್ರಯತ್ನವಾಗಿದೆ. ಜತೆಗೆ, ನ್ಯಾಯಾಲಯದ ನಿರ್ದೇಶನದಂತೆ ಮರು ಎಣಿಕೆಯಾದ ತಕ್ಷಣ ವಿಜೇತರನ್ನು ಚುನಾವಣಾಧಿಕಾರಿ ಘೋಷಿಸಿರಲಿಲ್ಲ. ವಾಟ್ಸ್‌ಆ್ಯಪ್‌ ಮೂಲಕ ಲೀಗಲ್‌ ನೋಟಿಸ್‌ ಕಳುಹಿಸಿದ ಬಳಿಕ ಜಯ ಘೋಷಿಸಲಾಗಿದೆ. ಸ್ವತಂತ್ರವಾಗಿ ನಿರ್ಧರಿಸಿ ಎಫ್‌ಐಆರ್‌ ದಾಖಲಿಸಿಲ್ಲ. ಬದಲಿಗೆ ಉಪಮುಖ್ಯಮಂತ್ರಿ ಡಿ.ಕೆ‌. ಶಿವಕುಮಾರ್‌ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ ಬಳಿಕ ಪ್ರಕರಣ ದಾಖಲಿಸಲಾಗಿದೆ ಎಂದು ಜೀವರಾಜ್‌ ಅರ್ಜಿಯಲ್ಲಿ ಆಕ್ಷೇಪಿಸಿದ್ದಾರೆ.

Tags

Vote TamperingSringeriD.N. JeevarajHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X