Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೆಡಿಎಸ್-ಬಿಜೆಪಿ ಮೈತ್ರಿಯಿಂದ ರಾಜ್ಯದ...

ಜೆಡಿಎಸ್-ಬಿಜೆಪಿ ಮೈತ್ರಿಯಿಂದ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ: ಎಚ್.ಡಿ.ಕುಮಾರಸ್ವಾಮಿ

ʼʼ5 ವರ್ಷಗಳಲ್ಲಿ ಪರಿಹಾರ ಪಡೆಯದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆʼʼ

ವಾರ್ತಾಭಾರತಿವಾರ್ತಾಭಾರತಿ1 Oct 2023 10:02 PM IST
share
ಜೆಡಿಎಸ್-ಬಿಜೆಪಿ ಮೈತ್ರಿಯಿಂದ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಅ.1: ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಈ ಮೈತ್ರಿ ಪರಿಹಾರವಾಗಿದೆ. ಮುಂದಿನ ಐದು ವರ್ಷಗಳಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಪಡೆಯದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ರವಿವಾರ ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿರುವ ತಮ್ಮ ತೋಟದಲ್ಲಿ ಆಯೋಜಿಸಿದ್ದ ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ಜತೆಗಿನ ಮೈತ್ರಿ ನನ್ನ ಸ್ವಾರ್ಥಕ್ಕೆ ಅಲ್ಲ. ನಾಡಿನ ಹಿತಕ್ಕಾಗಿ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಆಗದಂತೆ ಕಾನೂನಿನ ವ್ಯಾಪ್ತಿಯೊಳಗೆ ಈ ಸಮಸ್ಯೆ ಪರಿಹಾರ ಪಡೆಯುವ ಕೆಲಸ ಮಾಡುತ್ತೇನೆ. ಈ ಮೈತ್ರಿಯಿಂದ ರಾಜ್ಯಕ್ಕೆ ಒಳ್ಳೆಯದು ಆಗುತ್ತದೆ. ನಮ್ಮ ನೀರು ಉಳಿಸೋದಕ್ಕೆ ಏನು ಮಾಡಬೇಕು, ಅದನ್ನು ಮಾಡುತ್ತೇನೆ ಎಂದು ಅವರು ಹೇಳಿದರು.

ಕಾಂಗ್ರೆಸ್ ನವರ ರೀತಿಯಲ್ಲಿ ನಾನು ಸುಳ್ಳು ಹೇಳುವುದಿಲ್ಲ. ದೇವೇಗೌಡರ ಮಾರ್ಗದರ್ಶನದಲ್ಲಿ ಈ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಾನು ರೂಪಿಸಿದ್ದ ಜಲಧಾರೆಯಲ್ಲೂ ಅತ್ಯುತ್ತಮ ಪರಿಹಾರ ಇತ್ತು. ಜನರು ಅವಕಾಶ ಕೊಡಲಿಲ್ಲ. ಕಾಂಗ್ರೆಸ್ ಪಕ್ಷವನ್ನು ನಂಬಿ ಮತ ಹಾಕಿದರು ಎಂದು ಕುಮಾರಸ್ವಾಮಿ ಹೇಳಿದರು.

ಆದರೆ ಕಾಂಗ್ರೆಸ್‍ನವರು ರಾಜ್ಯದ ಜನರಿಗೆ ಕಣ್ಣೀರು ಹಾಕಿಸುತ್ತಿದ್ದಾರೆ. ಹೀಗಾಗಿ ನಾನು ಕೆಲವು ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕಾಯಿತು. ಕೇಂದ್ರ ಸರಕಾರದ ನೆರವಿನಿಂದ ಎಲ್ಲ ಸಮಸ್ಯೆ, ಯೋಜನೆಗಳಿಗೆ ಪರಿಹಾರ ಮಾಡಿಸುತ್ತೇನೆ. ಒಂದು ವೇಳೆ ಇನ್ನೈದು ವರ್ಷಗಳಲ್ಲಿ ಅದನ್ನು ಮಾಡಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಅವರು ನುಡಿದರು.

ನಮ್ಮ ಪಕ್ಷ ಬಲವಾಗಿದೆ, ಒಗ್ಗಟ್ಟಾಗಿದೆ ಎನ್ನುವುದಕ್ಕೆ ಈ ಸಭೆ ಸಾಕ್ಷಿ. ಗೆದ್ದವರು, ಸೋತವರು ಸಂಕಟದಲ್ಲಿ ಇದ್ದೀರಿ, ಅದನ್ನು ಸರಿ ಮಾಡುತ್ತೇನೆ. ದೇವೇಗೌಡರು ತಮ್ಮ 91ನೆ ವಯಸ್ಸಿನಲ್ಲಿ ಈ ಪಕ್ಷಕ್ಕೆ ಏನು ಆಘಾತ ಆಗಿದೆ ಎಂದು ಯೋಚನೆ ಮಾಡುತ್ತಿದ್ದಾರೆ. ಅವರಿಗೆ ಯಾರೂ ನೋವು ಕೊಡುವುದು ಬೇಡ ಎಂದು ಕುಮಾರಸ್ವಾಮಿ ವಿನಂತಿ ಮಾಡಿದರು.

ಜಾತ್ಯತೀತ ಅನ್ನುತ್ತೇವೆ. ಆದರೆ, ಜಾತಿ ಹೆಸರಿನಲ್ಲಿಯೇ ಟಿಕೆಟ್ ಕೊಡುತ್ತೇವೆ. ಇದು ಯಾಕೆ? ಕಾಂಗ್ರೆಸ್ ಎಲ್ಲ ಪಕ್ಷಗಳಿಗೂ ಮೀರಿ ಈ ಕೆಲಸ ಹೆಚ್ಚು ಮಾಡುತ್ತಿದೆ. ಬಿಜೆಪಿ ಮೈತ್ರಿಯಿಂದ ನಮಗೆ ಯಾವ ಇಕ್ಕಟ್ಟು ಆಗುವುದಿಲ್ಲ. ಮೈತ್ರಿ ಪಕ್ಷದ ಜತೆ ಮುಕ್ತವಾಗಿ ಮಾತನಾಡೋಣ. ಮೈತ್ರಿ ಧರ್ಮವನ್ನು ನಾವು ಗೌರವಿಸೋಣ. ನಮ್ಮ ಹಿತದ ಬಗ್ಗೆಯೂ ಮುಕ್ತವಾಗಿ ಚರ್ಚೆ ಮಾಡೋಣ ಎಂದು ಅವರು ಹೇಳಿದರು.

ಮುಸ್ಲಿಮರಿಗೆ ಅನ್ಯಾಯ ಮಾಡಿಲ್ಲ: ಪಕ್ಷದ ಯಾವ ಮುಖಂಡನ ರಾಜಕೀಯ ಭವಿಷ್ಯ ಮಸಕು ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲರ ಹಿತ ಕಾಯುವುದು ನಮ್ಮ ಬದ್ಧತೆ. ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಮತಕ್ಕಾಗಿ ಯಾವುದೆ ಒಂದು ಸಮುದಾಯವನ್ನು ಓಲೈಕೆ ಮಾಡಲಾರೆ, ಮುಸ್ಲಿಮರಿಗೆ ನಾನು ಅನ್ಯಾಯ ಮಾಡಿಲ್ಲ. ಯಾವ ಸಮುದಾಯವನ್ನು ನಾನು ರಾಜಕೀಯ ಸ್ವಾರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X